ಸತತ ಸೋಲಿಂದ ಕೈ ನಾಯಕರಿಗೆ ಮಾನಸಿಕ ಅಸ್ವಸ್ಥತೆ: ಸಿ.ಟಿ.ರವಿ

Published : Aug 22, 2021, 07:35 AM IST
ಸತತ ಸೋಲಿಂದ ಕೈ ನಾಯಕರಿಗೆ ಮಾನಸಿಕ ಅಸ್ವಸ್ಥತೆ: ಸಿ.ಟಿ.ರವಿ

ಸಾರಾಂಶ

ರಾಷ್ಟ್ರಭಕ್ತರು, ಭಯೋತ್ಪಾದಕರಿಗೂ ವ್ಯತ್ಯಾಸ ತಿಳಿಯದ ಅಸ್ವಸ್ಥತೆ ಕಾಂಗ್ರೆಸ್‌ ನಾಯಕರಿಗೆ ಬಂದಿದೆ ಒಂದು ಕುಟುಂಬದ ಗುಲಾಮಗಿರಿಯಿಂದ ಅಥವಾ ಸತತ ಸೋಲಿನಿಂದ ಈ ಮಾನಸಿಕ ಅಸ್ವಸ್ಥತೆ ಕಾಂಗ್ರೆಸ್ ನಾಯಕರ ವಿರುದ್ಧ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವಾಗ್ದಾಳಿ

ನವದೆಹಲಿ (ಆ.22):  ರಾಷ್ಟ್ರಭಕ್ತರು, ಭಯೋತ್ಪಾದಕರಿಗೂ ವ್ಯತ್ಯಾಸ ತಿಳಿಯದ ಅಸ್ವಸ್ಥತೆ ಕಾಂಗ್ರೆಸ್‌ ನಾಯಕರಿಗೆ ಬಂದಿದೆ ಎಂದು ಟೀಕಿಸಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಒಂದು ಕುಟುಂಬದ ಗುಲಾಮಗಿರಿಯಿಂದ ಅಥವಾ ಸತತ ಸೋಲಿನಿಂದ ಈ ಮಾನಸಿಕ ಅಸ್ವಸ್ಥತೆ ಬಂದಿರಬಹುದು ಎಂದಿದ್ದಾರೆ.

ದೆಹಲಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ನನ್ನ ಮೇಲೆ ಅಕ್ರಮ ಆಸ್ತಿ ಆರೋಪ ಮಾಡುತ್ತಿದ್ದಾರೆ. ಸಾಬೀತು ಮಾಡಿದರೆ ನನ್ನ ಆಸ್ತಿಯನ್ನು ದಾನ ಮಾಡುತ್ತೇನೆ. ನಾನು ಅಕ್ರಮ ಆಸ್ತಿ ಮಾಡಿ ಜೈಲಿಗೆ ಹೋಗಿ ಜಾಮೀನು ತೆಗೆದುಕೊಂಡು ಬಂದಿಲ್ಲ ಎಂದು ಕಾಂಗ್ರೆಸ್‌ ಮುಖಂಡರ ವಿರುದ್ಧ ವಾಗ್ದಾಳಿ ನಡೆಸಿದರು.

ಕಾಂಗ್ರೆಸ್ಸಿಗರ ವಿರುದ್ಧ ಮಾನಹಾನಿ ದಾವೆ : ಸಿ.ಟಿ. ರವಿ

ಸ್ವಾತಂತ್ರ್ಯ ಹೋರಾಟ ಕಾಂಗ್ರೆಸ್‌ನ ಗುತ್ತಿಗೆ ಅಂದುಕೊಂಡಿದ್ದಾರೆ. ಕಾಂಗ್ರೆಸ್ಸೇತರ ನಾಯಕರು ಸ್ವಾತಂತ್ರ್ಯ ಹೋರಾಟಕ್ಕೆ ಕೊಡುಗೆ ನೀಡಿದ್ದಾರೆ. ಬಿಜೆಪಿ ಕೊಡುಗೆ ಏನೆಂದು ಕೇಳುತ್ತಾರೆ. ಹಾಗಿದ್ದರೆ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಬಿಜೆಪಿ ಪಾತ್ರವೇನು ಎಂದು ಪ್ರಶ್ನಿಸಿದ ಅವರು, ಹಾಗೇ ನೋಡಿದರೆ ಕಾಂಗ್ರೆಸ್‌ ಸ್ಥಾಪಕ ಎ.ಒ.ಹ್ಯೂಮ್‌ ಭಾರತಿಯನೇ ಅಲ್ಲ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!
ದ್ವೇಷ ಭಾಷಣ ಪ್ರಕರಣ; ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ಗೆ ನಿರೀಕ್ಷಣಾ ಜಾಮೀನು!