
ಕಲಬುರಗಿ (ಡಿ.10) : ಖರ್ಗೆ ಕುಟುಂಬದ ವಿರುದ್ಧ ಮಾತನಾಡುವುದನ್ನು ನಿಲ್ಲಿಸಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡುವ ಆಮಿಷ ಒಡ್ಡಲಾಗಿತ್ತು ಎಂದು ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಗಂಭೀರ ಆರೋಪ ಮಾಡಿದ್ದಾರೆ.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಖರ್ಗೆ ಕುಟುಂಬದ ವಿರುದ್ಧ ಮಾತಾಡುವುದನ್ನು ನಿಲ್ಲಿಸಿ ಕಾಂಗ್ರೆಸ್ ಪಕ್ಷಕ್ಕೆ ಬಂದರೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ಕೊಡುವುದಾಗಿ ಮಾಜಿ ಶಾಸಕ ಬಾಬೂರಾವ್ ಚಿಂಚನ್‌ಸೂರ್ ಮೂಲಕ ತಮ್ಮ ತಂದೆಯವರಿಗೆ ಸಂದೇಶ ರವಾನಿಸಲಾಗಿತ್ತು ಎಂದು ಹೇಳಿದರು.
ಸುವರ್ಣಸೌಧದಿಂದ ಸಾವರ್ಕರ್ ಫೋಟೋ ತೆಗೆಯಬೇಕು: ಸಚಿವ ಪ್ರಿಯಾಂಕ್ ಖರ್ಗೆ
ಈ ಸಂಬಂಧ ಚಿಂಚನ್‌ಸೂರ್ ತಮ್ಮ ತಂದೆಯವರ ಜೊತೆ ಮಾತನಾಡಿದ್ದಾರೆನ್ನಲಾದ ಆಡಿಯೋವನ್ನೂ ಮಣಿಕಂಠ ರಾಥೋಡ್ ಮಾಧ್ಯಮಗಳಿಗೆ ಬಿಡುಗಡೆ ಮಾಡಿದರು.
ಪ್ರಿಯಾಂಕ್ ಖರ್ಗೆ ಮತ್ತವರ ಬೆಂಬಲಿಗರು ಅಕ್ರಮ ಮರಳುಗಾರಿಕೆಯಲ್ಲಿ ತೊಡಗಿದ್ದಾರೆ. ಅವರ ವಿರುದ್ಧ ದೂರು ಸಲ್ಲಿಸಿದರೂ ಪೊಲೀಸರು ದೂರು ದಾಖಲಿಸುತ್ತಿಲ್ಲ. ಬದಲಾಗಿ ಪ್ರಿಯಾಂಕ್ ಕುಮ್ಮಕ್ಕಿನಿಂದ ತಮ್ಮ ವಿರುದ್ಧವೇ ದೂರು ದಾಖಲಿಸುತ್ತಿದ್ದಾರೆಂದು ದೂರಿದ ಮಣಿಕಂಠ್ ರಾಥೋಡ್, ಅದೆಷ್ಟೇ ದೂರುಗಳು ತಮ್ಮ ವಿರುದ್ಧ ದಾಖಲಾದರೂ ತಾವು ಹೆದರುವುದಿಲ್ಲ ಎಂದು ಹೇಳಿದರು.
ಚುನಾವಣೆ ಗೆಲ್ಲಲು ಜನರ ಹೃದಯ ಗೆಲ್ಲಬೇಕು: ಪ್ರಧಾನಿ ಮೋದಿ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ