ಗಣೇಶ್ ಬಂಧನಕ್ಕೆ ತೆರಳಿದ್ದ ಪೊಲೀಸರು ವಾಪಸ್ !

Published : Jan 30, 2019, 10:34 AM IST
ಗಣೇಶ್ ಬಂಧನಕ್ಕೆ ತೆರಳಿದ್ದ ಪೊಲೀಸರು ವಾಪಸ್ !

ಸಾರಾಂಶ

ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆ ಮಾಡಿ ನಾಪತ್ತೆಯಾಗಿರುವ ಶಾಸಕ ಗಣೇಶ್ ಸುಳಿವು ಎಲ್ಲಿಯೂ ಕೂಡ ಪತ್ತೆಯಾಗಿಲ್ಲ. ಅವರನ್ನು ಬಂಧಿಸಲು ತೆರಳಿದ್ದ ಪೊಲೀಸರು ಬರಿಗೈಯಲ್ಲಿ ವಾಪಸಾಗಿದ್ದಾರೆ. 

ರಾಮನಗರ: ವಿಜಯನಗರ ಕ್ಷೇತ್ರ ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆ ನಡೆಸಿದ ಆರೋಪಕ್ಕೆ ಒಳಗಾಗಿರುವ ಕಂಪ್ಲಿ ಶಾಸಕ ಜೆ.ಎನ್.ಗಣೇಶ್ ಅವರನ್ನು ಬಂಧಿಸಲು ತೆರಳಿದ್ದ ಬಿಡದಿ ಪೊಲೀಸರು ಬರಿಗೈಯಲ್ಲಿ ವಾಪಸ್ಸಾಗಿದ್ದಾರೆ. 

ಶಾಸಕ ಗಣೇಶ್ ಅವರನ್ನು ವಶಕ್ಕೆ ಪಡೆಯುವ ಸಲುವಾಗಿ ನಾಲ್ಕು ತನಿಖಾ ತಂಡಗಳನ್ನು ರಚನೆ ಮಾಡಲಾಗಿತ್ತು. 

ಕಳೆದ ಏಳು ದಿನಗಳಿಂದ ತನಿಖಾ ತಂಡಗಳು ಮುಂಬೈ, ಪುಣೆ, ಬೆಂಗಳೂರು ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಕಾರ್ಯಾಚರಣೆ ನಡೆಸಿತ್ತು. ಆದರೆ ತಲೆ ಮರೆಸಿಕೊಂಡಿರುವ ಶಾಸಕ ಗಣೇಶ್ ಬಗ್ಗೆ ಸುಳಿವು ಕೂಡ ಸಿಗದೆ ಪೊಲೀಸರು ಬರಿಗೈಯಲ್ಲಿ ವಾಪಸ್ ಬಂದಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ
ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್