PSI Recruitment Scam: ಕಿಂಗ್‌ಪಿನ್‌ ಸರ್ಕಾರದ ಒಳಗೂ ಇರಬಹುದು: ಪ್ರಿಯಾಂಕ್‌ ಖರ್ಗೆ

Published : May 15, 2022, 03:15 AM IST
PSI Recruitment Scam: ಕಿಂಗ್‌ಪಿನ್‌ ಸರ್ಕಾರದ ಒಳಗೂ ಇರಬಹುದು: ಪ್ರಿಯಾಂಕ್‌ ಖರ್ಗೆ

ಸಾರಾಂಶ

ಪಿಎಸ್‌ಐ ನೇಮಕಾತಿ ಅಕ್ರಮದಲ್ಲಿ ದಿವ್ಯಾಹಾಗರಗಿ, ಆರ್‌.ಡಿ. ಪಾಟೀಲ್‌ ಕಿಂಗ್‌ಪಿನ್‌ ಎಂಬುವುದನ್ನು ಒಪ್ಪುವುದಿಲ್ಲ. ಸಣ್ಣವರನ್ನೇ ಬಂಧಿಸಿ ದೊಡ್ಡದಾಗಿ ಸಾಧಿಸಿದವರಂತೆ ಸರ್ಕಾರ ಬಿಂಬಿಸಿಕೊಳ್ಳುತ್ತಿದೆ. ಕಿಂಗ್‌ಪಿನ್‌ಗಳು ಬೆಂಗಳೂರಲ್ಲಿ ಇದ್ದಾರೆ. ಅವರು ಸರ್ಕಾರದ ಒಳಗೂ ಇರಬಹುದು ಎಂದು ಶಾಸಕ ಪ್ರಿಯಾಂಕ ಖರ್ಗೆ ಹೇಳಿದ್ದಾರೆ.

ಕಲಬುರಗಿ (ಮೇ.15): ಪಿಎಸ್‌ಐ ನೇಮಕಾತಿ ಅಕ್ರಮದಲ್ಲಿ (PSI Recruitment Scam) ದಿವ್ಯಾಹಾಗರಗಿ, ಆರ್‌.ಡಿ. ಪಾಟೀಲ್‌ ಕಿಂಗ್‌ಪಿನ್‌ ಎಂಬುವುದನ್ನು ಒಪ್ಪುವುದಿಲ್ಲ. ಸಣ್ಣವರನ್ನೇ ಬಂಧಿಸಿ ದೊಡ್ಡದಾಗಿ ಸಾಧಿಸಿದವರಂತೆ ಸರ್ಕಾರ (Government) ಬಿಂಬಿಸಿಕೊಳ್ಳುತ್ತಿದೆ. ಕಿಂಗ್‌ಪಿನ್‌ಗಳು ಬೆಂಗಳೂರಲ್ಲಿ (Bengaluru) ಇದ್ದಾರೆ. ಅವರು ಸರ್ಕಾರದ ಒಳಗೂ ಇರಬಹುದು ಎಂದು ಶಾಸಕ ಪ್ರಿಯಾಂಕ ಖರ್ಗೆ (Priyank Kharge) ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರಿಯಾದ ರೀತಿಯಲ್ಲಿ ತನಿಖೆ ನಡೆಯುತ್ತಿಲ್ಲ. 

ಹಣ ವರ್ಗಾವಣೆಯಾದ ಹಿನ್ನೆಲೆ ಹಾಗೂ ತಲುಪಿದ ಜಾಗದ ಬಗ್ಗೆ ಮಾಹಿತಿ ಕಲೆ ಹಾಕಿದಾಗ ಅಸಲಿ ಕಿಂಗ್‌ಪಿನ್‌ ಯಾರೆಂಬುದು ಹೊರಬರುತ್ತದೆ ಎಂದರು. ಹಗರಣದಲ್ಲಿ ಪ್ರಿಯಾಂಕ್‌ ಖರ್ಗೆ ಅವರ ಸುತ್ತಮುತ್ತಲಿನವರು ಇದ್ದಾರೆ ಎಂದು ಗೃಹ ಸಚಿವರು ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಗೃಹ ಸಚಿವರಿಗೆ ಮಾಹಿತಿ ಕೊರತೆ ಇದೆ, ನಾವು ಭಾಗಿಯಾಗಿರುವ ಬಗ್ಗೆ ಸರ್ಕಾರಕ್ಕೆ ಎಲ್ಲಾ ಮಾಹಿತಿ ಇದ್ದರೆ ನಮ್ಮನ್ನೇ ಬಂಧಿಸಲಿ. ಗೃಹ ಸಚಿವರು ಇದರಲ್ಲಿ ಭಾಗಿಯಾಗಿದ್ದಾರೆ ಎಂದು ನಾನು ಹೇಳಲಾರೆ. ಆದರೆ ಯಾರನ್ನೋ ರಕ್ಷಿಸಲು ಹೋಗಿ ಅವರು ಹರಕೆಯ ಕುರಿಯಾಗುತ್ತಿದ್ದಾರೆ ಎಂದರು.

PSI Recruitment Scam: ಪೊಲೀಸ್‌ ನೇಮಕಾತಿ ವಿಭಾಗದ ಡಿವೈಎಸ್ಪಿ ಬಂಧನ

ಸರ್ಕಾರಕ್ಕೆ ತಾಕತ್ತಿನ ಸವಾಲು ಹಾಕಿದ ಪ್ರಿಯಾಂಕ್ ಖರ್ಗೆ: ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಕಾಂಗ್ರೆಸ್‌ ಶಾಸಕ ಪ್ರಿಯಾಂಕ್‌ ಖರ್ಗೆಗೆ ಸಿಐಡಿ 3ನೇ  ನೋಟಿಸ್‌ ನೀಡಿದೆ. ಕಲಬುರಗಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಬಿಡುಗಡೆ ಮಾಡಿದ ಆಡಿಯೋ ಕ್ಲಿಪ್ಪಿಂಗ್‌ ಹಾಗೂ ಇತರೆ ಸಾಕ್ಷ್ಯಾಧಾರಗಳನ್ನು ಒದಗಿಸುವಂತೆ ಸಿಐಡಿ ನೋಟಿಸ್‌ ನೀಡಿದೆ. ಈ ನೋಟಿಸ್‌ ಸ್ವೀಕರಿಸಿದ ಎರಡು ದಿನದೊಳಗೆ ತನಿಖಾಧಿಕಾರಿ ಮುಂದೆ ಹಾಜರಾಗಿ ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣದ ಕುರಿತು ಹೇಳಿಕೆ ದಾಖಲಿಸುವಂತೆ ಪ್ರಿಯಾಂಕ ಖರ್ಗೆ ಅವರಿಗೆ ಡಿವೈಎಸ್ಪಿ ನರಸಿಂಹಮೂರ್ತಿ ಸೂಚಿಸಿದ್ದಾರೆ. ಎರಡು ನೋಟಿಸ್ ನೀಡಿದ್ರು ಪ್ರಿಯಾಂಕ್ ಖರ್ಗೆ ವಿಚಾರಣೆಗೆ ಹೋಗಿರಲಿಲ್ಲ. 

ಇದೀಗ ಮೂರನೇ ನೋಟಿಸ್ ನೀಡಿರುವ ಬಗ್ಗೆ ಪ್ರತಿಕ್ರಿಯಿಸಿರುವ ಪ್ರಿಯಾಂಕ್ ಖರ್ಗೆ, ಸರ್ಕಾರಕ್ಕೆ ಒಂದು ನೇರ ಸವಾಲು ಹಾಕಿದ್ದಾರೆ. ಹೌದು....ಸಾಮಾಜಿ ಜಾಲತಾಣಗಳ ಮೂಲಕ ಸರ್ಕಾರಕ್ಕೆ ತಾಕತ್ತಿನ ಸವಾಲು ಹಾಕಿರುವ ಅವರು, 58 ಸಾವಿರ ಯುವಕರ ಭವಿಷ್ಯಕ್ಕಾಗಿ  ಪ್ರತಿದಿನ ಸಿಐಡಿಗೆ ಉತ್ತರಿಸಲು ನಾನು ಸಿದ್ಧ!  ಸರ್ಕಾರದ ಒತ್ತಡ ಮೆಟ್ಟಿ ನಿಲ್ಲಲು ನಾನು ಸಿದ್ಧ!  ತಪ್ಪಿತಸ್ಥರ ವಿರುದ್ಧ ಸಾಕ್ಷಿ ಒದಗಿಸಲು ನಾನು ಸಿದ್ಧ! ಆದರೆ, ಕೋಟಿ ಕೋಟಿ ಲಂಚ ಹೊಡೆದ ಆರೋಪಿಗಳನ್ನು ಬಂಧಿಸುವ ತಾಕತ್ ಈ ಸರ್ಕಾರಕ್ಕೆ ಇದಿಯಾ? ಎಂದು ಪ್ರಶ್ನೆ ಮಾಡುವ ಮೂಲಕ ಸವಾಲು ಹಾಕಿದ್ದಾರೆ. ಈ ಹಿಂದೆ ಕೂಡ ಎರಡು ಬಾರಿ ಸಿಐಡಿ ಪ್ರಿಯಾಂಕ್ ಖರ್ಗೆಯವರಿಗೆ ನೋಟಿಸ್‌ ಜಾರಿಗೊಳಿಸಿತ್ತು. 

PSI Recruitment Scam: ಮಾಜಿ ಪ್ರಧಾನಿ ದೇವೇಗೌಡರ ಭದ್ರತೆಯಲ್ಲಿದ್ದವನ ‘ಪಿಎಸ್‌ಐ’ ಕಳ್ಳಾಟ

ನೋಟಿಸ್ ಸ್ವೀಕರಿಸಿದ್ದರೂ ವಿಚಾರಣೆಗೆ ಹಾಜರಾಗಲು ಖರ್ಗೆ ನಿರಾಕರಿಸಿದ್ದರು. ಇದೀಗ ಮತ್ತೆ ಸಿಐಡಿ ನೋಟಿಸ್‌ ನೀಡಿದ್ದು, ಈಗಲಾದರೂ ವಿಚಾರಣೆಗೆ ಮಾಜಿ ಸಚಿವ ಪ್ರಿಯಾಂಕ ಖರ್ಗೆ ಹಾಜರಾಗಲಿದ್ದಾರೆಯೇ ಎಂಬುದನ್ನು ಕಾದು ನೋಡಬೇಕಿದೆ. ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಬುರಗಿಯಲ್ಲಿ ಸುದ್ದಿಗೋಷ್ಠಿ ನಡೆಸಿದ್ದ ಪ್ರಿಯಾಂಕ್‌ ಖರ್ಗೆ ಆಡಿಯೋ ಕ್ಲಿಪ್‌ ಒಂದನ್ನು ಬಿಡುಗಡೆ ಮಾಡಿದ್ದರು. ಆ ವಿಚಾರಕ್ಕೆ ಸಂಬಂಧಿಸಿದಂತೆ ಏಪ್ರಿಲ್‌ 25ಕ್ಕ್ಕೆ ಹಾಜರಾಗಿ ಸಾಕ್ಷಿಗಳನ್ನು ಒದಗಿಸಿ ಎಂದು ಏಪ್ರಿಲ್‌ 24ರಂದು ಸಿಐಡಿ ನೋಟಿಸ್‌ ನೀಡಿತ್ತು. ಆದರೆ, ಪ್ರಿಯಾಂಕ್‌ ಖರ್ಗೆ ಸಿಐಡಿ ಮುಂದೆ ಹಾಜರಾಗದೇ ಏಪ್ರಿಲ್‌ 28ರಂದು 4 ಪುಟಗಳ ದೀರ್ಘ ಲಿಖಿತ ಉತ್ತರವನ್ನು ನೀಡಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಅಂಕಣ | ರಾಜ್ಯದಲ್ಲಿ ಕಾಂಗ್ರೆಸ್‌ನಿಂದ ಉದ್ಯೋಗದ ನವಯುಗ!
ಗ್ರಾಪಂ ಅಧ್ಯಕ್ಷರೂ ಮತ್ತು ಹಸಿರು ಪೆನ್ನೂ...!