'ಚಾಮರಾಜನಗರದಲ್ಲಿ ಸತ್ತದ್ದು 24 ಅಲ್ಲ, 34 ಮಂದಿ: ಅಧಿಕಾರಿಗಳು ಮಾಹಿತಿ ಮುಚ್ಚಿಟ್ಟಿದ್ದಾರೆ'

By Suvarna News  |  First Published May 3, 2021, 5:31 PM IST

ಚಾಮರಾಜನಗರ ಜಿಲ್ಲಾಸ್ಪತ್ರೆಗಳಲ್ಲಿ ಕೊರೋನಾ ರೋಗಿಗಳ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕರೊಬ್ಬರು ಗಂಭೀರ ಆರೋಪವೊಂದನ್ನು ಮಾಡಿದ್ದಾರೆ.


ಚಾಮರಾಜನಗರ, (ಮೇ.03): ಚಾಮರಾಜನಗರ ಜಿಲ್ಲೆಯಲ್ಲಿ 24 ಗಂಟೆಗಳಲ್ಲಿ 24 ರೋಗಿಗಳು ಆಕ್ಸಿಜನ್ ಕೊರತೆಯಿಂದ ಸಾವಪ್ಪಿರುವ ದುರ್ಘಟನೆ ನಡೆದಿದೆ. 

ಇನ್ನು ಈ ಬಗ್ಗೆ ಇಂದು (ಸೋಮವಾರ) ಚಾಮರಾಜನಗರ ಶಾಸಕ ಸಿ.ಪುಟ್ಟರಂಗಶೆಟ್ಟಿ ಪ್ರತಿಕ್ರಿಯಿಸಿದ್ದು, ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್​ ಕೊರತೆಯಿಂದ ಸತ್ತದ್ದು 24 ರೋಗಿಗಳಲ್ಲ, 34 ಜನ. ಅಧಿಕಾರಿಗಳು ಸತ್ಯ ಮುಚ್ಚಿಟ್ಟಿದ್ದಾರೆ. ಖಚಿತ ಮಾಹಿತಿಯನ್ನು ಕೊಟ್ಟಿಲ್ಲ ಗಂಭೀರ ಆರೋಪ ಮಾಡಿದರು.

Tap to resize

Latest Videos

undefined

ಚಾಮರಾಜನಗರ ಆಸ್ಪತ್ರೆ ದುರಂತ: ಆಕ್ಸಿಜನ್‌ನಿಂದ ಸತ್ತಿಲ್ಲ ಎಂದು ಸರ್ಟಿಫಿಕೇಟ್ ಕೊಟ್ಟ ಸಚಿವರು

ಆರೋಗ್ಯ ಸಚಿವರು ಕೇವಲ 3 ಮಂದಿ ಎಂದು ಸುಳ್ಳು ಮಾಹಿತಿ ನೀಡುತ್ತಿದ್ದಾರೆ. 24 ಮಂದಿ ಹೊರತುಪಡಿಸಿ ಉಳಿದ 10 ಮಂದಿಯ ಹೆಸರು ಪಟ್ಟಿಯಲ್ಲಿ ಇಲ್ಲ. ಅಧಿಕಾರಿಗಳು ಸಚಿವರಿಗೆ ಸರಿಯಾದ ಮಾಹಿತಿ ನೀಡಿಲ್ಲ. ಈ ಘೋರ ದುರಂತದ ಬಗ್ಗೆ ಉನ್ನತಮಟ್ಟದಲ್ಲಿ ತನಿಖೆ ಆಗಬೇಕು. ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು. ಸತ್ತವರ ಕುಟಂಬಗಳಿಗೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

ಭಾನುವಾರ ರಾತ್ರಿ ಆಕ್ಸಿಜನ್​ ಕೊರತೆಯಿಂದ ಚಾಮರಾಜನಗರ ಆಸ್ಪತ್ರೆಯಲ್ಲಿ 20ಕ್ಕೂ ಹೆಚ್ಚು ಕರೊನಾ ಸೋಂಕಿತರು ಸತ್ತಿದ್ದಾರೆ. 2 ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ಯುವಕನೂ ಮೃತಪಟ್ಟಿದ್ದಾನೆ. ಈ ಘಟನೆ ಇಡೀ ರಾಜ್ಯವನ್ನೇ ತಲ್ಲಣಗೊಳಿಸಿದೆ. ಇತ್ತ ಪ್ರತಿಷ್ಠೆಗೆ ಅಮಾಯಕರು ಬಲಿಯಾಗಿದ್ದಾರೆ ಎಂಬ ಆರೋಪವೂ ಕೇಳಿ ಬಂದಿದೆ.

click me!