ಗೌರ್ನರ್‌ ವಾಪಸ್‌ಗೆ ರಾಷ್ಟ್ರಪತಿಗೆ ಒತ್ತಡ ತನ್ನಿ: ಕಾಂಗ್ರೆಸ್‌ ಶಾಸಕರ ಬೇಡಿಕೆ

By Kannadaprabha News  |  First Published Aug 23, 2024, 11:27 AM IST

ರಾಷ್ಟ್ರಪತಿ ಬಳಿಗೆ ನಿಯೋಗ ಒಯ್ಯಬೇಕು ಎಂಬ ಬಗ್ಗೆ ಹೈಕಮಾಂಡ್ ಜತೆ ಚರ್ಚಿಸುವೆ. ಹೈಕಮಾಂಡ್ ಸಲಹೆಯಂತೆ ತೀರ್ಮಾನ ಕೈಗೊಳ್ಳಲಾಗುವುದು ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ 


ಬೆಂಗಳೂರು(ಆ.23): ರಾಜ್ಯ ಸರ್ಕಾರದ ವಿರುದ್ಧ ಪ್ರಾಸಿಕ್ಯೂಷನ್ ಅಸ್ತ್ರ ಪ್ರಯೋಗಿಸುತ್ತಿರುವ ರಾಜ್ಯಪಾಲ ಗೆಹಲೋತ್ ಅವರನ್ನು ಹಿಂದಕ್ಕೆ ಕರೆಸಿಕೊಳ್ಳಬೇಕೆಂದು ಆಗ್ರಹಿಸಿ ರಾಷ್ಟ್ರಪತಿ ಬಳಿಗೆ ನಿಯೋಗ ಕೊಂಡೊಯ್ಯಲು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಆಗ್ರಹಿಸಿದೆ. 

ಈ ಒತ್ತಾಸೆ ಹಾಗೂ ಒತ್ತಾಯಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಷ್ಟ್ರಪತಿ ಬಳಿಗೆ ನಿಯೋಗ ಒಯ್ಯಬೇಕು ಎಂಬ ಬಗ್ಗೆ ಹೈಕಮಾಂಡ್ ಜತೆ ಶುಕ್ರವಾರ ಚರ್ಚಿಸುವೆ. ಹೈಕಮಾಂಡ್ ಸಲಹೆಯಂತೆ ತೀರ್ಮಾನ ಕೈಗೊಳ್ಳಲಾಗುವುದು ಎಂದರು. 

Tap to resize

Latest Videos

ಅಸ್ತ್ರಕ್ಕೆ ಪ್ರತ್ಯಸ್ತ್ರ: ಕುಮಾರಸ್ವಾಮಿ ಸೇರಿ ವಿಪಕ್ಷ ನಾಯಕರ ಪ್ರಾಸಿಕ್ಯೂಷನ್‌ಗೆ ಸಂಪುಟ ಒತ್ತಡ

ಇದಕ್ಕೂ ಮುನ್ನ ರಾಜ್ಯಪಾಲರು ಮುಖ್ಯಮಂತ್ರಿಯವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿಸಿರುವುದನ್ನು ಖಂಡಿಸಿ ಶಾಸಕರು ಸರ್ವಾನುಮತ ನಿರ್ಣಯ ಕೈಗೊಂಡರು. ಜೊತೆಗೆ ಪ್ರಾಸಿಕ್ಯೂಷನ್ ವಿಚಾರದಲ್ಲಿ ವಿವೇಚನಾರಹಿತ ನಿರ್ಧಾರ ಹಾಗೂ ತಾರತಮ್ಯ ಧೋರಣೆ ಅನುಸರಿಸಿರುವ ರಾಜ್ಯಪಾಲರನ್ನು ವಾಪಸ್ ಕರೆಸಿಕೊಳ್ಳುವಂತೆ ರಾಷ್ಟ್ರಪತಿಗಳ ಬಳಿಗೆ ನಿಯೋಗ ತೆರಳಿ ಒತ್ತಡ ಹಾಕೋಣ ಎಂದು ಶಾಸಕರೆಲ್ಲರೂ ಒಮ್ಮತದ ಆಗ್ರಹ ವ್ಯಕ್ತಪಡಿಸಿದ

click me!