ಬಿಜೆಪಿ ನಾಯಕರ ವಿರುದ್ಧ ಸಾಕಷ್ಟು ಆರೋಪಗಳಿವೆ. ಆದರೆ ಕೇಂದ್ರದ ತನಿಖಾ ಸಂಸ್ಥೆಗಳು ಆ ಕುರಿತು ಕ್ರಮ ಕೈಗೊಂಡಿಲ್ಲ. ಈ ತನಿಖಾ ಸಂಸ್ಥೆಗಳು ಕೇಂದ್ರದ ಅಣತಿಯಂತೆ ಕೆಲಸ ಮಾಡುತ್ತಿವೆ. ನಾವು ಕಾನೂನಿನ ಮೂಲಕ ಎಲ್ಲವನ್ನೂ ಎದುರಿಸುತ್ತೇವೆ. ಕೇಂದ್ರದ ಇಂಥ ಧೋರಣೆಗೆ ಜನ ಮನ್ನಣೆ ನೀಡಬಾರದು. ಬಡವರ ಕಾಂಗ್ರೆಸ್ ಸರ್ಕಾರಕ್ಕೆ ಜನರ ಬೆಂಬಲ ಬೇಕು ಎಂದ ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ
ಎಚ್.ಡಿ.ಕೋಟೆ(ನ.13): ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ. ಇ.ಡಿ, ಸಿಬಿಐ, ಐಟಿ ಎಲ್ಲವೂ ಕೇಂದ್ರ ಸರ್ಕಾರದ ಕೈಗೊಂಬೆಯಾಗಿದೆ. ಕೋರ್ಟ್ ಗಳು ಕೂಡ ಕೇಂದ್ರ ಸರ್ಕಾರದ ಮಾತನ್ನು ಕೇಳುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಮೈಸೂರು ಜಿಲ್ಲೆ ಎಚ್.ಡಿ.ಕೋಟೆಯ ಕಾಠ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಮೇಲೆ ಸುಳ್ಳು ಆರೋಪ ಮಾಡಿ ಸಿಲುಕಿಸಬೇಕು ಅನ್ನುವ ಪ್ರಯತ್ನ ನಡೆಸುತ್ತಿದ್ದಾರೆ. ನಮಗೆ ತನಿಖೆ ಭಯ ಇಲ್ಲ. ಪ್ರಶ್ನೆ ಮಾಡುವವರು ಇಲ್ಲದಿದ್ದರೆ ಅವರದ್ದೇ ಆಟ. ಇದರಿಂದ ಪ್ರಜಾಪ್ರಭುತ್ವದ ಕೊಲೆ ಮಾಡಿದಂತಾಗುತ್ತಿದೆ, ಇದೇ ರೀತಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮುಂದುವರಿದರೆ ಪ್ರಜಾಪ್ರಭುತ್ವವನ್ನು ಕಾಣದ ಸ್ಥಿತಿ ಎದುರಾಗುತ್ತದೆ ಎಂದು ಬೇಸರ ವ್ಯಕ್ತಪಡಿಸಿದರು.
ಬಿಜೆಪಿ ನಾಯಕರ ವಿರುದ್ಧ ಸಾಕಷ್ಟು ಆರೋಪಗಳಿವೆ. ಆದರೆ ಕೇಂದ್ರದ ತನಿಖಾ ಸಂಸ್ಥೆಗಳು ಆ ಕುರಿತು ಕ್ರಮ ಕೈಗೊಂಡಿಲ್ಲ. ಈ ತನಿಖಾ ಸಂಸ್ಥೆಗಳು ಕೇಂದ್ರದ ಅಣತಿಯಂತೆ ಕೆಲಸ ಮಾಡುತ್ತಿವೆ. ನಾವು ಕಾನೂನಿನ ಮೂಲಕ ಎಲ್ಲವನ್ನೂ ಎದುರಿಸುತ್ತೇವೆ. ಕೇಂದ್ರದ ಇಂಥ ಧೋರಣೆಗೆ ಜನ ಮನ್ನಣೆ ನೀಡಬಾರದು. ಬಡವರ ಕಾಂಗ್ರೆಸ್ ಸರ್ಕಾರಕ್ಕೆ ಜನರ ಬೆಂಬಲ ಬೇಕು ಎಂದರು.