Mekedatu Project: ರಾಜ್ಯಸಭೆಯಲ್ಲಿ ಧ್ವನಿಯೆತ್ತಿದ ಕಾಂಗ್ರೆಸ್‌

Published : Mar 15, 2022, 05:55 AM IST
Mekedatu Project: ರಾಜ್ಯಸಭೆಯಲ್ಲಿ ಧ್ವನಿಯೆತ್ತಿದ ಕಾಂಗ್ರೆಸ್‌

ಸಾರಾಂಶ

*  ಕೇಂದ್ರ ತನ್ನ ನಿಲುವು ಸ್ಪಷ್ಟಪಡಿಸಲು ಜಿ.ಸಿ.ಚಂದ್ರಶೇಖರ್‌ ಒತ್ತಾಯ *  ಪ್ರಧಾನಿ ಭೇಟಿಯಾಗಿ ಕುಡಿಯುವ ನೀರಿನ ಯೋಜನೆ ಪ್ರಾಮುಖ್ಯತೆ ಬಗ್ಗೆ ವಿವರಿಸಲು ತೀರ್ಮಾನ *  ಕುಡಿಯುವ ನೀರಿನ ಅಗತ್ಯಕ್ಕಾಗಿ ಮೇಕೆದಾಟು ಯೋಜನೆ ಅನುಷ್ಠಾನ   

ನವದೆಹಲಿ(ಮಾ.15):  ಮೇಕೆದಾಟು ಯೋಜನೆ(Mekedatu Project) ಅನುಷ್ಠಾನಕ್ಕೆ ಒತ್ತಾಯಿಸಿ ರಾಜ್ಯದಲ್ಲಿ ಪಾದಯಾತ್ರೆ ಹೋರಾಟ ನಡೆಸಿದ್ದ ಕಾಂಗ್ರೆಸ್‌ ಪಕ್ಷ ಇದೀಗ ರಾಜ್ಯಸಭೆಯಲ್ಲೂ(Rajya Sabha) ಈ ಬಗ್ಗೆ ಧ್ವನಿಯೆತ್ತಿದ್ದು ಈ ವಿಚಾರವಾಗಿ ಕೇಂದ್ರ ಸರ್ಕಾರದ(Central Governement) ನಿಲುವೇನು ಎಂದು ಪ್ರಶ್ನಿಸಿದೆ. ಮಾತ್ರವಲ್ಲದೆ ಕಾಂಗ್ರೆಸ್‌ ಸಂಸದರ ನಿಯೋಗ ಪ್ರಧಾನಿಯನ್ನು ಭೇಟಿಯಾಗಿ ಕುಡಿಯುವ ನೀರಿನ ಯೋಜನೆ ಪ್ರಾಮುಖ್ಯತೆ ಬಗ್ಗೆ ವಿವರಿಸಲು ತೀರ್ಮಾನಿಸಿದೆ.

ಸೋಮವಾರ ರಾಜ್ಯಸಭೆಯಲ್ಲಿ ಮೇಕೆದಾಟು ವಿಚಾರ ಪ್ರಸ್ತಾಪಿಸಿದ ಸಂಸದ ಜಿ.ಸಿ.ಚಂದ್ರಶೇಖರ್‌, ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಬೆಂಗಳೂರು(Bengaluru) ಮಹಾನಗರದ ಇಂದಿನ ಜನಸಂಖ್ಯೆ ಸುಮಾರು 1.3 ಕೋಟಿ ಇದೆ. ಪ್ರಸ್ತುತ ಮಹಾನಗರಕ್ಕೆ 50 ಟಿಎಂಸಿ ನೀರಿನ ಅಗತ್ಯ ಇದ್ದರೂ ಲಭ್ಯವಿರುವುದು ಕೇವಲ 17 ಟಿಎಂಸಿ ಮಾತ್ರ. ಹೀಗಾಗಿ ಕುಡಿಯುವ ನೀರಿನ(Drinking Water) ಅಗತ್ಯಕ್ಕಾಗಿ ನಾವು ಮೇಕೆದಾಟು ಯೋಜನೆಯನ್ನು ಅನುಷ್ಠಾನಕ್ಕೆ ತರಲು ಇಚ್ಛಿಸುತ್ತೇವೆ. ಇದೇ ವೇಳೆ ತಮಿಳುನಾಡು ನೆರೆ ರಾಜ್ಯಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆಯೇ ಕಾವೇರಿ ನದಿಗೆ ಅಡ್ಡಲಾಗಿ 3 ಜಲವಿದ್ಯುತ್‌ ಯೋಜನೆಗಳನ್ನು ಮಾಡಲು ಅನುಮತಿ ನೀಡಲಾಗಿದೆ. ಆದರೆ ಕರ್ನಾಟಕದಲ್ಲಿ ಮಾತ್ರ ಕುಡಿಯುವ ನೀರಿನ ಯೋಜನೆಗೆ ಅಡ್ಡಗಾಲು ಹಾಕಲಾಗುತ್ತಿದೆ. ಹೀಗಿರುವಾಗ ಮೇಕೆದಾಟು ಯೋಜನೆ ಬಗ್ಗೆ ಕೇಂದ್ರ ಸರ್ಕಾರದ ನಿಲುವೇನು ಎಂಬುದನ್ನು ತಿಳಿಸಬೇಕು. ಯಾಕೆಂದರೆ ಇದು ಕುಡಿಯುವ ನೀರಿನ ಯೋಜನೆಯಾಗಿದ್ದು ಕುಡಿಯುವ ನೀರಿನ ಯೋಜನೆಯ ಮಹತ್ವ ಏನೆಂದು ಇಡೀ ಪ್ರಪಂಚಕ್ಕೆ ಗೊತ್ತು ಎಂದು ಹೇಳಿದರು.

ಮೇಕೆದಾಟು ಯೋಜನೆ, ಕೇಂದ್ರ ಸಚಿವರ ಹೇಳಿಕೆಗೆ ಡಿಕೆ ಬ್ರದರ್ಸ್ ಕಿಡಿ

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದ(Karnataka) ಕಾಂಗ್ರೆಸ್‌(Congress) ಮತ್ತು ಸಮಾನ ಮನಸ್ಕ ಸಂಸದರ ನಿಯೋಗ ಪ್ರಧಾನಿ ಮೋದಿಯವರನ್ನು(Narendra Modi) ಭೇಟಿ ಮಾಡಿ, ಕುಡಿಯುವ ನೀರಿನ ಯೋಜನೆಗೆ ಕೇಂದ್ರ ಸರ್ಕಾರ ಮಾಡುತ್ತಿರುವ ತಾರತಮ್ಯ ಕುರಿತು ಅರಿಕೆ ಮಾಡಲಾಗುವುದು. ಇದೇ ಅಧಿವೇಶನದಲ್ಲಿ ನಮ್ಮ ನಿಯೋಗ ಭೇಟಿ ಮಾಡಿ, ಮನವಿ ಮಾಡಲಿದೆ ಎಂದು ತಿಳಿಸಿದರು.

ಮೇಕೆದಾಟು ಯೋಜನೆಗೆ ಕೇಂದ್ರದಿಂದಲೇ 'ವಿವಾದ' ಪದ ಬಳಕೆ, ಕುಮಾರಸ್ವಾಮಿ ಆಕ್ರೋಶ

ಬೆಂಗಳೂರು: ಮೇಕೆದಾಟು ಯೋಜನೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜಕೀಯ ನಾಯಕರ ಆರೋಪ-ಪ್ರತ್ಯಾರೋಪಗಳು ನಡೆಯುತ್ತಲೇ ಇವೆ. ಈ ಬಗ್ಗೆ ಟ್ವೀಟ್ ಮಾಡಿದ್ದ ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿ(HD Kumaraswamy),  ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಮೇಕೆದಾಟು ಯೋಜನೆ ಬಗ್ಗೆ ಕೇಂದ್ರವೇ ಎರಡು ರಾಜ್ಯಗಳ ನಡುವಿನ 'ವಿವಾದ' ಎನ್ನುವ ಪದವನ್ನು ಬಳಕೆ ಮಾಡಿದೆ ಎಂದು ಅರೋಪಿಸಿದ್ದರು. 

ಮೇಕೆದಾಟು ಯೋಜನೆ 'ವಿವಾದ'ವನ್ನು ಕರ್ನಾಟಕ-ತಮಿಳುನಾಡು ಪರಸ್ಪರ ಚರ್ಚೆ ನಡೆಸುವ ಮೂಲಕ ಬಗೆಹರಿಸಿಕೊಳ್ಳುವಂತೆ ಕೇಂದ್ರ ಜಲಸಂಪನ್ಮೂಲ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್‌ ಹೇಳಿದ್ದಾರೆ. ಅವರೇ ʼವಿವಾದʼ ಎನ್ನುವ ಮೂಲಕ ನಮ್ಮ ಜನರ ಕುಡಿಯುವ ನೀರಿನ ಯೋಜನೆಗೆ ʼಬಿಕ್ಕಟ್ಟಿನ ಲೇಪನʼ ಹಚ್ಚಿದ್ದಾರೆ ಎಂದು ಕುಮಾರಸ್ವಾಮಿ ಕಿಡಿಕಾರಿದ್ದರು. 

Mekedatu ಮಧ್ಯಪ್ರವೇಶಕ್ಕೆ ಕೇಂದ್ರ ಸಿದ್ಧ: ಕೇಂದ್ರ ಸಚಿವ ಶೆಖಾವತ್‌

'ಎರಡೂ ರಾಜ್ಯಗಳು ಕುಳಿತು ಚರ್ಚೆ ಮಾಡಿಕೊಂಡು ಒಮ್ಮತಕ್ಕೆ ಬರಬೇಕು ಎಂದು ಕೇಂದ್ರ ಸಚಿವರೇ ಹೇಳುವ ಮೂಲಕ, ʼಮೇಕೆದಾಟು ಯೋಜನೆಗೆ ಒಕ್ಕೂಟ‌ ವ್ಯವಸ್ಥೆಯ ಆಶಯಕ್ಕೆ ತಕ್ಕಂತೆ ಕಾನೂನಾತ್ಮಕ ಅನುಮತಿ ನೀಡುವ ಹೊಣೆಗಾರಿಕೆಯಿಂದ ಕೇಂದ್ರ ಸರಕಾರ ನುಣುಚಿಕೊಳ್ಳುತ್ತಿದೆʼ ಎನ್ನುವುದು ನನ್ನ ಸ್ಪಷ್ಟ ಅಭಿಪ್ರಾಯ ಎಂದಿದ್ದರು. 

ಮುಂಗಡ ಪತ್ರದಲ್ಲಿ ಯೋಜನೆಗೆ 1,000 ಕೋಟಿ ರೂ. ಕೊಟ್ಟೆವು ಎಂದು ಬಿಜೆಪಿ ಹಾಗೂ ನಮ್ಮ ಪಾದಯಾತ್ರೆಯಿಂದಲೇ ಹಣ ಘೋಷಿಸಲಾಯಿತು ಎಂದು ಕಾಂಗ್ರೆಸ್‌ ಕುಣಿಯುತ್ತಿವೆ. ಒಂದೇ ನಾಣ್ಯದ ಎರಡು ಮುಖಗಳಾದ ಎರಡೂ ರಾಷ್ಟ್ರೀಯ ಪಕ್ಷಗಳು, ಈಗ ಮೇಕೆದಾಟು ಇಟ್ಟುಕೊಟ್ಟುಕೊಂಡು ʼಚುನಾವಣಾ ಆಟʼ ಶುರು ಮಾಡಿವೆ. ವಾಸ್ತವ ಏನು ಎಂಬುದನ್ನು ನಾನು ಬಹಳ ಹಿಂದೆಯೇ ಹೇಳಿದ್ದೆ. ಕೇಂದ್ರದ ಕಾನೂನು ಸುಳಿಯಲ್ಲಿ ಸಿಕ್ಕಿರುವ ಹಾಗೂ ಕೇಂದ್ರದ ಜಲ ಆಯೋಗ (CWC)ದಲ್ಲಿ ಕೊಳೆಯುತ್ತಿರುವ ಮೇಕೆದಾಟು ಯೋಜನೆಯು ಪಾದಯಾತ್ರೆಯಿಂದ ಬರುವುದಿಲ್ಲ. ಕೇಂದ್ರ ಸರಕಾರದ ಮೇಲೆ ಒತ್ತಡ ಹಾಕಿಯೇ ತಂದುಕೊಳ್ಳಬೇಕು ಎಂದಿದ್ದೆ ಎಂದು ಹೇಳಿದ್ದರು. 
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ದಶದಿಕ್ಕುಗಳಿಂದ ಕರ್ನಾಟಕಕ್ಕೆ ಡ್ರಗ್ಸ್‌ ಗಂಡಾಂತರ
Karnataka News Live: ಮಧುಗಿರಿ - ಕದ್ದ ಎಟಿಎಂ ಭಾರ ಇದೆ ಎಂದು ರಸ್ತೆಯಲ್ಲೇ ಬಿಟ್ಟು ಹೋದರು