ಕಾಂಗ್ರೆಸ್ ಗ್ಯಾರಂಟಿಗಳಿಂದ ಮಹಿಳೆಯರು ದಾರಿ ತಪ್ಪುತ್ತಿದ್ದಾರೆಂಬ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿಕೆ ಖಂಡಿಸಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿದ್ದ ಸಭೆಯಲ್ಲಿ ಹೈಡ್ರಾಮಾ ಮಾಡಿದ ಘಟನೆ ಸೋಮವಾರ ನಗರದಲ್ಲಿ ನಡೆದಿದೆ.
ತುಮಕೂರು (ಏ.16) : ಕಾಂಗ್ರೆಸ್ ಗ್ಯಾರಂಟಿಗಳಿಂದ ಮಹಿಳೆಯರು ದಾರಿ ತಪ್ಪುತ್ತಿದ್ದಾರೆಂಬ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿಕೆ ಖಂಡಿಸಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿದ್ದ ಸಭೆಯಲ್ಲಿ ಹೈಡ್ರಾಮಾ ಮಾಡಿದ ಘಟನೆ ಸೋಮವಾರ ನಗರದಲ್ಲಿ ನಡೆದಿದೆ.
ಈಗಾಗಲೇ ಕುಮಾರಸ್ವಾಮಿ ಹೇಳಿಕೆ ವಿರುದ್ಧ ಪ್ರತಿಭಟನೆ ನಡೆಸುವಂತೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕರೆ ನೀಡಿದ್ದು, ಇದರ ಬೆನ್ನಲ್ಲೇ ರಾಜ್ಯದ ಹಲವೆಡೆ ಕಾಂಗ್ರೆಸ್‌ನಿಂದ ಅದರಲ್ಲೂ ಮುಖ್ಯವಾಗಿ ಕಾಂಗ್ರೆಸ್‌ನ ಮಹಿಳಾ ಮೋರ್ಚಾದಿಂದ ಪ್ರತಿಭಟನೆಗಳೂ ಆರಂಭವಾಗಿವೆ. ಇದರ ನಡುವೆಯೇ ಇದೀಗ ತುಮಕೂರಿನ ಕುಂಚಿಟಿಗರ ಸಭಾಭವನದಲ್ಲಿ ನಡೆಯುತ್ತಿದ್ದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ವಿ.ಸೋಮಣ್ಣ ಪರ ನಡೆಯುತ್ತಿದ್ದ ಸಮಾವೇಶಕ್ಕೆ ಕಾರ್ಯಕರ್ತೆಯರ ಸೋಗಿನಲ್ಲಿ ಬಂದು ಸಭೆಯಲ್ಲಿ ಕೂತಿದ್ದ ಇಬ್ಬರು ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದ್ದಾರೆ.
undefined
ಕಾರ್ಯಕ್ರಮದ ನಡುವೆ ಏಕಾಏಕಿ ವೇದಿಕೆಗೆ ನುಗ್ಗಿದ ಇಬ್ಬರು ಮಹಿಳಾ ಕಾರ್ಯಕರ್ತೆಯರು ಕುಮಾರಸ್ವಾಮಿ ಹಾಗೂ ದೇವೇಗೌಡರ ವಿರುದ್ಧ ಘೋಷಣೆ ಕೂಗಿದರು. ಆಗ ಸಭೆಯಲ್ಲಿ ಕೆಲಕಾಲ ಗೊಂದಲದ ವಾತಾವರಣ ಸೃಷ್ಟಿಯಾಯ್ತು. ಆಗ ಅಲ್ಲೇ ಇದ್ದ ಪೊಲೀಸರು ಇಬ್ಬರೂ ಮಹಿಳಾ ಕಾರ್ಯಕರ್ತೆಯರನ್ನು ವಶಕ್ಕೆ ಪಡೆದರು.
ಇಂದಿನಿಂದ ಎಚ್‌ಡಿಕೆ ವಿರುದ್ಧ ಹೋರಾಟಕ್ಕೆ ಕಾಂಗ್ರೆಸ್ ಸಜ್ಜು!
ಖುದ್ದು ಹಾಜರಾಗಲು ಎಚ್‌ಡಿಕೆ-ಸಂಜಯ್ ಪಾಟೀಲ್‌ಗೆ ಆಯೋಗ ನೋಟಿಸ್
ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಹಳ್ಳಿ ಹೆಣ್ಣುಮಕ್ಕಳು ದಾರಿ ತಪ್ಪಿದ್ದಾರೆಂದು ಹೇಳಿಕೆ ನೀಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಂದ ಸ್ಪಷ್ಟೀಕರಣ ಕೇಳಿ ನೋಟಿಸ್ ಜಾರಿ ಮಾಡಿರುವ ರಾಜ್ಯ ಮಹಿಳಾ ಆಯೋಗ, 7 ದಿನಗಳ ಒಳಗೆ ಖುದ್ದು ಹಾಜರಾಗುವಂತೆ ಮಾಜಿ ಸಿಎಂಗೆ ಸೂಚಿಸಿದೆ. ಈ ಬಗ್ಗೆ ಮಾತನಾಡಿದ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ, ಮುಖ್ಯಮಂತ್ರಿಯಾಗಿದ್ದವರು ಹೆಣ್ಣುಮಕ್ಕಳ ಚಾರಿತ್ರ್ಯಕ್ಕೆ ಧಕ್ಕೆ ತರುವ ರೀತಿಯಲ್ಲಿ ಹೇಳಿಕೆ ನೀಡಿರುವುದು ಸರಿಯಲ್ಲ. ಈ ವಿಚಾರದಲ್ಲಿ ಎಲ್ಲಾ ರಾಜಕಾರಣಿಗಳು, ಪುರುಷರು ಮಾತನಾಡುವಾಗ ಎಚ್ಚರ ವಹಿಸಬೇಕು. ಅವಹೇಳನಕಾರಿ ಹೇಳಿಕೆ ನೀಡದಂತೆ ಪಾಠ ಕಲಿಸಲು ನೋಟಿಸ್ ನೀಡಲಾಗಿದೆ. ಅವರು ಖುದ್ದಾಗಿ ಆಗಮಿಸಿ ಸ್ಪಷ್ಟನೆ ನೀಡಬೇಕು ಎಂದು ಹೇಳಿದರು.
ನಮ್ಮ ಗ್ಯಾರಂಟಿ ಕಾಪಿ ಮಾಡಿದ್ದಾರೆ: ಬಿಜೆಪಿ ಪ್ರಣಾಳಿಕೆ ಬಗ್ಗೆ ಪರಮೇಶ್ವರ ವ್ಯಂಗ್ಯ
ಸಂಜಯ್ ಪಾಟೀಲ್‌ಗೂ ನೋಟಿಸ್:
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕುರಿತ ಅವಹೇಳನಕಾರಿ ಹೇಳಿಕೆಗೆ ಸಂಬಂಧಿಸಿದಂತೆ ಬೆಳಗಾವಿಯ ಮಾಜಿ ಶಾಸಕ ಸಂಜಯ್ ಪಾಟೀಲ್ ಅವರಿಂದ ಸ್ಪಷ್ಟೀಕರಣ ಕೇಳಿ ಮಹಿಳಾ ಆಯೋಗದಿಂದ ನೋಟಿಸ್ ಜಾರಿಗೊಳಿಸಲಾಗಿದೆ.