ಸಂಪುಟದಿಂದ ವಜಾ ಹಿಂದೆ ದೊಡ್ಡ ಷಡ್ಯಂತ್ರ, ಕೆಎನ್ ರಾಜಣ್ಣ ಸ್ಫೋಟಕ ಹೇಳಿಕೆ

Published : Aug 11, 2025, 08:40 PM IST
kn rajanna

ಸಾರಾಂಶ

ಸಂಪುಟದಿಂದ ಕೆಎನ್ ರಾಜಣ್ಣ ವಜಾಗೊಂಡ ಬಳಿಕ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಈ ವೇಳೆ ರಾಜಣ್ಣ ಸಿಡಿಸಿದ ಬಾಂಬ್‌ಗೆ ಕಾಂಗ್ರೆಸ್ ನಿದ್ದೆಗೆಡಿಸಿದೆ. ಈ ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ ಎಂದಿದ್ದಾರೆ. ಏನದು ಪಿತೂರಿ?

ಬೆಂಗಳೂರು (ಆ.11) ರಾಹುಲ್ ಗಾಂಧಿ ಅಭಿಯಾನದ ವಿರುದ್ಧ ಹೇಳಿಕೆ ಕೊಟ್ಟ ಕೆಎನ್ ರಾಜಣ್ಣ ತಲೆ ದಂಡ ಆಗಿದೆ. ಸಂಪುಟದಿಂದ ಕೆಎನ್ ರಾಜಣ್ಣ ಅವರನ್ನು ವಜಾ ಮಾಡಲಾಗಿದೆ. ಈ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ. ಈ ಘಟನೆ ಬಳಿಕ ಮೊದಲ ಬಾರಿಗೆ ಕೆಎನ್ ರಾಜಣ್ಣ ಪ್ರತಿಕ್ರಿಯೆ ನೀಡಿದ್ದಾರೆ. ನಿಮ್ಮ ಮುಂದೆ ಮಾಜಿ ಸಚಿವನಾಗಿ ಮಾತಾಡುತ್ತಿದ್ದೇನೆ. ಆದರೆ ನನ್ನ ವಜಾ ಹಿಂದೆ ಅತೀ ದೊಡ್ಡ ಷಡ್ಯಂತ್ರ ಅಡಗಿದೆ ಎಂದಿದ್ದಾರೆ. ಈ ಪಿತೂರಿ, ಷಡ್ಯಂತ್ರದ ಹಿಂದೆ ಯಾರೆಲ್ಲಾ ಇದ್ದಾರೆ, ಏನು ಮಾಡಿದ್ದಾರೆ ಅನ್ನೋದು ಗೊತ್ತು ಎಂದು ಕೆಎನ್ ರಾಜಣ್ಣ ಹೇಳಿದ್ದಾರೆ.

ಸಂಪುಟದಿಂದ ವಜಾಗೊಂಡ ಬಳಿಕ ಮೊದಲ ಬಾರಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಕೆಎನ್ ರಾಜಣ್ಣ, ನಾನು ಮಾಜಿ ಸಚಿವನಾಗಿ ಮುಂದೆ ಬಂದು ನಿಂತಿದ್ದೇನೆ. ಮಾಜಿ ಸಚಿವ ಎಂದು ಕರೆಯಿಸಿಕೊಳ್ಳುವುದಕ್ಕೆ ನನಗೆ ಸಂತೋಷವಾಗುತ್ತಿದೆ ಎಂದಿದ್ದಾರೆ. ನನಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವಕಾಶ ಕೊಟ್ಟಿದ್ದರು. ಈ ಸಂದರ್ಭದಲ್ಲಿ ಎಲ್ಲಾ ಸಚಿವರ ಜೊತೆ ಸೇರಿ ಮುಖ್ಯಮಂತ್ರಿಗಳಿಗೆ ಧನ್ಯವಾದ ತಿಳಿಸಿದ್ದೇನೆ ಎಂದು ಕೆಎನ್ ರಾಜಣ್ಣ ಹೇಳಿದ್ದಾರೆ.

ವಜಾ ಹಿಂದೆ ಪಿತೂರಿ, ಎಲ್ಲವೂ ಗೊತ್ತಿದೆ ನನಗೆ

ಸಂಪುಟದಿಂದ ನನ್ನ ವಜಾಗೊಳಿಸಿದರ ಹಿಂದೆ ದೊಡ್ಡ ಷಡ್ಯಂತ್ರ ಅಡಗಿದೆ. ಪಿತೂರಿ ಮಾಡಿ ವಜಾ ಮಾಡಲಾಗಿದೆ. ಇದರ ಹಿಂದೆ ಏನೆಲ್ಲಾ ಆಗಿದೆ ಅನ್ನೋ ಮಾಹಿತಿಯೂ ನನಗಿದೆ. ಯಾರೆಲ್ಲೂ ಇದ್ದಾರೆ ಅನ್ನೋ ಮಾಹಿತಿಯೂ ಇದೆ. ನನ್ನ ಬಳಿ ಇರುವ ಈ ಷಡ್ಯಂತ್ರ ವಿವರಗಳನ್ನು ಮುಂದಿನ ದಿನಗಳಲ್ಲಿ ತಿಳಿಸುತ್ತೇನೆ ಎಂದು ಕೆಎನ್ ರಾಜಣ್ಣ ಹೇಳಿದ್ದಾರೆ. ರಾಜ್ಯಪಾಲರ ಕಚೇರಿಯಿಂದ ವಜಾಗೊಳಿಸಿರುವ ಡ್ರಾಫ್ಟ್ ಬಂದಿರುವ ಮಾಹಿತಿ ಇದೆ. ಇದು ಹೈಕಮಾಂಡ್ ನಿರ್ಧಾರವಾಗಿದೆ. ಪಕ್ಷ ತೆಗೆದುಕೊಂಡ ನಿರ್ಧಾರಕ್ಕೆ ಬದ್ಧನಾಗಿದ್ದೇನೆ ಎಂದು ಕೆಎನ್ ರಾಜಣ್ಣ ಹೇಳಿದ್ದಾರೆ.

ನನ್ನ ಬಗ್ಗೆ ರಾಹುಲ್ ಗಾಂಧಿಗೆ ತಪ್ಪು ಗ್ರಹಿಕೆ ಆಗಿದೆ

ನನ್ನ ಹೇಳಿಕೆ, ನನ್ನ ಬಗ್ಗೆ ರಾಹುಲ್ ಗಾಂಧಿಗೆ ತಪ್ಪು ಗ್ರಹಿಕೆ ಆಗಿದೆ. ಆಗಿರುವ ತಪ್ಪು ಗ್ರಹಿಕೆಯನ್ನು ನಿವಾರಿಸುವ ಪ್ರಯತ್ನ ಮಾಡುತ್ತೇನೆ. ನಾನೇ ಖುದ್ದು ದೆಹಲಿಗೆ ತೆರಳಿ ರಾಹುಲ್ ಗಾಂಧಿಗೆ ಮನವರಿಕೆ ಮಾಡುವ ಪ್ರಯತ್ನ ಮಾಡುತ್ತೇನೆ. ಸದ್ಯ ಏನೇ ಮಾತನಾಡಿದರೂ ತಪ್ಪು ಸಂದೇಶ ಹೋಗಬಾರದು. ನಾವು ಪಕ್ಷಕ್ಕೆ ಬದ್ಧರಾಗಿದ್ದೇವೆ. ರಾಹುಲ್ ಗಾಂಧಿ ನಮ್ಮ ನಾಯಕರು ಎಂದು ಕೆಎನ್ ರಾಜಣ್ಣ ಹೇಳಿದ್ದಾರೆ.

ರಾಹುಲ್ ಗಾಂಧಿ ಅಭಿಯಾನದ ವಿರುದ್ಧ ನೀಡಿದ ಹೇಳಿಕೆಯೇ ಮುಳುವಾಯ್ತಾ?

ಕೆಎನ್ ರಾಜಣ್ಣ ಇತ್ತೀಚೆಗೆ ರಾಹುಲ್ ಗಾಂಧಿಯ ದೇಶಾದ್ಯಂತ ಕೈಗೊಂಡಿರುವ ಮತ ಕಳ್ಳತನ ಅಭಿಯಾನದ ವಿರುದ್ಧ ಮಾತನಾಡಿದ್ದರು. ಬಿಜೆಪಿ ಹಾಗೂ ಚುನಾವಣಾ ಆಯೋಗ ಜಂಟಿಯಾಗಿ ಮತ ಕಳ್ಳತನ ನಡೆಸಿದೆ ಎಂದು ಆರೋಪಿಸಿದ್ದರು. ಆದರೆ ಕೆಎನ್ ರಾಜಣ್ಣ, ನಮ್ಮದೇ ಸರ್ಕಾರ ಅಧಿಕಾರದಲ್ಲಿತ್ತು. ಅಂದು ಯಾರಿಗೂ ಯಾವುದೇ ಸಮಸ್ಯೆ ಇರಲಿಲ್ಲ. ಇದೀಗ ದೊಡ್ಡ ವಿಷಯ ಮಾಡುವ ಅಗತ್ಯವೇನಿದೆ ಎಂದು ರಾಹುಲ್ ಗಾಂಧಿ ಆರೋಪವೇ ಸುಳ್ಳು ಅನ್ನೋ ರೀತಿ ಹೇಳಿಕೆ ನೀಡಿದ್ದರು. ಇದೇ ಹೇಳಿಕೆ ಮುಳುವಾಗಿದೆ ಅನ್ನೋದನ್ನು ಕೆಎನ್ ರಾಜಣ್ಣ ಕೂಡ ಪರೋಕ್ಷವಾಗಿ ಹೇಳಿದ್ದಾರೆ. ತಮ್ಮ ಹೇಳಿಕೆಯಲ್ಲಿ ರಾಹುಲ್ ಗಾಂಧಿಗೆ ತಪ್ಪು ಗ್ರಹಿಕೆಯಾಗಿದೆ. ಈ ಕುರಿತು ಮನವರಿಕೆ ಮಾಡಿಕೊಡುತ್ತೇನೆ ಎಂದಿದ್ದಾರೆ. ಈ ಮೂಲಕ ತನ್ನ ಹೇಳಿಕೆಯಿಂದಲೇ ವಜಾ ನಿರ್ಧಾರವಾಗಿದೆ ಅನ್ನೋದು ಪರೋಕ್ಷವಾಗಿ ಹೇಳಿದ್ದಾರೆ. ಪಕ್ಷದಲ್ಲಿ ಒಂದು ಬಣ ಇದರ ಹಿಂದಿದೆ ಅನ್ನೋದನ್ನು ಸೂಚ್ಯವಾಗಿ ಹೇಳಿದ್ದಾರೆ. 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ: ಬಿ.ವೈ.ವಿಜಯೇಂದ್ರ ಟೀಕೆ
ಕರ್ನಾಟಕದಲ್ಲಿ ಶೇ.63 ಭ್ರಷ್ಟಾಚಾರ: ಸಿಬಿಐ ತನಿಖೆಗೆ ಒತ್ತಾಯಿಸಿದ ಆರ್‌.ಅಶೋಕ್‌