ದೇಶದ ಸಂವಿಧಾನ ಅತ್ಯಂತ ಪವಿತ್ರವಾದುದ್ದು; ಧಕ್ಕೆಯಾಗದಂತೆ ನೋಡಿಕೊಳ್ಳಬೇಕು: ಖಾದರ್

By Ravi Janekal  |  First Published Sep 21, 2023, 5:01 PM IST

ದೇಶದ ಸಂವಿಧಾನ ಅತ್ಯಂತ ಪವಿತ್ರವಾದುದು. ಪ್ರತಿಯೊಬ್ಬರು ಅದನ್ನು ಗೌರವಿಸಬೇಕು. ಸ್ವಾಭಿಮಾನದ ಪ್ರತೀಕವಾದ ಸಂವಿಧಾನಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು’ ಎಂದು ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್ ಹೇಳಿದರು.


ರಾಮನಗರ (ಸೆ.21): ‘ದೇಶದ ಸಂವಿಧಾನ ಅತ್ಯಂತ ಪವಿತ್ರವಾದುದು. ಪ್ರತಿಯೊಬ್ಬರು ಅದನ್ನು ಗೌರವಿಸಬೇಕು. ಸ್ವಾಭಿಮಾನದ ಪ್ರತೀಕವಾದ ಸಂವಿಧಾನಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು’ ಎಂದು ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್ ಹೇಳಿದರು.

ತಾಲ್ಲೂಕಿನಲ್ಲಿ ಈ ಕುರಿತು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಸಂವಿಧಾನದ ಪೀಠಿಕೆ ಬದಲಾವಣೆ ಕುರಿತು ನಮ್ಮ ಗಮನಕ್ಕೆ ಯಾವುದೇ ಲಿಖಿತ ಮಾಹಿತಿ ಬಂದಿಲ್ಲ’ ಎಂದರು.

Tap to resize

Latest Videos

‘ಕಾವೇರಿ ನದಿ ನೀರು ವಿಷಯದಲ್ಲಿ ರಾಜ್ಯದ ಹಿತಾಸಕ್ತಿಗೆ ಧಕ್ಕೆಯಾಗದಂತೆ ರಾಜ್ಯ ಸರ್ಕಾರ ನೋಡಿಕೊಳ್ಳಬೇಕು. ಆ ನಿಟ್ಟಿನಲ್ಲಿ ನಡೆಸಬೇಕಾದ ಹೋರಾಟದಲ್ಲಿ ಆಡಳಿತ ಪಕ್ಷದ ಮತ್ತು ವಿರೋಧ ಪಕ್ಷಗಳು ಒಗ್ಗಟ್ಟಿನಿಂದ ಮುನ್ನಡೆಯುತ್ತಿವೆ. ನೀರಿಗೆ ಸಂಬಂಧಿಸಿದ ವಿಷಯಗಳನ್ನು ಸರ್ಕಾರ ಗಣನೆಗೆ ತೆಗೆದುಕೊಂಡು ರೈತರ ಹಿತ ಕಾಯಲಿದೆ’ ಎಂದು ಮತ್ತೊಂದು ಪ್ರಶ್ನೆಗೆ ಉತ್ತರಿಸಿದರು.

 

ಸಭಾಧ್ಯಕ್ಷನಾಗಿ ಸ್ಥಾನದ ಘನತೆ ಉಳಿಸುವ ಕೆಲಸ ಮಾಡುವೇ: ಯು.ಟಿ.ಖಾದರ್

ಕಾವೇರಿ ವಿವಾದ; ಹೆಚ್ಚಿದ ಹೋರಾಟದ ಕಿಚ್ಚು

ಮಂಡ್ಯ/ಶ್ರೀರಂಗಪಟ್ಟಣ: ಕೃಷ್ಣರಾಜಸಾಗರ ಜಲಾಶಯದಿಂದ ನದಿಗೆ ನೀರು ಹರಿಬಿಟ್ಟಿರುವ ಬಗ್ಗೆ ರೈತರು ಕೇಳಿದ ಪ್ರಶ್ನೆಗೆ ಬೇಜವಾಬ್ದಾರಿ ಉತ್ತರ ನೀಡಿದ್ದಾರೆಂದು ಕಾವೇರಿ ನೀರಾವರಿ ನಿಗಮದ ಅಧಿಕಾರಿಯನ್ನು ತರಾಟೆ ತೆಗೆದುಕೊಂಡ ಘಟನೆ ಶ್ರೀರಂಗಪಟ್ಟಣದ ಕೆಆರ್‌ಎಸ್‌ನಲ್ಲಿ ನಡೆದಿದೆ.

ಭೂಮಿ ತಾಯಿ ಹೋರಾಟ ಸಮಿತಿ ರೈತರು ಕೆಆರ್‌ಎಸ್‌ನಲ್ಲಿರುವ ಕಾವೇರಿ ನೀರಾವರಿ ನಿಗಮದ ಇಇ ಕಚೇರಿಗೆ ಮುತ್ತಿಗೆ ಹಾಕಿದ ವೇಳೆ ಎಕ್ಸಿಕ್ಯುಟಿವ್ ಇಂಜಿನಿಯರ್ ಇಲ್ಲದ ಕಾರಣ ರೈತರ ಮನವಿ ಆಲಿಸಲು ಬಂದಿದ್ದ ಎಇಇ ಕಿಶೋರ್ ರೈತರು ಕೇಳಿದ ಪ್ರಶ್ನೆಗೆ ಬೇಜವಾಬ್ದಾರಿಯಿಂದ ಉತ್ತರಿಸಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದರು.

ತಮಿಳುನಾಡಿಗೆ ನೀರು ಬಿಟ್ಟಿದ್ದೀರೋ ಇಲ್ಲವೋ ಎಂದು ರೈತರು ಅಧಿಕಾರಿಯನ್ನು ಕೇಳಿದಾಗ, ತಮಿಳುನಾಡಿಗೆ ನೀರು ಬಿಟ್ಟೇ ಇಲ್ಲ. ನದಿ ಪಾತ್ರದ ನಾಲೆಗಳಿಗೆ ನೀರು ಬಿಟ್ಟಿದ್ದೇವೆ. ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಟ್ಟಿಲ್ಲ ಎಂದು ಸಮರ್ಥನೆಗೆ ಮುಂದಾದರು.

ಸೋನಿಯಾ ಗಾಂಧಿ ತೃಪ್ತಿಪಡಿಸಲು ತಮಿಳನಾಡಿಗೆ ಕಾವೇರಿ ನೀರು: ರಾಜ್ಯ ಸರ್ಕಾರದ ವಿರುದ್ಧ ಆರ್‌ ಅಶೋಕ್ ಆಕ್ರೋಶ

ನದಿಗೆ ಯಾಕೆ ಅಷ್ಟು ಪ್ರಮಾಣದಲ್ಲಿ ನೀರು ಹೋಗುತ್ತಿದೆ. ನದಿಯನ್ನು ಹಿಂದಿನಿಂದಲೂ ನೋಡಿಕೊಂಡೇ ಬರುತ್ತಿದ್ದೇವೆ. 4 ಸಾವಿರ ಕ್ಯುಸೆಕ್‌ನಷ್ಟು ನೀರು ಹರಿದುಹೋಗುತ್ತಿದೆ ಎಂದಾಗ, ಅಧಿಕಾರಿಗಳಿಂದ ಸಮರ್ಪಕ ಉತ್ತರ ಬರಲಿಲ್ಲ. ರೈತರ ಪ್ರಶ್ನೆಗೆ ಉಡಾಫೆ ಮತ್ತು ಬೇಜವಾಬ್ದಾರಿಯಿಂದ ಕಿಶೋರ್ ಉತ್ತರಿಸಿದ್ದರಿಂದ ರೈತರು ಕೆರಳಿ ಕೆಂಡವಾದರು. ನೀರಿಲ್ಲದೆ ನಾವು ಅನುಭವಿಸುತ್ತಿರುವ ಕಷ್ಟ ನಿಮಗೇನ್ರೀ ಗೊತ್ತು. ದುರಹಂಕಾರ ಬಿಟ್ಟು ಉತ್ತರಿಸುವಂತೆ ರೈತರು ಹರಿಹಾಯ್ದರು.

ಈ ವೇಳೆ ಸಮಾಧಾನಿಸಲು ಬಂದ ಪೊಲೀಸರಿಗೂ ರೈತ ನಾಯಕ ನಂಜುಂಡೇಗೌಡರು ಎಚ್ಚರಿಕೆ ನೀಡಿದರು. ತಮಿಳುನಾಡಿಗೆ ನೀರು ಬಿಟ್ಟಿದ್ದೀರೋ, ಇಲ್ಲವೋ ಎಂಬ ರೈತರ ಪ್ರಶ್ನೆಗೆ ನೀರಾವರಿ ಇಲಾಖೆ ಅಧಿಕಾರಿಗಳು ಕಕ್ಕಾಬಿಕ್ಕಿಯಾದರು. ಆದರೂ ತಮಿಳುನಾಡಿಗೆ ನೀರು ಬಿಡುತ್ತಿರುವ ಬಗ್ಗೆ ಸರಿಯಾದ ಮಾಹಿತಿ ನೀಡಲಿಲ್ಲ. ಇದರಿಂದ ರೈತರು ಇನ್ನಷ್ಟು ಸಿಡಿಮಿಡಿಗೊಂಡರು.

ನೂರಕ್ಕೆ ನೂರು ನೀವು ಕಾವೇರಿ ನೀರನ್ನು ತಮಿಳುನಾಡಿಗೆ ಬಿಟ್ಟಿದ್ದೀರಿ. ಸಿಎಂ, ಡಿಸಿಎಂ ಸೂಚನೆ ಮೇರೆಗೆ ನೀರು ಹರಿಸುತ್ತಿದ್ದೀರಿ. ನಮ್ಮ ಹೋರಾಟವನ್ನು ಸರ್ಕಾರದ ಗಮನಕ್ಕೆ ತಂದು ಕೂಡಲೇ ನೀರು ನಿಲ್ಲಿಸುವಂತೆ ಆಗ್ರಹಪಡಿಸಿದರು.

ಹೋರಾಟಗಳಿಗೆ ಮನ್ನಣೆ ಇಲ್ಲ:

ನೀರನ್ನು ಹರಿಸದೆ ಸುಪ್ರೀಂಕೋರ್ಟ್ ಎದುರು ನಿಲ್ಲುವ ಧೈರ್ಯವಿಲ್ಲದ ಕಾಂಗ್ರೆಸ್ ಸರ್ಕಾರ ಕದ್ದುಮುಚ್ಚಿ ತಮಿಳುನಾಡಿಗೆ ನೀರು ಹರಿಸುತ್ತಿರುವುದು ಕಟುಸತ್ಯ. ಜಿಲ್ಲೆ ಸೇರಿದಂತೆ ಇತರೆ ಜಿಲ್ಲೆಗಳಲ್ಲಿ ನಡೆಯುತ್ತಿರುವ ಹೋರಾಟಗಳಿಗೆ ಮನ್ನಣೆಯನ್ನೇ ನೀಡದೆ ಕಬಿನಿ, ಕೆಆರ್‌ಎಸ್ ಅಣೆಕಟ್ಟೆಗಳಿಂದ ನೀರನ್ನು ಹರಿಯಬಿಟ್ಟಿದೆ. ಸುಪ್ರೀಂಕೋರ್ಟ್‌ನಲ್ಲಿ ಪ್ರಾಧಿಕಾರ ಆದೇಶ ಪಾಲಿಸಿದ್ದೇವೆ ಎಂದು ಹೇಳಲು ತಮಿಳುನಾಡಿಗೆ ನೀರು ಬಿಡುಗಡೆ ಮಾಡಲಾಗಿದೆ. ಕೆಆರ್‌ಎಸ್ ಮತ್ತು ಕಬಿನಿ ಜಲಾಶಯದಿಂದ 3500 ಕ್ಯುಸೆಕ್ ಹಾಗೂ ಅಣೆಕಟ್ಟೆಯ ಕೆಳಭಾಗದಲ್ಲಿ ಬಿದ್ದಿರುವ ಮಳೆ ನೀರು 1500 ಕ್ಯುಸೆಕ್ ಸೇರಿ 5 ಸಾವಿರ ಕ್ಯುಸೆಕ್‌ಗೂ ಹೆಚ್ಚು ನೀರು ತಮಿಳುನಾಡಿಗೆ ಹರಿಯುತ್ತಿದೆ ಎಂದು ಅವರು ಅಕ್ರೋಶ ವ್ಯಕ್ತಪಡಿಸಿದರು.

click me!