ಕಾರ್ಮಿಕರಿಗೆ 5 ಸಾವಿರ ರೂ.: ಈ ಹಣ ಪಡೆಯುವುದೇಗೆ..?

By Suvarna News  |  First Published May 15, 2020, 7:20 PM IST

ಲಾಕ್‌ಡೌನ್‌ ಪರಿಣಾಮ ಕಟ್ಟಡ ಕಾರ್ಮಿಕರಿಗೆ ಸರ್ಕಾರದಿಂದ 5 ಸಾವಿರ ರೂ. ನೆರವು ನೀಡಲಾಗುತ್ತಿದೆ. 'ಯಾರಿಗೆ ಅನ್ವಯ? ಯಾವೆಲ್ಲಾ ದಾಖಲೆಗಳು ಬೇಕು? ಅರ್ಜಿ ಎಲ್ಲಿ ಸಲ್ಲಿಸಬೇಕು? ಎನ್ನುವ ಮಾಹಿತಿ ಈ ಕೆಗಿನಂತಿದೆ.


ಬೆಂಗಳೂರು, (ಮೇ.15): ಲಾಕ್‍ಡೌನ್ ಸಮಯದಲ್ಲಿ ಕಾರ್ಮಿಕರು ಸಂಕಷ್ಟಕ್ಕೆ ಸಿಲುಕಿದ್ದು, ರಾಜ್ಯ ಸರ್ಕಾರ ಕಾರ್ಮಿಕರಿಗೆ 5000 ರೂಪಾಯಿ ಧನಸಹಾಯ ಮಾಡುವುದಾಗಿ ಘೋಷಿಸಿದೆ.

ಕರ್ನಾಟಕ ಸರ್ಕಾರದ ಅದೇಶದನ್ವಯ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯವರ ವತಿಯಿಂದ ನೋಂದಾಯಿತ ಕಟ್ಟಡ ಕಾರ್ಮಿಕ ಫಲಾನುಭವಿಗಳ ಖಾತೆಗೆ ಒಂದು ಬಾರಿ ಮಾತ್ರ 5 ಸಾವಿರ ರೂ. ಹಣವನ್ನು ಜಮಾ ಮಾಡಲಾಗುತ್ತದೆ.

Latest Videos

undefined

ಆಟೋ, ಕ್ಯಾಬ್ ಚಾಲಕರು 5000 ರೂ. ಪಡೆಯುವುದು ಹೇಗೆ? ಯಾವೆಲ್ಲಾ ಡ್ರೈವರ್ಸ್‌ಗೆ ಅನ್ವಯ?

ಕಟ್ಟಡ ಮತ್ತು ಇತರೆ ನಿರ್ಮಾಣ ಕೆಲಸಗಳಲ್ಲಿ ತೊಡಗಿರುವ ಎಲ್ಲಾ ನೋಂದಾಯಿತ ಕಾರ್ಮಿಕರು ಯೋಜನೆಗೆ ಅರ್ಹರಾಗಿದ್ದು ಆಯಾ ತಾಲ್ಲೂಕಿನ ಹಿರಿಯ ನಿರೀಕ್ಷಕರು ಅಥವಾ ಜಿಲ್ಲಾ ಕಾರ್ಮಿಕ ಅಧಿಕಾರಿಗಳಿಗೆ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಯಾರು ಅರ್ಹರು?
ಕಟ್ಟಡ ಮತ್ತು ಇತರೆ ನಿರ್ಮಾಣ ಕೆಲಸಗಳಲ್ಲಿ ತೊಡಗಿರುವ ಎಲ್ಲಾ ನೋಂದಾಯಿತ ಕಾರ್ಮಿಕರು ಈ ಯೋಜನೆಗೆ ಅರ್ಹರಾಗಿದ್ದಾರೆ.

ಲಾಕ್‌ಡೌನ್‌ ಎಫೆಕ್ಟ್: ಸಂಕಷ್ಟದಲ್ಲಿರುವವರಿಗೆ ಸಿಎಂ ಸ್ಪಂದನೆ, ವಿಶೇಷ ಪ್ಯಾಕೇಜ್‌ ಘೋಷಣೆ 

ಬೇಕಾಗುವ ದಾಖಲೆಗಳು
1. ಕಾರ್ಮಿಕ ಇಲಾಖೆಯಲ್ಲಿ ನೋಂದಾಯಿಸಿರುವ ಬಗ್ಗೆ ಪಡೆದ ನೋಂದಾಯಿತ ಗುರುತಿನ ಚೀಟಿಯ ಪ್ರತಿ
2. ಆಧಾರ್ ಕಾರ್ಡ್ ಪ್ರತಿ
3. ಬ್ಯಾಂಕ್ ಅಕೌಂಟ್ ನಂಬರ್, ಐಎಫ್‍ಸಿ ಕೋಡ್, ಹೆಸರು, ವಿಳಾಸ ಇರುವ ಬ್ಯಾಂಕ್ ಪಾಸ್ ಪುಸ್ತಕದ ಸ್ಪಷ್ಟವಾದ ಪ್ರತಿ

click me!