3 ವರ್ಷದಲ್ಲಿ 3.92 ಲಕ್ಷ ಮನೆ ನಿರ್ಮಾಣ: ಸಚಿವ ಸೋಮಣ್ಣ

Published : Sep 15, 2022, 07:11 AM IST
3 ವರ್ಷದಲ್ಲಿ 3.92 ಲಕ್ಷ ಮನೆ ನಿರ್ಮಾಣ: ಸಚಿವ ಸೋಮಣ್ಣ

ಸಾರಾಂಶ

ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಆವಾಸ್‌ ನಗರ ಯೋಜನೆ ಅಡಿಯಲ್ಲಿ 11565 ಮನೆಗಳಿಗೆ ಅನುಮೋದನೆ ನೀಡಲಾಗಿದೆ: ಸೋಮಣ್ಣ 

ವಿಧಾನ ಪರಿಷತ್‌(ಸೆ.15):  ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ ವಿವಿಧ ಯೋಜನೆಗಳ ಅಡಿಯಲ್ಲಿ 7592 ಕೋಟಿ ರು. ವೆಚ್ಚದಲ್ಲಿ 3,92,730 ಮನೆಗಳನ್ನು ನಿರ್ಮಿಸಲಾಗಿದ್ದು, ಈ ಪೈಕಿ ಪರಿಶಿಷ್ಟಜಾತಿ ಫಲಾನುಭವಿಗಳಿಗೆ ಯೋಜನೆಯಡಿ 2630.31 ಕೋಟಿ ರು., ಪರಿಶಿಷ್ಟಪಂಗಡಕ್ಕೆ 954.32 ಕೋಟಿ ರು. ಹಾಗೂ ಈ ಎರಡೂ ಪಂಗಡ ಹೊರತುಪಡಿಸಿ ಉಳಿದ ಸಮುದಾಯಕ್ಕೆ 4006.36 ಕೋಟಿ ರು. ವೆಚ್ಚ ಮಾಡಲಾಗಿದೆ ಎಂದು ವಸತಿ ಸಚಿವ ವಿ. ಸೋಮಣ್ಣ ತಿಳಿಸಿದರು.

ಕಾಂಗ್ರೆಸ್‌ನ ಎಂ. ನಾಗರಾಜು ಅವರ ಪ್ರಶ್ನೆಗೆ ಉತ್ತರಿಸಿದ ಅವರು, 2019-20ನೇ ಸಾಲಿನಲ್ಲಿ 77,412, 2020-21ನೇ ಸಾಲಿನಲ್ಲಿ 1,20,383, 2021-22ರಲ್ಲಿ 1,33,328 ಮನೆ ಹಾಗೂ 2022-23ನೇ ಸಾಲಿನ ಆಗಸ್ಟ್‌ ಅಂತ್ಯದವರೆಗೆ 61,607 ಮನೆಗಳನ್ನು ಪೂರ್ಣಗೊಳಿಸಲಾಗಿದೆ. ಬಸವ ವಸತಿ ಯೋಜನೆ, ಇಂದಿರಾ ಆವಾಸ್‌ ಯೋಜನೆ, ಗ್ರಾಮೀಣ ಅಂಬೇಡ್ಕರ್‌ ವಸತಿ ಯೋಜನೆ ಹಾಗೂ ವಾಜಪೇಯಿ ನಗರ ವಸತಿ ಯೋಜನೆ ಸೇರಿದಂತೆ ವಿವಿಧ ಯೋಜನೆಗಳಡಿ ಇವುಗಳನ್ನು ನಿರ್ಮಿಸಿ, ಫಲಾನುಭವಿಗಳಿಗೆ ಹಂಚಿಕೆ ಮಾಡಲಾಗಿದೆ ಎಂದು ವಿವರಿಸಿದರು.

ಅಕ್ರಮ ಆಸ್ತಿ: ಸಚಿವ ಸೋಮಣ್ಣ ವಿರುದ್ಧ ಸಮನ್ಸ್‌ ರದ್ದು

ವಿವಿಧ ಹಂತದಲ್ಲಿ ನಿರ್ಮಾಣ:

2019-20 ಹಾಗೂ 2020-21ನೇ ಸಾಲಿನಲ್ಲಿ ಒಟ್ಟು 1,32,546 ಮನೆಗಳನ್ನು ಹಂಚಿಕೆ ಮಾಡಲಾಗಿದ್ದು, ಈ ಎಲ್ಲ ಮನೆಗಳಿಗೆ ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದೆ. ಮನೆಗಳ ನಿರ್ಮಾಣ ಪ್ರಕ್ರಿಯೆ ಜಾರಿಯಲ್ಲಿದೆ. ಅದೇ ರೀತಿ 2021-22ನೇ ಸಾಲಿನಲ್ಲಿ 5 ಲಕ್ಷ ಹೊಸ ಮನೆಗಳ ಗುರಿ ನೀಡಲಾಗಿದೆ. ಈವರೆಗೆ 3,40,728 ಮನೆಗಳನ್ನು ಹಂಚಿಕೆ ಮಾಡಿದ್ದು, ಈ ಪೈಕಿ 1,67,411 ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದೆ. ಕಾಮಗಾರಿಗೆ ಆದೇಶ ನೀಡಲಾಗಿದೆ. ಇನ್ನುಳಿದ ಆಯ್ಕೆ ಪ್ರಕ್ರಿಯೆ ಪ್ರಗತಿಯಲ್ಲಿದೆ. ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಆವಾಸ್‌ ನಗರ ಯೋಜನೆ ಅಡಿಯಲ್ಲಿ 11565 ಮನೆಗಳಿಗೆ ಅನುಮೋದನೆ ನೀಡಲಾಗಿದೆ ಎಂದು ಸಚಿವ ಸೋಮಣ್ಣ ತಿಳಿಸಿದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಹೊಸದಾಗಿ 545 ಪಿಎಸ್‌ಐ ಶೀಘ್ರ ಸೇವೆಗೆ ನಿಯೋಜನೆ: ಗೃಹ ಸಚಿವ ಪರಮೇಶ್ವರ್‌
Karnataka News Live: ಮಾಟಗಾತಿಯ ಮಾತು ಕೇಳಿ ಗಂಡು ಮಗುವಿಗಾಗಿ ಪತ್ನಿಯ ತಲೆ ಕೂದಲು ಕತ್ತರಿಸಿದ ಪತಿ