
ಬೆಂಗಳೂರು(ಅ. 28) ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 64 ಗಣ್ಯರಿಗೆ ಈ ಸಾಲಿನ ಅಂದರೆ 64ನೇ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಸಂದಿದೆ. ಕಲೆ (ಸಾಹಿತ್ಯ, ರಂಗಭೂಮಿ, ಸಿನಿಮಾ, ಸಂಗೀತ, ನೃತ್ಯ, ಜಾನಪದ, ಯಕ್ಷಗಾನ, ಬಯಲಾಟ, ಶಿಲ್ಪಕಲೆ, ಚಿತ್ರಕಲೆ), ಸಮಾಜಸೇವೆ, ಸಂಕೀರ್ಣ, ಪತ್ರಿಕೋದ್ಯಮ / ಮಾಧ್ಯಮ, ಕ್ರೀಡೆ, ವೈದ್ಯಕೀಯ, ಶಿಕ್ಷಣ, ಕೃಷಿ, ವಿಜ್ಞಾನ ಮತ್ತು ತಂತ್ರಜ್ಞಾನ ಸೇರಿದಂತೆ ನಾನಾ ಕ್ಷೇತ್ರದ ಸಾಧಕರಿಗೆ ಗೌರವ ಸಂದಿದೆ. ಆದರೆ ಇದೆಲ್ಲದರ ನಡುವೆ ಅಪಸ್ವರವೊಂದು ಎದ್ದಿದೆ.
ರಾಜ್ಯೋತ್ಸವ ಪ್ರಶಸ್ತಿ ಸಮಿತಿಯಲ್ಲಿ ಡಾ. ನಿರುಪಮಾ ರಾಜೇಂದ್ರ ಇದ್ದರು. ಅವರು ಒಡೆತನದಲ್ಲಿ ಇತ್ತು ಎನ್ನಲಾದ ಪ್ರಭಾತ್ ಆರ್ಟ್ ಇಂಟರ್ ನ್ಯಾಷನಲ್ ಸಂಸ್ಥೆಗೂ ರಾಜ್ಯೋತ್ಸವ ಪ್ರಶಸ್ತಿ ದೊರೆತಿರುವುದು ಹಲವರ ಅಸಮಾಧಾನಕ್ಕೆ ಕಾರಣವಾಗಿದ್ದು ಪ್ರಶ್ನೆ ಏಳುವಂತೆ ಮಾಡಿದೆ.
ನೃತ್ಯ ಕಲಾವಿದೆಯಾಗಿ ಗುರುತಿಸಿಕೊಂಡಿರುವ ನಿರುಪಮಾ ಅವರನ್ನು ರಾಜ್ಯ ಸರ್ಕಾರ ನೃತ್ಯ ಕಲಾ ಅಕಾಡೆಮಿ ಸದಸ್ಯೆಯನ್ನಾಗಿ ನೇಮಕ ಮಾಡಿ ಕೆಲ ದಿನಗಳ ಹಿಂದೆ ಆದೇಶ ನೀಡಿತ್ತು
ಒಟ್ಟಿನಲ್ಲಿ ಈ ಬಾರಿ ರಾಜ್ಯೋತ್ಸವ ಪ್ರಶಸ್ತಿಗಾಗಿ 1600ಕ್ಕೂ ಅಧಿಕ ಅರ್ಜಿಗಳು ಬಂದಿದ್ದವು. ಹಿರಿಯ ನಟಿ ತಾರಾ, ನಿರ್ದೇಶಕ ನಾಗಾಭರಣ ಸೇರಿದಂತೆ ಅನೇಕರನ್ನು ಒಳಗೊಂಡಿದ್ದ ನ17 ಜನರ ಸಮಿತಿ ಅಂತಿಮವಾಗಿ 64 ಸಾಧಕರಿಗೆ ಪ್ರಶಸ್ತಿ ಪಟ್ಟಿ ಪ್ರಕಟ ಮಾಡಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ