ನಾಡಗೀತೆಗೆ ‘ಬೌದ್ದರುದ್ಯಾನ’ ಹೊಸ ಪದ ಶಿಫಾರಸಿಗೂ ಕಅಪ್ರಾಗೂ ಸಂಬಂಧ ಇಲ್ಲ: ಬಿಳಿಮಲೆ ಸ್ಪಷ್ಟನೆ

Kannadaprabha News   | Kannada Prabha
Published : Jul 18, 2026, 06:03 AM IST
Purushottama Bilimale

ಸಾರಾಂಶ

ಕುವೆಂಪು ವಿರಚಿತ ‘ಜಯ ಭಾರತ ಜನನಿಯ ತನುಜಾತೇ’ ನಾಡಗೀತೆಗೆ ಬೌದ್ದರುದ್ಯಾನ ಪದ ಸೇರ್ಪಡೆ ಶಿಫಾರಸಿಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು (ಜು.18): ಕುವೆಂಪು ವಿರಚಿತ ‘ಜಯ ಭಾರತ ಜನನಿಯ ತನುಜಾತೇ’ ನಾಡಗೀತೆಗೆ ಬೌದ್ದರುದ್ಯಾನ ಪದ ಸೇರ್ಪಡೆ ಶಿಫಾರಸಿಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಸ್ಪಷ್ಟಪಡಿಸಿದ್ದಾರೆ.

 ಶುಕ್ರವಾರ ಈ ಕುರಿತು ಸ್ಪಷ್ಟೀಕರಣ ನೀಡಿರುವ ಅವರು, ರಾಷ್ಟ್ರಕವಿ ಕುವೆಂಪು ಅವರು ರಚಿಸಿದ ಜಯ ಭಾರತ ಜನನಿಯ ತನುಜಾತೇ ನಾಡಗೀತೆಗೆ ಬೌದ್ದರುದ್ಯಾನ ಸಾಲು ಸೇರಿಸಲು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸಮಿತಿ ರಚಿಸಿತ್ತು ಎಂಬುದು ಸತ್ಯಕ್ಕೆ ದೂರವಾದ ಸಂಗತಿ ಎಂದಿದ್ದಾರೆ. 

ತಜ್ಞರ ಸಮಿತಿ ರಚಿಸಿದ್ದು ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ. ಸರ್ಕಾರದ ಆದೇಶದ ಪ್ರಕಾರ ಸಮಿತಿ ಅಧ್ಯಕ್ಷನಾಗಿದ್ದ ನಾನು ಗೌರವಾನ್ವಿತ ಸದಸ್ಯರ ಅಭಿಪ್ರಾಯವನ್ನು ಕ್ರೋಢೀಕರಿಸಿ ಸಂಸ್ಕೃತಿ ಇಲಾಖೆಗೆ ಸಲ್ಲಿಸಿ ನನ್ನ ಕರ್ತವ್ಯ ಪೂರೈಸಿದ್ದೇನೆ ಎಂದಿದ್ದಾರೆ.

ಇದರ ಹೊರತಾಗಿ ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೂ ಈ ವಿಷಯಕ್ಕೂ ಯಾವುದೇ ಸಂಬಂಧವಿಲ್ಲ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸರ್ವ ಸದಸ್ಯರ ಸಭೆಯಲ್ಲಿ ಈ ವಿಷಯದ ಬಗೆಗೆ ಚರ್ಚೆಯೂ ಆಗಿಲ್ಲ ಎಂದು ಪುರುಷೋತ್ತಮ ಬಿಳಿಮಲೆ ಸ್ಪಷ್ಟಪಡಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ತಾಯಿ ಚೆನ್ನಮ್ಮ ಆನಾರೋಗ್ಯ: ಭುವನೇಶ್ವರಿ ತಾಯಿ ಮೇಲೆ ಭಾರ ಹಾಕಿದ ಕುಮಾರಸ್ವಾಮಿ, ಬಾವುಕರಾದ ದೊಡ್ಡಗೌಡ್ರು!
ಮದ್ಯ, ತಂಬಾಕಿಗೆ ಇಲ್ಲದ ನಿಷೇಧ ಲಾಟರಿಗೆ ಏಕೆ? ರಾಜ್ಯದಲ್ಲಿ ಬ್ಯಾನ್‌ ತೆಗೆಯುವಂತೆ ಸಂಘದ ಆಗ್ರಹ!