ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ 4% ಮೀಸಲಾತಿ ಬಗ್ಗೆ ಭಾರೀ ವಿವಾದ!

Published : Nov 13, 2024, 06:48 AM IST
ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ 4% ಮೀಸಲಾತಿ ಬಗ್ಗೆ ಭಾರೀ ವಿವಾದ!

ಸಾರಾಂಶ

ಇಂತಹ ಬೇಡಿಕೆ ಸಲ್ಲಿಕೆಯಾಗಿದೆ. ಆದರೆ, ಸರ್ಕಾರ ಮೀಸಲು ನೀಡುವ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಇದು ಸುಳ್ಳು ಸುದ್ದಿ ಎಂದು ಸ್ಪಷ್ಟಪಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ 

ಬೆಂಗಳೂರು(ನ.13): ಗುತ್ತಿಗೆ ಕಾಮಗಾರಿಗಳಲ್ಲಿ ಮುಸ್ಲಿಮರಿಗೆ ಶೇ.4 ರಷ್ಟು ಮೀಸಲಾತಿ ಕಲ್ಪಿಸುವಂತೆ ಸರ್ಕಾರದ ಕೆಲ ಸಚಿವ, ಶಾಸಕರೂ ಸೇರಿದಂತೆ ಸಮುದಾಯದ ಹಲವು ನಾಯಕರು ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಬೇಡಿಕೆ ಇಟ್ಟಿದ್ದಾರೆ. 

ಈ ಬೇಡಿಕೆ ಬೆನ್ನಲ್ಲೇ ಸರ್ಕಾರ ಮೀಸಲು ನೀಡಲು ಮುಂದಾಗಿದೆ ಎಂಬ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಚರ್ಚೆ ಆರಂಭವಾಗಿದೆ. ನಂತರ ಸ್ಪಷ್ಟನೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಇಂತಹ ಬೇಡಿಕೆ ಸಲ್ಲಿಕೆಯಾಗಿದೆ. ಆದರೆ, ಸರ್ಕಾರ ಮೀಸಲು ನೀಡುವ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಇದು ಸುಳ್ಳು ಸುದ್ದಿ ಎಂದು ಸ್ಪಷ್ಟಪಡಿಸಿದ್ದಾರೆ. 

ನಾನಿನ್ನು ಬದುಕಿದ್ದೇನೆ, ಎಸ್‌ಸಿ ಎಸ್‌ಟಿ ಮೀಸಲಾತಿ ಮುಸ್ಲಿಮರಿಗೆ ನೀಡುವ ಕಾಂಗ್ರೆಸ್ ಅಜೆಂಡಾ ವಿರುದ್ಧ ಮೋದಿ ಕಿಡಿ!

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ ನಸೀರ್ ಅಹ್ಮದ್‌ ಕಳೆದ ಆಗಸ್ಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು, ಗುತ್ತಿಗೆ ಕಾಮಗಾರಿಗಳಲ್ಲಿ ಅಲ್ಪಸಂಖ್ಯಾತರ ಪ್ರವರ್ಗ-2 ಬಿಗೆ ಶೇ.4 ಕ್ಕೂ ಹೆಚ್ಚು ಮೀಸಲಾತಿ ಕಲ್ಪಿಸುವಂತೆ ಕೋರಿದ್ದಾರೆ. ಈ ಪತ್ರಕ್ಕೆ ಸಚಿವರಾದ ಜಮೀರ್ ಅಹ್ಮದ್ ಖಾನ್, ರಹೀಂ ಖಾನ್, ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್, ಶಾಸಕರಾದ ತನ್ವಿರ್ ಸೇರ್, ಅಬ್ದುಲ್ ಜಬ್ಬಾರ್, ಹ್ಯಾರಿಸ್, ರಿಜ್ವಾನ್, ಇಟ್ಬಾಲ್ ಹುಸೇನ್, ಬಲ್ಮೀಸ್ ಬಾನು ಮತ್ತಿತರರು ಸಹಿ ಹಾಕಿದ್ದಾರೆ.

ಬೇಡಿಕೆ ಬಂದಿದೆ, ಪ್ರಸ್ತಾವನೆ ಇಲ್ಲ: ಸಿಎಂ ಸ್ಪಷ್ಟನೆ 

ಬೆಂಗಳೂರು: ಗುತ್ತಿಗೆ ಕಾಮಗಾರಿಗಳಲ್ಲಿ ಮುಸ್ಲಿಮರಿಗೆ ಶೇ.4 ರಷ್ಟು ಮೀಸಲಾತಿ ಕಲ್ಪಿಸುವ ಬಗ್ಗೆ ವಿವಾದ ಎದ್ದ ಬೆನ್ನಲ್ಲೇ ಎಚ್ಚೆತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುತ್ತಿಗೆ ಕಾಮಗಾರಿಗಳಲ್ಲಿ ಮುಸ್ಲಿಂ ಸಮುದಾಯದವರಿಗೆ ಶೇ.4 ಮೀಸಲಾತಿ ನೀಡುವಂತೆ ಬೇಡಿಕೆ ಬಂದಿರುವುದು ನಿಜ. ಆದರೆ, ಈ ಸಂಬಂಧ ಸರ್ಕಾರದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಮಂಗಳವಾರ ಪತ್ರಿಕಾ ಪ್ರಕಟಣೆ ಮೂಲಕ ಸ್ಪಷ್ಟನೆ ನೀಡಿರುವ ಅವರು, ಮತ್ತೊಂದು ಹೊಸ ಸುಳ್ಳಿಗೆ ಸ್ಪಷ್ಟನೆ ನೀಡಬೇಕಾಗಿದೆ. 'ಕಾಮಗಾರಿ ಯಲ್ಲಿ ಮುಸ್ಲಿಂರಿಗೆ ಮೀಸಲಾತಿ ನೀಡುವ ಪ್ರಸ್ತಾವನೆ ಸರ್ಕಾರದ ಮುಂದೆ' ಎಂಬ ವರದಿ ಕೆಲ ಮಾಧ್ಯಮಗಳಲ್ಲಿ ಪ್ರಕಟವಾಗಿದೆ.

ಮುಸ್ಲಿಂರಿಗೆ ಮೀಸಲು ಕೊಟ್ಟರೆ ತಪ್ಪೇನಿಲ್ಲ ಗುತ್ತಿಗೆ ಕಾಮಗಾರಿಗಳಲ್ಲಿ ಅಲ್ಪಸಂಖ್ಯಾತ ಸಮುದಾ ಯಕ್ಕೆ ಮೀಸಲಾತಿ ನೀಡುವುದರಲ್ಲಿ ತಪ್ಪೇನಿಲ್ಲ. ಮೀಸಲಾತಿ ಕೇಳುವುದು ಎಲ್ಲರ ಹಕ್ಕು. ಎಲ್ಲ ಸಮುದಾಯದ ವರೂ ಮೀಸಲಾತಿ ಕೇಳಬಹುದು. ಆರ್ಥಿಕ, ಶೈಕ್ಷಣಿಕವಾಗಿ ಹಿಂದುಳಿದ ವರು ಮೀಸಲಾತಿ ಕೇಳಬಹುದು ಎಂದು ಸಚಿವ ಶಿವಾನಂದ ಪಾಟೀಲ ಹೇಳಿದ್ದಾರೆ. 

ಮುಸ್ಲಿಂರಿಗೆ ಒಬಿಸಿ ಮೀಸಲಾತಿ ಸತ್ಯ: ದಾಖಲೆ ಇದೆ ಎಂದ ಪ್ರಲ್ಹಾದ್‌ ಜೋಶಿ

ಮೀಸಲಾತಿ ಕೊಡಲು ಮುಸ್ಲಿಂರು ದಲಿತರಾ? ಸರ್ಕಾರಿ ಕಾಮಗಾರಿಗಳ ಟೆಂಡರ್‌ನಲ್ಲಿ ಮುಸ್ಲಿಮರಿಗೆ ಶೇ.4 ಮೀಸಲಾತಿ ಕೊಡುತ್ತಿದ್ದೀರಿ. ಮುಸ್ಲಿಮರೇನು ದಲಿತರಾ? ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡವಾ? ಇಡೀ ಕರ್ನಾಟಕವನ್ನೇ ಬರೆದುಕೊಟ್ಟು ಬಿಡಿ. ಇದೊಂದು ದಾಖಲೆ ಆಗಿ ಹೋಗಲಿ ಎಂದು ಪ್ರತಿಪಕ್ಷ ನಾಯಕ ಅಶೋಕ್ ತಿಳಿಸಿದ್ದಾರೆ. 

ಏನಿದು ವಿವಾದ? 

• ಸರ್ಕಾರದ ಗುತ್ತಿಗೆ ಕಾಮಗಾರಿ ಗಳಲ್ಲಿ ಪ್ರವರ್ಗ 2ಬಿಗೆ 4% ಮೀಸಲು ನೀಡುವಂತೆ ಬೇಡಿಕೆ 
• ಸಿಎಂ ರಾಜಕೀಯ ಕಾರ್ಯ ದರ್ಶಿ ನಸೀರ್ ಅಹಮದ್ ರಿಂದ ಆಗಸ್ಟಲ್ಲೇ ಸಿದ್ದುಗೆ ಪತ್ರ • ಸಚಿವರಾದ ಜಮೀರ್, ರಹೀಂ ಖಾನ್ ಸೇರಿ ಹಲವು ಮುಸ್ಲಿಂ ಶಾಸಕರಿಂದ ಈ ಪತ್ರಕ್ಕೆ ಸಹಿ 
• ಪತ್ರ ಸ್ವೀಕರಿಸಿದ ಬಳಿಕ 'ಪರಿಶೀಲಿಸಿ...' ಎಂದು ಸಹಿ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ . ಪತ್ರ ಬಹಿರಂಗ, ಮುಸ್ಲಿಮರಿಗೆ ಗುತ್ತಿಗೆಯಲ್ಲಿ ಮೀಸಲಾತಿ ಕಲ್ಪಿಸಲಾಗುತ್ತಿದೆ ಎಂದು ಸುದ್ದಿ 
• ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಭಾರಿ ಚರ್ಚೆ: ಬೆನ್ನಲ್ಲೇ ಪ್ರಸ್ತಾವ ಇಲ್ಲ ಎಂದ ಸಿಎಂ 
* ಸರ್ಕಾರ ಮೀಸಲು ನೀಡುವ ತೀರ್ಮಾನ ಕೈಗೊಂಡಿಲ್ಲ. ಇದು ಸುಳ್ಳು ಸುದ್ದಿ: ಸಿದ್ದು

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಇನ್ಮುಂದೆ ನೂರು ಗ್ಯಾರಂಟಿ ಘೋಷಣೆ ಮಾಡಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಛಲವಾದಿ ನಾರಾಯಣಸ್ವಾಮಿ
Breaking ಮಂಡ್ಯ ಬಸ್ ಅಪಘಾತದಲ್ಲಿ 23 ಪ್ರಯಾಣಿಕರಿಗೆ ಗಾಯ, ಇಬ್ಬರು ಗಂಭೀರ