
ಮಂಡ್ಯ (ಏ.15): ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಮತಾಂತರ ವಿಚಾರ ಕಳೆದ ಎರಡು ದಿನಗಳಿಂದ ಭಾರೀ ಸದ್ದು ಮಾಡುತ್ತಿದೆ. ಮಸೀದಿ ಹೋರಾಟದ ಬಳಿಕ ಇದೀಗ ಬಲವಂತದ ಮತಾಂತರದ ವಿರುದ್ಧ ಹಿಂದೂಪರ ಸಂಘಟನೆಗಳು ಸಿಡಿದೆದ್ದಿವೆ. ಮುಸ್ಲಿಂ ಮತ್ತು ಕ್ರಿಶ್ಚಿಯನ್ ಮಿಷನರಿಗಳ ವಿರುದ್ಧ ಆರೋಪ ಮಾಡಿರುವ ಹಿಂದೂ ಸಂಘಟನೆಗಳು, ಸದ್ದಿಲ್ಲದೆ ಅಮಾಯಕರನ್ನು ಟಾರ್ಗೆಟ್ ಮಾಡಿ, ಲಕ್ಷ ಲಕ್ಷ ಹಣದ ಆಮಿಷ ಒಡ್ಡುವ ಮೂಲಕ ಮತಾಂತರಗೊಳಿಸುತ್ತಿರುವ ಆರೋಪ ಮಾಡಿವೆ.
ಬಲವಂತದ ಮತಾಂತರದ ವಿರುದ್ಧ ಶ್ರೀರಂಗಪಟ್ಟಣ ಹಿಂದೂ ಹಿತರಕ್ಷಣಾ ಸಮಿತಿಯ ನೇತೃತ್ವದಲ್ಲಿ ಇಂದು ಬೆಳಿಗ್ಗೆ 10:30ಕ್ಕೆ ಬೃಹತ್ ಪ್ರತಿಭಟನಾ ಮೆರವಣಿಗೆಗೆ ಕರೆ ನೀಡಲಾಗಿದೆ. ಶ್ರೀರಂಗಪಟ್ಟಣ ಬಸ್ ನಿಲ್ದಾಣದಿಂದ ಪೊಲೀಸ್ ವೃತ್ತ ನಿರೀಕ್ಷಕರ ಕಚೇರಿವರೆಗೆ ನಡೆಯಲಿರುವ ಈ ಮೆರವಣಿಗೆಯ ಮೂಲಕ ಬಲವಂತದ ಮತಾಂತರವನ್ನು ಖಂಡಿಸಿ, ಆರೋಪಿಗಳ ಬಂಧನಕ್ಕೆ ಒತ್ತಾಯಿಸಲಾಗುವುದು ಎಂದು ಸಂಘಟನೆಗಳು ತಿಳಿಸಿವೆ.
ಇದನ್ನೂ ಓದಿ: ಮಂಡ್ಯ: ಮತಾಂತರಕ್ಕೆ ಒಪ್ಪದ ಪತ್ನಿ, ಅತ್ತೆ ಮೇಲೆ ಮಾರಣಾಂತಿಕ ಹಲ್ಲೆ?
ಇತ್ತೀಚೆಗೆ ಶ್ರೀರಂಗಪಟ್ಟಣದಲ್ಲಿ ನಡೆದ ಘಟನೆಯೊಂದರಲ್ಲಿ, ಮತಾಂತರಕ್ಕೆ ಒಪ್ಪದ ಪತ್ನಿ ಹಾಗೂ ಅತ್ತೆಯ ಮೇಲೆ ಗಂಭೀರ ಹಲ್ಲೆ ನಡೆಸಿದ ಪ್ರಕರಣವೂ ಹಿಂದೂ ಸಂಘಟನೆಗಳ ಆಕ್ರೋಶ, ಹೋರಾಟಕ್ಕೆ ಕಾರಣವಾಗಿದೆ.ಈ ಘಟನೆಯಿಂದ ಕೆರಳಿರುವ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು, ಮತಾಂತರಕ್ಕೆ ಒಳಗಾಗದವರ ಮೇಲೆ ದೌರ್ಜನ್ಯ ನಡೆಸುತ್ತಿರುವವರನ್ನು ಕಾನೂನಿನ ಕಟಕಟೆಗೆ ಒಳಪಡಿಸಬೇಕೆಂದು ಪಟ್ಟು ಹಿಡಿದಿದ್ದಾರೆ.
ಬಲವಂತದ ಮತಾಂತರದ ವಿರುದ್ಧ ಸಮಾಜದಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ಬೃಹತ್ ಜನಾಂದೋಲನಕ್ಕೆ ಕರೆ ನೀಡಲಾಗಿದ್ದು, ಶ್ರೀರಂಗಪಟ್ಟಣದಲ್ಲಿ ಇಂದು ನಡೆಯಲಿರುವ ಈ ಹೋರಾಟವು ರಾಜ್ಯದಾದ್ಯಂತ ಗಮನ ಸೆಳೆಯುವ ಸಾಧ್ಯತೆಯಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ