
ಮೈಸೂರು (ಸೆ.22): 'ಸಿಎಂ ಸಿದ್ದರಾಮಯ್ಯ ಚುನಾವಣೆಗೋಸ್ಕರ ಕುಕ್ಕರ್ ಕೊಟ್ಟಿದ್ದಾರೆ ಅಂತಾ ಎಲ್ಲೂ ಹೇಳಿಲ್ಲ ಎಂದು ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ ಹೇಳಿದರು.
ಮಡಿವಾಳ ಸಮುದಾಯಕ್ಕೆ ಕುಕ್ಕರ್ ಹಾಗೂ ಐರನ್ ಬಾಕ್ಸ್ ಹಂಚಿಕೆ ವಿಚಾರ ಸಂಬಂಧ ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾನು ಹೇಳಿದ್ದೇ ಒಂದು, ಮಾಧ್ಯಮಗಳು ತೋರಿಸುತ್ತಿರುವುದೇ ಇನ್ನೊಂದು. ಆದರೂ ನಾನು ಮಾತನಾಡುವಾಗ ಸರಿಯಾಗಿ ಮಾತನಾಡದೇ ಇರಬಹುದು. ಆದರೆ ನನ್ನ ಹೇಳಿಕೆ ಆ ರೀತಿ ಅರ್ಥವನ್ನೂ ಕೊಟ್ಟಿರಬಹುದು. ಅದು ನಡೆದಿರುವುದು ಚುನಾವಣೆ ನೀತಿ ಸಂಹಿತೆಗೂ ಮುಂಚೆ ಎನ್ನುವ ಮೂಲಕ ಉಲ್ಟಾ ಹೊಡೆದರು.
ವಿಧಾನಸಭಾ ಚುನಾವಣೇಲಿ ಕುಕ್ಕರ್, ಇಸ್ತ್ರಿ ಪೆಟ್ಟಿಗೆ ಕೊಟ್ಟು ಸಿದ್ದರಾಮಯ್ಯ ಗೆದ್ದಿದ್ದಾರೆ; ಕೆಎಸ್ ಈಶ್ವರಪ್ಪ ಆರೋಪ
ಜನವರಿ 26 ರಂದು ಮಡಿವಾಳ ಸಂಘದ ರಾಜ್ಯಾಧ್ಯಕ್ಷ ನಂಜಪ್ಪ ಅವರ ಹುಟ್ಟುಹಬ್ಬದ ಪ್ರಯಕ್ತ ವಿತರಣೆ ಮಾಡಲಾಗಿದೆ. ನನ್ನ ತಂದೆ ಸಿಎಂ ಸಿದ್ದರಾಮಯ್ಯ ಸ್ವತಃ ಕೈಯಿಂದ ಕೂಡ ಕೊಟ್ಟಿಲ್ಲ. ಇದರ ಬಗ್ಗೆ ನಾನು ಮಾಡಿದ್ದು. ಆದರೆ ಮಾಧ್ಯಮದಲ್ಲಿ ಚುನಾವಣೆಗಾಗಿ ಹಂಚಿಕೆ ಮಾಡಲಾಗಿದೆ ಎಂದು ತೋರಿಸುತ್ತಿದ್ದಾರೆ. ಆ ಕಾರ್ಯಕ್ರಮದ ವೀಡಿಯೋ, ಪೋಟೋಗಳೂ ಇವೆ. ಈಗಲೂ ನೋಡಿ ಪರಿಶೀಲಿಸಬಹುದುದ. ಅದರಲ್ಲಿ ನಮ್ಮ ತಂದೆಯವರು ಕೈಯಿಂದ ದುಡ್ಡುಕೊಟ್ಟಿದ್ದಾಗಲಿ, ಕುಕ್ಕರ್ ಹಂಚಿದ್ದಾಗಲಿ ಇಲ್ಲ ಎಂದು ಸ್ಪಷ್ಟಪಡಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ