ಭಲೇ ಖಾಕಿ: ಪೊಲೀಸ್ ವಾಹನದಲ್ಲೇ ಬಂದು ಎಣ್ಣೆ ಪಾರ್ಸಲ್!

Published : Dec 05, 2018, 08:32 PM IST
ಭಲೇ ಖಾಕಿ: ಪೊಲೀಸ್ ವಾಹನದಲ್ಲೇ ಬಂದು ಎಣ್ಣೆ ಪಾರ್ಸಲ್!

ಸಾರಾಂಶ

ಕರ್ತವ್ಯ ನಿರತ ಪೊಲೀಸರಿಂದ ಸರ್ಕಾರಿ ಪೊಲೀಸ್ ವಾಹನ ದುರ್ಬಳಕೆ! ಪೊಲೀಸ್ ವಾಹನದಲ್ಲೇ ಬಾರ್ ಗೆ ಬಂದು ಮದ್ಯ ಪಾರ್ಸಲ್! ವಿಜಯಪುರ ಜಿಲ್ಲೆಯ ಕೂಡಗಿ ಉಷ್ಣ ವಿದ್ಯುತ್ ಸ್ಥಾವರ ವ್ಯಾಪ್ತಿಯಲ್ಲಿ ಘಟನೆ!ತಪ್ಪಿತಸ್ಥ ಪೊಲೀಸರ ವಿರುದ್ಧ ಕ್ರಮಕ್ಕೆ ಗ್ರಾಮಸ್ಥರ ಒತ್ತಾಯ

ವಿಜಯಪುರ(ಡಿ.05): ಪೊಲೀಸ್ ವಾಹನವನ್ನೇ ಪೊಲೀಸರು ಬಾರ್ ಅಂಡ್ ರೆಸ್ಟೋರೆಂಟ್ ಗೆ ತೆಗೆದುಕೊಂಡು ಬಂದ ಘಟನೆ ವಿಜಯಪುರದಲ್ಲಿ ನಡೆದಿದೆ. 

ಇಲ್ಲಿನ ಕೂಡಗಿ ಉಷ್ಣ ವಿದ್ಯುತ್ ಸ್ಥಾವರ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೊಲೀಸರು, ಪೊಲೀಸ್ ಡಿಎಆರ್ ವ್ಯಾನ್ ಸಮೇತ ಬಾರ್‌ಗೆ ಆಗಮಿಸಿ ಮದ್ಯ ಪಾರ್ಸಲ್ ತೆಗೆದುಕೊಂಡು ಹೋಗಿದ್ದಾರೆ ಎನ್ನಲಾಗಿದೆ.

KA 28 G 272 ನಂಬರ್‌ನ ಪೊಲೀಸ್ ವಾಹನದಲ್ಲೇ NTPCಯ ತೆಲಗಿ ಗ್ರಾಮದ ಬಳಿ ಇರುವ ಸದಾಶಿವ ಬಾರ್ ಗೆ ಬಂದು, ಮದ್ಯ ಪಾರ್ಸಲ್ ತೆಗೆದುಕೊಂಡು ಹೋಗಿದ್ದಾರೆ ಎಂದು ಗ್ರಾಮಸ್ಥರು ದೂರಿದ್ದಾರೆ. 

ಈ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಲಾಗಿದ್ದು, ಈ ಕೂಡಲೇ ತಪ್ಪಿತಸ್ಥ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ವನ್ಯಜೀವಿ ಸಂರಕ್ಷಣೆ: ಏಷ್ಯಾನೆಟ್ ಸುವರ್ಣ ನ್ಯೂಸ್ & ಕನ್ನಡಪ್ರಭದ ಅಭಿಯಾನಕ್ಕೆ ಗೋಲ್ಡನ್ ಸ್ಟಾರ್ ಗಣೇಶ್ ಸಾಥ್!
ಚಿಕ್ಕಮಗಳೂರು: ಹೈಟೆಕ್ ಕಾರ್‌ನಲ್ಲಿ ಗೋ ಕಳ್ಳತನ; ಸಿನಿಮೀಯ ಶೈಲಿಯಲ್ಲಿ ಹಿಂದೂಪರ ಸಂಘಟನೆ ಕಾರ್ಯಕರ್ತರಿಂದ ಚೇಸಿಂಗ್!