ಬೆಳಗಾವಿ, ವಿಜಯನಗರ, ಬಳ್ಳಾರಿಯಲ್ಲಿ ಕೊರೋನಾ ಸೋಂಕು: ಆತಂಕ ಪಡುವ ಸ್ಥಿತಿ ಇಲ್ಲ

Kannadaprabha News   | Kannada Prabha
Published : May 25, 2025, 05:39 AM IST
corona virus

ಸಾರಾಂಶ

ವಿಶ್ವವನ್ನೇ ಬೆಚ್ಚಿಬೀಳಿಸಿದ್ದ ಕೊರೋನಾ ಮಹಾಮಾರಿ ರಾಜ್ಯಕ್ಕೆ ಮತ್ತೆ ವಕ್ಕರಿಸಿದ್ದು, ಬೆಳಗಾವಿ, ಬಳ್ಳಾರಿ, ವಿಜಯನಗರ ಜಿಲ್ಲೆಗಳಲ್ಲಿ ತಲಾ ಒಬ್ಬರಿಗೆ ಕೊವೀಡ್ ಪಾಸಿಟಿವ್ ದೃಢಪಟ್ಟಿದೆ.

ಬೆಳಗಾವಿ / ಬಳ್ಳಾರಿ (ಮೇ.25): ವಿಶ್ವವನ್ನೇ ಬೆಚ್ಚಿಬೀಳಿಸಿದ್ದ ಕೊರೋನಾ ಮಹಾಮಾರಿ ರಾಜ್ಯಕ್ಕೆ ಮತ್ತೆ ವಕ್ಕರಿಸಿದ್ದು, ಬೆಳಗಾವಿ, ಬಳ್ಳಾರಿ, ವಿಜಯನಗರ ಜಿಲ್ಲೆಗಳಲ್ಲಿ ತಲಾ ಒಬ್ಬರಿಗೆ ಕೊವೀಡ್ ಪಾಸಿಟಿವ್ ದೃಢಪಟ್ಟಿದೆ. ನ್ಯುಮೋನಿಯಾದಿಂದ ಬಳಲುತ್ತಿದ್ದ ಬೆಳಗಾವಿ ನಗರದ 25 ವರ್ಷದ ಗರ್ಭಿಣಿಗೆ ಕೊವೀಡ್‌ ವೈರಸ್‌ ಕಂಡು ಬಂದಿದ್ದು, ಕೆಎಲ್ಇ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇವರ ಜತೆಗೆ ಪ್ರಾಥಮಿಕ ಸಂಪರ್ಕ ಹೊಂದಿದ್ದ 8 ಜನರ ಪರೀಕ್ಷೆ ಮಾಡಲಾಗಿದ್ದು, ಎಲ್ಲರ ರಿಪೋರ್ಟ್ ನೆಗೆಟಿವ್ ಬಂದಿದೆ. ಕೊರೋನಾ ಮುಂಜಾಗ್ರತಾ ಕ್ರಮಕ್ಕಾಗಿ ಸರ್ಕಾರದಿಂದ ಗೈಡ್‌ಲೈನ್ಸ್ ಬಂದಿದ್ದು, ಸದ್ಯ ಆತಂಕ ಪಡುವ ಸ್ಥಿತಿ ಇಲ್ಲ ಎಂದು ಬೆಳಗಾವಿ ಡಿಎಚ್ಒ ಡಾ.ಈಶ್ವರ ಗಡಾದ ತಿಳಿಸಿದ್ದಾರೆ.

ಬಳ್ಳಾರಿಯಲ್ಲಿ ಕೊವೀಡ್‌ ಪಾಸಿಟಿವ್ ಆಗಿದ್ದ 40 ವರ್ಷದ ವ್ಯಕ್ತಿ ಗುಣಮುಖರಾಗಿ ಚೇತರಿಸಿಕೊಂಡಿದ್ದಾರೆ. ವಿಜಯನಗರ ಜಿಲ್ಲೆ ಹೊಸಪೇಟೆಯ 54 ವರ್ಷದ ಮಹಿಳೆಯಲ್ಲಿ ಕೊರೋನಾ ದೃಢಪಟ್ಟಿದ್ದು, ಹೋಂ ಐಸೋಲೇಷನ್‌ನಲ್ಲಿದ್ದಾರೆ. ಈ ಇಬ್ಬರೂ ಉಸಿರಾಟದ ಸಮಸ್ಯೆ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದಾಗ ಕೊರೋನಾ ತಪಾಸಣೆ ಮಾಡಲಾಗಿತ್ತು. ಆಗ ಇಬ್ಬರಿಗೆ ಪಾಸಿಟಿವ್ ದೃಢಪಟ್ಟಿದೆ. ಹೊಸಪೇಟೆ ಮಹಿಳೆ ಮುಂಬಯಿ ಟ್ರಾವೆಲ್ ಹಿಸ್ಟರಿ ಹೊಂದಿದ್ದು, ಬಳ್ಳಾರಿ ವ್ಯಕ್ತಿಗೆ ಯಾವುದೇ ಟ್ರಾವೆಲ್ ಹಿಸ್ಟರಿ ಇಲ್ಲ ಎಂದು ಬಳ್ಳಾರಿ ಡಿಎಚ್ಒ ಡಾ.ಎಲ್.ಆರ್.ಶಂಕರ ನಾಯ್ಕ ಮಾಹಿತಿ ನೀಡಿದ್ದಾರೆ.

ನ್ಯುಮೋನಿಯಾದಿಂದ ಬಳಲುತ್ತಿದ್ದ ಬೆಳಗಾವಿ ನಗರದ 25 ವರ್ಷದ ಗರ್ಭಿಣಿಗೆ ಕೊವೀಡ್‌ ವೈರಸ್‌ ಕಂಡು ಬಂದಿದ್ದು, ಕೆಎಲ್ಇ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇವರ ಜತೆಗೆ ಪ್ರಾಥಮಿಕ ಸಂಪರ್ಕ ಹೊಂದಿದ್ದ 8 ಜನರ ಪರೀಕ್ಷೆ ಮಾಡಲಾಗಿದ್ದು, ಎಲ್ಲರ ರಿಪೋರ್ಟ್ ನೆಗೆಟಿವ್ ಬಂದಿದೆ. ಕೊರೋನಾ ಮುಂಜಾಗ್ರತಾ ಕ್ರಮಕ್ಕಾಗಿ ಸರ್ಕಾರದಿಂದ ಗೈಡ್‌ಲೈನ್ಸ್ ಬಂದಿದ್ದು, ಸದ್ಯ ಆತಂಕ ಪಡುವ ಸ್ಥಿತಿ ಇಲ್ಲ ಎಂದು ಬೆಳಗಾವಿ ಡಿಎಚ್ಒ ಡಾ.ಈಶ್ವರ ಗಡಾದ ತಿಳಿಸಿದ್ದಾರೆ.

ಬಳ್ಳಾರಿಯಲ್ಲಿ ಕೊವೀಡ್‌ ಪಾಸಿಟಿವ್ ಆಗಿದ್ದ 40 ವರ್ಷದ ವ್ಯಕ್ತಿ ಗುಣಮುಖರಾಗಿ ಚೇತರಿಸಿಕೊಂಡಿದ್ದಾರೆ. ವಿಜಯನಗರ ಜಿಲ್ಲೆ ಹೊಸಪೇಟೆಯ 54 ವರ್ಷದ ಮಹಿಳೆಯಲ್ಲಿ ಕೊರೋನಾ ದೃಢಪಟ್ಟಿದ್ದು, ಹೋಂ ಐಸೋಲೇಷನ್‌ನಲ್ಲಿದ್ದಾರೆ. ಈ ಇಬ್ಬರೂ ಉಸಿರಾಟದ ಸಮಸ್ಯೆ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದಾಗ ಕೊರೋನಾ ತಪಾಸಣೆ ಮಾಡಲಾಗಿತ್ತು. ಆಗ ಇಬ್ಬರಿಗೆ ಪಾಸಿಟಿವ್ ದೃಢಪಟ್ಟಿದೆ. ಹೊಸಪೇಟೆ ಮಹಿಳೆ ಮುಂಬಯಿ ಟ್ರಾವೆಲ್ ಹಿಸ್ಟರಿ ಹೊಂದಿದ್ದು, ಬಳ್ಳಾರಿ ವ್ಯಕ್ತಿಗೆ ಯಾವುದೇ ಟ್ರಾವೆಲ್ ಹಿಸ್ಟರಿ ಇಲ್ಲ ಎಂದು ಬಳ್ಳಾರಿ ಡಿಎಚ್ಒ ಡಾ.ಎಲ್.ಆರ್.ಶಂಕರ ನಾಯ್ಕ ಮಾಹಿತಿ ನೀಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶ್ರೀರಂಗಪಟ್ಟಣ ಮಸೀದಿ ಕೆಡವುತ್ತೇವೆಂದರೆ? ನಾವು ಕೈಗೆ ಬಳೆ ತೊಟ್ಟು ಕೂತಿಲ್ಲ-ಅಬ್ದುಲ್ ರಜಾಕ್!
ಐಷಾರಾಮಿ ಕಾರ್ಟಿಯರ್ ವಾಚ್‌: ಲೋಕಾಯುಕ್ತ ಅಫಿಡವಿಟ್ ರಿವೀಲ್ ಮಾಡಿದ ಡಿ.ಕೆ. ಶಿವಕುಮಾರ್!