ಕರ್ನಾಟಕದಲ್ಲಿ ಕೊರೋನಾ ಎರಡನೇ ಅಲೆ ದಿನ ಕಳೆದಂತೆ ತೀವ್ರವಾಗುತ್ತಿದೆ. ಇಂದು (ಬುಧವಾರ) ರಾಜ್ಯದ 30 ಜಿಲ್ಲೆಗಳಲ್ಲೂ ಕೊರೋನಾ ಪಾಸಿಟಿವ್ ಕೇಸ್‌ಗಳು ವರದಿಯಾಗಿದ್ದು, ಸಾರ್ವಜನಿಕರಲ್ಲಿ ಮತ್ತಷ್ಟು ಆತಂಕ ಮೂಡಿಸಿದೆ.
ಬೆಂಗಳೂರು, (ಮಾ.24): ಭಾರತದಲ್ಲಿ ರೂಪಾಂತರ ಕೊರೋನಾ ವೈರಾಣು ಪತ್ತೆಯಾಗಿದೆ. ಅದರಲ್ಲೂ ಕರ್ನಾಟಕದಲ್ಲಿ ಇದು ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳಿತ್ತಿದೆ.
ಹೌದು.. ರಾಜ್ಯದಲ್ಲಿ ಇಂದು (ಬುಧವಾರ) ಹೊಸದಾಗಿ 2298 ಜನರಿಗೆ ಕೊರೋನಾ ಪಾಸಿಟಿವ್ ಕೇಸ್‌ಗಳು ಪತ್ತೆಯಾಗಿದ್ದು, 12 ಜನ ಸೋಂಕಿತರು ಮೃತಪಟ್ಟಿದ್ದಾರೆ.
ಕರ್ನಾಟಕದಲ್ಲಿ ಮತ್ತೆ ಲಾಕ್‌ಡೌನ್ ಎಚ್ಚರಿಕೆ ಕೊಟ್ಟ ಸಚಿವ ಸುಧಾಕರ್
ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 9,75,955 ಕ್ಕೆ ಏರಿಕೆಯಾಗಿದ್ರೆ, ಇದುವರೆಗೆ 12,461 ಜನ ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 995 ಜನ ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 9,46,589 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 16,886 ಸಕ್ರಿಯ ಪ್ರಕರಣಗಳು ಇದ್ದು, ಈ ಪೈಕಿ 143 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇನ್ನು ರಾಜಧಾನಿ ಬೆಂಗಳೂರಿನಲ್ಲಿ ಬುಧವಾರ ಬರೋಬ್ಬರಿ 1398 ಜನರಿಗೆ ಸೋಂಕು ತಗಲಿದ್ದು, 7 ಜನ ಸೋಂಕಿತರು ಮೃತಪಟ್ಟಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 11,520 ಕ್ಕೆ ಏರಿಕೆಯಾಗಿದೆ.