ಕರ್ನಾಟಕದಲ್ಲಿ ಕೊರೋನಾ ಎರಡನೇ ಅಲೆ ಆರ್ಭಟ ಮುಂದುವರೆದಿದ್ದು, ದಿನದಿಂದ ದಿನ್ಕೆಕ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗುತ್ತಿವೆ.
ಬೆಂಗಳೂರು, (ಮಾ.26): ರಾಜ್ಯದಲ್ಲಿ ಕೊರೋನಾ 2ನೇ ಅಲೆ ಶುರುವಾಗಿದ್ದು ಇಂದು (ಶುಕ್ರವಾರ) 2,566 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇನ್ನು ಕೊರೋನಾ ಸೋಂಕಿನಿಂದ 13 ಮಂದಿ ಮೃತಪಟ್ಟಿದ್ದಾರೆ.
ಇದರೊಂದಿಗೆ ಸೋಂಕಿತರ ಸಂಖ್ಯೆ 9,81,044ಕ್ಕೆ ಏರಿಕೆಯಾಗಿದ್ರೆ, ಸಾವಿನ ಸಂಖ್ಯೆ 12,484ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಡಬಲ್ ರೂಪಾಂತರಿ ವೈರಸ್ : 2 ತಿಂಗಳು ಬಹಳ ಎಚ್ಚರಿಕೆ ವಹಿಸಿ
ಬೆಂಗಳೂರಿನಲ್ಲಿ ಶುಕ್ರವಾರ 1,490 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 4,24,349ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ ಮೂರು ಮಂದಿ ಬಲಿಯಾಗಿದ್ದಾರೆ.
ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 1,207 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 9,48,988ಕ್ಕೆ ಏರಿಕೆಯಾಗಿದೆ. ಇನ್ನು 19,553 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 174 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.