ಕರ್ನಾಟಕಕ್ಕೆ ಕೊರೋನಾಘಾತ: ಸೋಂಕಿನ ಪ್ರಮಾಣದಲ್ಲಿ ಭಾರೀ ಏರಿಕೆ!

By Suvarna NewsFirst Published Mar 28, 2021, 7:39 PM IST
Highlights

ಕರ್ನಾಟಕದಲ್ಲಿ ಕೊರೋನಾ ಎರಡನೇ ಅಬ್ಬರ ಜೋರಾಗಿದ್ದು, ದಿನದಿಂದ ದಿನಕ್ಕೆ ಪಾಸಿಟಿವ್ ಕೇಸ್‌ಗಳ ಸಂಖ್ಯೆಯಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿದೆ.

ಬೆಂಗಳೂರು, (ಮಾ.28): ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಅಬ್ಬರು ಜೋರಾಗುತ್ತಿದೆ. ಇಂದು (ಭಾನುವಾರ) ಒಂದೇ ದಿನ 3082 ಜನರಿಗೆ  ಸೋಂಕು ತಗುಲಿರುವುದು ದೃಢಪಟ್ಟಿದ್ದು, 12 ಜನ ಸೋಂಕಿತರು ಮೃತಪಟ್ಟಿದ್ದಾರೆ. 

ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 9,87,012 ಕ್ಕೆ ಏರಿಕೆಯಾಗಿದ್ರೆ, ಇದುವರೆಗೆ 12,504 ಜನ ಸೋಂಕಿತರು ಮೃತಪಟ್ಟಿದ್ದಾರೆ ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಆಘಾತಕಾರಿ ಸುದ್ದಿ: ಇಂತಹ ಲಕ್ಷಣ ಇದ್ದವರಲ್ಲೇ ಕೊರೋನಾ ಸೋಂಕು ಹೆಚ್ಚಳ..!

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 1285 ಜನ ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 9,51,412 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.  ಇನ್ನು 23,037 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 204 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇವತ್ತು ಬೆಂಗಳೂರಿನಲ್ಲಿ 2004 ಜನರಿಗೆ ಸೋಂಕು ತಗುಲಿದ್ದು, 7 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಇದರೊಂದಿಗೆ ಸಿಲಿಕಾನ್ ಸಿಟಿಯಲ್ಲಿ 15,882 ಸಕ್ರಿಯ ಪ್ರಕರಣಗಳು ಇವೆ.

click me!