Coronavirus : ಸಕ್ಕರೆ ನಾಡು ಮಂಡ್ಯ ಜಿಲ್ಲೆಯಲ್ಲಿ ಒಂದೇ ದಿನ 23 ಮಂದಿಗೆ ಕರೋನಾ!

Suvarna News   | Asianet News
Published : Jan 01, 2022, 10:29 PM IST
Coronavirus : ಸಕ್ಕರೆ ನಾಡು ಮಂಡ್ಯ ಜಿಲ್ಲೆಯಲ್ಲಿ ಒಂದೇ ದಿನ 23 ಮಂದಿಗೆ ಕರೋನಾ!

ಸಾರಾಂಶ

ಮಂಡ್ಯ ಜಿಲ್ಲೆಯಲ್ಲಿ ಕರೋನಾ ಮಹಾಸ್ಫೋಟ ಒಂದೇ ದಿನ 23 ಮಂದಿಗೆ ವಕ್ಕರಿಸಿದ ಮಹಾಮಾರಿ ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 59ಕ್ಕೆ ಏರಿಕೆ

ಮಂಡ್ಯ (ಜ.1): ರಾಜ್ಯದ ಮಂಡ್ಯ ಜಿಲ್ಲೆಯಲ್ಲಿ ಕರೋನಾ (Corona) ತನ್ನ ಅಬ್ಬರವನ್ನು ಮುಂದುವರಿಸಿದೆ. ಶನಿವಾರ ಒಂದೇ ದಿನ ಜಿಲ್ಲೆಯಲ್ಲಿ ಒಟ್ಟು 23 ಕರೋನಾ (Corona) ಪ್ರಕರಣಗಳು ದಾಖಲಾಗಿವೆ. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನಲ್ಲಿರುವ ಆದಿಚುಂಚನಗಿರಿ ನರ್ಸಿಂಗ್ ಕಾಲೇಜಿನ (Adichunchanagiri Nursing College) 4 ವಿದ್ಯಾರ್ಥಿಗಳಿಗೆ ಬೆಳಗ್ಗೆ ಕರೋನಾ ಪಾಸಿಟಿವ್ (Covid positive)  ಆಗಿರುವುದು ದೃಢಪಟ್ಟಿದ್ದರೆ, ಸಂಜೆಯ ವೇಳೆಗೆ ಶ್ರೀರಂಗಪಟ್ಟಣ (Srirangapatna) ತಾಲೂಕಿನಲ್ಲಿಯೇ 12 ಜನರಿಗೆ ಮಹಾಮಾರಿ ವಕ್ಕರಿಸಿದೆ.

ಡಿ.20ರಂದು ಕೋಲ್ಕತ್ತಾದಿಂದ ಆಗಮಿಸಿದ್ದ 67 ವಿದ್ಯಾರ್ಥಿಗಳಿಗೆ 1 ವಾರದ ಹೋಂ ಕ್ವಾರಂಟೈನ್‌ (Home Quarantine) ಬಳಿಕ ಸಾಮೂಹಿಕ ಪರೀಕ್ಷೆಯನ್ನು ನಡೆಸಲಾಯಿತು. 67 ವಿದ್ಯಾರ್ಥಿಗಳ ಪೈಕಿ ನಾಲ್ವರಿಗೆ ಕೊರೋನಾ ಸೋಂಕು ಪತ್ತೆಯಾಗಿದೆ. ಸೋಂಕಿತ ವಿದ್ಯಾರ್ಥಿಗಳ ಸಂಪರ್ಕದಲ್ಲಿದ್ದ 137 ಜನರಿಗೂ ಪರೀಕ್ಷೆಯನ್ನು ನಡೆಸಲಾಗಿದ್ದು,  ಸಂಪರ್ಕಿತರ ರಿಪೋರ್ಟ್ (Report) ಕಾಯಲಾಗುತ್ತಿದೆ. ಇನ್ನೊಂದೆಡೆ ತಮಿಳುನಾಡಿನ (Tamil Nadu) ಓಂ ಶಕ್ತಿ ದೇವಾಲಯಕ್ಕೆ ಹೋಗಿ ಬಂದಿದ್ದವರ ಪೈಕಿ 12 ಮಂದಿಗೆ ಕರೋನಾ ತಗುಲಿದೆ. ಇದರಿಂದಾಗಿ ಮಂಡ್ಯ ಜಿಲ್ಲೆಯಲ್ಲಿ ಒಟ್ಟಾರೆ ಸಕ್ರಿಯ ಪ್ರಕರಣಗಳ ಸಂಖ್ಯೆ 59ಕ್ಕೇರಿದ್ದರೆ, ಒಟ್ಟು ಸೋಂಕಿತರ ಪ್ರಮಾಣ 73, 727 ಮಂದಿ ಆಗಿದ್ದಾರೆ. 

ಇನ್ನು ಕರ್ನಾಟಕ ರಾಜ್ಯದಲ್ಲಿ ಜನವರಿ 1 ರಂದು ಹೊಸದಾಗಿ 1033 ಜನರಲ್ಲಿ ಕರೋನಾ ಸೋಂಕು ದೃಢವಾಗಿದೆ. ಈ ಮೂಲಕ ಒಟ್ಟಾರೆಯಾಗಿ ರಾಜ್ಯದಲ್ಲಿ ಕರೋನಾ ಸೋಂಕಿತರ ಸಂಖ್ಯೆ 30,08,370 ಕ್ಕೆ ಏರಿಕೆಯಾಗಿದೆ. ಇವುಗಳ ಪೈಕಿ 29,60,615 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ () ಮಾಹಿತಿ ನೀಡಿದೆ. ರಾಜ್ಯದಲ್ಲಿ ಶನಿವಾರ ಕರೋನಾ ಕಾರಣದಿಂದಾಗಿ 5 ಮಂದಿ ಮೃತಪಡುವುದರೊಂದಿಗೆ ಕರೋನಾದಿಂದ ಒಟ್ಟಾರೆಯಾಗಿ ಸಾವನ್ನಪ್ಪಿದ ಜನರ ಸಂಖ್ಯೆ 38,340ಕ್ಕೆ ಏರಿದೆ. ರಾಜ್ಯದಲ್ಲಿ 9,386 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. 
 


ಜಿಲ್ಲಾವಾರುಗಳ ಲೆಕ್ಕಾಚಾರದ ಪೈಕಿ ಬೆಂಗಳೂರು ನಗರವೊಂದರಲ್ಲೇ 810 ಜನರಿಗೆ ಕೋವಿಡ್ ಬಂದಿದ್ದರೆ, ದಕ್ಷಿಣ ಕನ್ನಡದಲ್ಲಿ48, ಉಡುಪಿಯಲ್ಲಿ 28, ಮೈಸೂರಿನಲ್ಲಿ 29 ಕೇಸ್ ಗಳು ದಾಖಲಾಗಿವೆ. ಉಳಿದಂತೆ ಬಳ್ಳಾರಿ (3), ಬೆಳಗಾವಿ (10), ಬೆಂಗಳೂರು ಗ್ರಾಮಾಂತರ (6), ಬೀದರ್ (2), ಚಾಮರಾಜನಗರ (2), ಚಿಕ್ಕಮಗಳೂರು (10), ಚಿತ್ರದುರ್ಗ (4), ಧಾರವಾಡ (9), ಹಾಸನ (5), ಕಲಬುರಗಿ (8), ಕೊಡಗು (13), ಕೋಲಾರ (6), ಶಿವಮೊಗ್ಗ (3), ತುಮಕೂರು (8), ಉತ್ತರಕನ್ನಡ (5) ಹಾಗೂ ವಿಜಯಪುರ (1) ಕೋವಿಡ್-19 ಪ್ರಕರಣಗಳು ದಾಖಲಾಗಿವೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ 2 ಮಂದಿ ಸಾವನ್ನಪ್ಪಿದ್ದಾರೆ. ಮಂಡ್ಯ, ತುಮಕೂರು ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ನಿಂದ ಒಬ್ಬರು ಮೃತಪಟ್ಟಿದ್ದಾರೆ.

Coronavirus: ಮಂಡ್ಯದಲ್ಲಿ ಮತ್ತೆ ಕೊರೋನಾ ಅಟ್ಟಹಾಸ: ನಾಲ್ವರಿಗೆ ಸೋಂಕು
ಬೆಂಗಳೂರಿನಲ್ಲಿ ಒಂದೇ ದಿನ 810 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕರೋನಾ ಪೀಡಿತರ ಸಂಖ್ಯೆ 12,64,428 ಕ್ಕೆ ಏರಿಕೆಯಾಗಿದೆ. 12,64,428 ಸೋಂಕಿತರ ಪೈಕಿ 12,40,149 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕರೋನಾ ಸೋಂಕಿನಿಂದ 2 ಮಂದಿ ಮೃತಪಟ್ಟಿದ್ದಾರೆ. ನಗರದಲ್ಲಿ ಕರೋನಾದಿಂದ ಈವರೆಗೆ 16,402 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 7,876 ಜನರಲ್ಲಿ ಸೋಂಕು ಸಕ್ರಿಯವಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮಹಾಮೇಳಾವ್ ಅನುಮತಿ ನಿರಾಕರಣೆ: ನಾಡದ್ರೋಹಿ ಎಂಇಎಸ್ ‌ಪುಂಡರಿಗೆ ಶಾಕ್ ಕೊಟ್ಟ ಬೆಳಗಾವಿ ಜಿಲ್ಲಾಡಳಿತ
ಸಮಾಜ ಕಲ್ಯಾಣ ಸಚಿವರೇ ಇಲ್ಲಿ ನೋಡಿ, ಅಂಬೇಡ್ಕರ್ ವಸತಿ ಶಾಲೆಯಲ್ಲಿ ಮಕ್ಕಳಿಗೆ ನಿತ್ಯ ಟಾರ್ಚರ್!, ಪೆನ್ನು ಪುಸ್ತಕ ಕೇಳಿದ್ರೆ ಏಟು!