ಪುತ್ರ ಮಲ್ಲಿಕಾರ್ಜುನ, ಸೊಸೆಗೂ ಕೊರೋನಾ ದೃಢ| ಶಾಮನೂರು ಶಿವಶಂಕರಪ್ಪ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಅವರಿಗೆ ಯಾವುದೇ ಸೋಂಕು ಲಕ್ಷಣಗಳಿಲ್ಲ. ಮಧುಮೇಹ, ರಕ್ತದೊತ್ತಡ ಎಲ್ಲವೂ ನಿಯಂತ್ರಣದಲ್ಲಿದೆ| ಯಾರಿಗೂ ಕೋವಿಡ್ ಸೋಂಕು ಲಕ್ಷಣಗಳಿಲ್ಲ|
ಬೆಂಗಳೂರು(ಆ.09): ಕಾಂಗ್ರೆಸ್‌ನ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ (89) ಹಾಗೂ ಪುತ್ರ ಎಸ್.ಎಸ್.ಮಲ್ಲಿಕಾರ್ಜುನ (52) ಸೇರಿ ಕುಟುಂಬದ ಐದು ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ.
ಶಿವಶಂಕರಪ್ಪ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಅವರಿಗೆ ಯಾವುದೇ ಸೋಂಕು ಲಕ್ಷಣಗಳಿಲ್ಲ. ಮಧುಮೇಹ, ರಕ್ತದೊತ್ತಡ ಎಲ್ಲವೂ ನಿಯಂತ್ರಣದಲ್ಲಿದೆ. ಮಲ್ಲಿಕಾರ್ಜುನ ಅವರ ಪತ್ನಿಗೂ ಸೋಂಕು ದೃಢಪಟ್ಟಿದೆ. ಆದರೆ ಯಾರಿಗೂ ಸೋಂಕು ಲಕ್ಷಣಗಳು ಕಾಣಿಸಿಕೊಂಡಿಲ್ಲ ಎಂದು ತಿಳಿದು ಬಂದಿದೆ.
ಪ್ರವಾಹಕ್ಕೆ ಮರವೇರಿ ಕುಳಿತ ವಾನರ ಸೇನೆ: ಹಗ್ಗ ಹಿಡಿದು ದಡ ಸೇರಿದ ಮಂಗಗಳು..!
ಶಿವಶಂಕರಪ್ಪ ಅವರ ಆರೋಗ್ಯ ಸ್ಥಿರವಾಗಿದ್ದು, ವೈದ್ಯರು ಸೂಕ್ಷ್ಮವಾಗಿ ನಿಗಾ ವಹಿಸಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.