ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ಗೆ ಕೊರೋನಾ ದೃಢ

Suvarna News   | Asianet News
Published : Sep 27, 2020, 11:44 AM IST
ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ಗೆ ಕೊರೋನಾ ದೃಢ

ಸಾರಾಂಶ

ಸಾಮಾಜಿಕ ಜಾಲತಾಣ ಟ್ವಿಟ್ಟರ್‌ನಲ್ಲಿ ಮಾಹಿತಿ ಹಂಚಿಕೊಂಡ ದಿನೇಶ್‌ ಗುಂಡೂರಾವ್‌| ನನ್ನ ಪ್ರಾಥಮಿಕ ಸಂಪರ್ಕದಲ್ಲಿದ್ದವರು ಪರೀಕ್ಷೆ ಮಾಡಿಸಿಕೊಳ್ಳಿ ಹಾಗೂ ಇನ್ನಿತರರಿಗೆ ಹರಡದಂತೆ ಅಗತ್ಯ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಿ ಎಂದು ವಿನಂತಿಸಿಕೊಂಡ ಗುಂಡೂರಾವ್‌| 

ಬೆಂಗಳೂರು(ಸೆ.27):  ರಾಜ್ಯದ ಮತ್ತೋರ್ವ ಜನಪ್ರತಿನಿಧಿಗೆ ಮಹಾಮಾರಿ ಕೊರೋನಾ ವೈರಸ್‌ ವಕ್ಕರಿಸಿದೆ. ಹೌದು, ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಅವರಿಗೆ ಕೊರೋನಾ ವೈರಸ್‌ ದೃಢಪಟ್ಟಿದೆ. 

ಈ ಬಗ್ಗೆ ಸ್ವತಃ ದಿನೇಶ್‌ ಗುಂಡೂರಾವ್‌ ಅವರೇ ಸಾಮಾಜಿಕ ಜಾಲತಾಣ ಟ್ವಿಟ್ಟರ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ಕೋವಿಡ್ ಟೆಸ್ಟ್‌ನಲ್ಲಿ ನನಗೆ ಯಾವುದೇ ರೋಗ ಲಕ್ಷಣಗಳಿಲ್ಲದ ಸೋಂಕು ತಗುಲಿರುವುದು ದೃಢಪಟ್ಟಿದೆ. ನಿಮ್ಮೆಲ್ಲರ ಹಾರೈಕೆಯಿಂದ ಆದಷ್ಟು ಬೇಗ ಚೇತರಿಸಿಕೊಳ್ಳುವ ವಿಶ್ವಾಸವಿದೆ ಎಂದು ಹೇಳಿದ್ದಾರೆ. 

ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್‌ಗೆ ಕೊರೋನಾ ಭೀತಿ...!

 

ತಮಗೆ ಕೊರೋನಾ ಪಾಸಿಟಿವ್‌ ಬಂದಿರುವ ಹಿನ್ನೆಲೆಯಲ್ಲಿ ನನ್ನ ಪ್ರಾಥಮಿಕ ಸಂಪರ್ಕದಲ್ಲಿದ್ದವರು ಪರೀಕ್ಷೆ ಮಾಡಿಸಿಕೊಳ್ಳಿ ಹಾಗೂ ಇನ್ನಿತರರಿಗೆ ಹರಡದಂತೆ ಅಗತ್ಯ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಿ ಎಂದು ವಿನಂತಿಸುತ್ತೇನೆ ಎಂದು ತಿಳಿಸಿದ್ದಾರೆ. 
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಆಳಂದ ಮತಗಳವಿಗೆ ಸುಭಾಷ್‌ ಗುತ್ತೇದಾರ್‌ ಸೂತ್ರಧಾರ್‌: ಎಸ್‌ಐಟಿ
ಮುಖ್ಯಮಂತ್ರಿ ಅಧಿಕಾರ ಹಸ್ತಾಂತರದ ಬಗ್ಗೆ ನಮಗೆ ಏನೂ ಗೊತ್ತಿಲ್ಲ: ಸಚಿವ ರಾಮಲಿಂಗಾರೆಡ್ಡಿ