ಬೆಂಗಳೂರು: 13 ಮಂದಿ ರೈಲ್ವೆ ಪೊಲೀಸರಿಗೆ ಕೊರೋನಾ ಪಾಸಿಟಿವ್‌

By Kannadaprabha NewsFirst Published Jul 14, 2020, 8:05 AM IST
Highlights

ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ ಹಾಗೂ ಬೈಯ್ಯಪ್ಪನಹಳ್ಳಿ ರೈಲು ನಿಲ್ದಾಣ ಪೊಲೀಸ್‌ ಠಾಣೆಯ 13 ಸಿಬ್ಬಂದಿಗೆ ಕೊರೋನಾ ಸೋಂಕು| ಇನ್‌ಫೆಂಟ್ರಿ ರಸ್ತೆಯಲ್ಲಿರುವ ನಗರ ಪೊಲೀಸ್‌ ಆಯುಕ್ತರ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಗೃಹ ರಕ್ಷಕಿಯೊಬ್ಬರಿಗೆ ಸೋಂಕು ತಗುಲಿದೆ|

ಬೆಂಗಳೂರು(ಜು.14):  ನಗರದ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ ಹಾಗೂ ಬೈಯ್ಯಪ್ಪನಹಳ್ಳಿ ರೈಲು ನಿಲ್ದಾಣ ಪೊಲೀಸ್‌ ಠಾಣೆಯ 13 ಸಿಬ್ಬಂದಿಗೆ ಕೊರೋನಾ ಸೋಂಕು ತಗುಲಿರುವುದು ಸೋಮವಾರ ದೃಢಪಟ್ಟಿದೆ.

ಸೋಂಕು ತಗುಲಿದ ಸಿಬ್ಬಂದಿಯನ್ನು ಆಸ್ಪತ್ರೆಯಲ್ಲಿ ಚಿಕಿತ್ಸೆ ಒಳಪಡಿಸಲಾಗಿದ್ದು, ಠಾಣೆಗಳನ್ನು ಸೀಲ್‌ಡೌನ್‌ ಮಾಡಲಾಗಿದೆ. ಸಿಟಿ ರೈಲ್ವೆ ಎಸ್ಪಿ ಕಚೇರಿ ವ್ಯಾಪ್ತಿಯ 80ಕ್ಕೂ ಹೆಚ್ಚು ಸಿಬ್ಬಂದಿಯನ್ನು ಕ್ವಾರಂಟೈನ್‌ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಗ್ಳೂರಿಂದ ಸೋಮವಾರ ಲಕ್ಷಾಂತರ ಜನ ಗುಳೆ!

ಇನ್ನು ಇನ್‌ಫೆಂಟ್ರಿ ರಸ್ತೆಯಲ್ಲಿರುವ ನಗರ ಪೊಲೀಸ್‌ ಆಯುಕ್ತರ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಗೃಹ ರಕ್ಷಕಿಯೊಬ್ಬರಿಗೆ ಸೋಂಕು ತಗುಲಿದೆ. ಕಚೇರಿಯ ಮುಖ್ಯ ದ್ವಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ 35 ವರ್ಷದ ಗೃಹ ರಕ್ಷಕಿ, ಕಚೇರಿಗೆ ಬರುವವರನ್ನು ಪರಿಶೀಲಿಸುತ್ತಿದ್ದರು. ಇತ್ತೀಚೆಗೆ ಅವರ ಗಂಟಲಿನ ದ್ರವ ಪರೀಕ್ಷೆ ನಡೆಸಲಾಗಿತ್ತು. ಈಗ ವರದಿ ಬಂದಿದ್ದು ಪಾಸಿಟಿವ್‌ ಇರುವುದು ಗೊತ್ತಾಗಿದೆ. ನಾಲ್ಕು ದಿನದ ಹಿಂದೆ ಕಮಿಷನರ್‌ ಕಚೇರಿಯ 13 ಸಿಬ್ಬಂದಿಗೆ ಸೋಂಕು ದೃಢಪಟ್ಟಿತ್ತು.
 

click me!