ಮೈಸೂರಿಗೂ ಕಾಲಿಟ್ಟ ಕೊರೋನಾ ವೈರಸ್: ಸೊಂಕಿತರ ಸಂಖ್ಯೆ 20ಕ್ಕೇರಿಕೆ

Published : Mar 21, 2020, 06:30 PM ISTUpdated : Mar 21, 2020, 06:39 PM IST
ಮೈಸೂರಿಗೂ ಕಾಲಿಟ್ಟ ಕೊರೋನಾ ವೈರಸ್: ಸೊಂಕಿತರ ಸಂಖ್ಯೆ 20ಕ್ಕೇರಿಕೆ

ಸಾರಾಂಶ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ತಗುಲಿರುವ ಪ್ರಕರಣಗಳು ಹೆಚ್ಚುತ್ತಿದ್ದು, ಶನಿವಾರ ಒಂದೇ ದಿನ 5 ಕೇಸ್ ಗಳು ಪತ್ತೆಯಾಗಿವೆ. ಅದರಲ್ಲೂ ಹಂತ-ಹಂತವಾಗಿ ಬೇರೆ-ಬೇರೆ ಜಿಲ್ಲೆಗಳಲ್ಲಿ ಕಾಣಿಸಿಕೊಳ್ಳುತ್ತಿದ್ದು, ಜನರು ಭಯಬೀತಿಯಲ್ಲಿದ್ದಾರೆ.

ಮೈಸೂರು, [ಮಾ.21]: ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು ಇಂದು [ಶನಿವಾರ] ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಓರ್ವ ವ್ಯಕ್ತಿ ಸೋಂಕಿಗೆ ಒಳಗಾಗಿರುವುದು ಪತ್ತೆಯಾಗಿದೆ.

 ಈ ವ್ಯಕ್ತಿ ದುಬೈನಿಂದ ಬೆಂಗಳೂರು ಬಳಿಕ ಮೈಸೂರಿಗೆ ಪ್ರಯಾಣ ಬೆಳೆಸಿದ್ದಾನೆ. ರಾಜ್ಯದಲ್ಲಿ ಇಂದು ಒಂದೇ ದಿನ 5 ಕೊರೊನಾ ಪ್ರಕರಣಗಳು ಬೆಳಕಿಗೆ ಬಂದಂತಾಗಿದ್ದು ಒಟ್ಟು ಸೋಂಕಿತರ ಸಂಖ್ಯೆ 20ಕ್ಕೆ ಏರಿಕೆಯಾಗಿದೆ. 

ಶನಿವಾರ ಒಂದೇ ದಿನ 4 ಕೊರೋನಾ ಪತ್ತೆ: ಕರುನಾಡಲ್ಲಿ 19ಕ್ಕೆ ಏರಿಕೆ

ಈ ಕುರಿತು ರಾಜ್ಯ ಆರೋಗ್ಯ ಇಲಾಖೆ ಸಚಿವ ಶ್ರೀ ರಾಮುಲು ದೃಢಪಡಿಸಿದ್ದಾರೆ. ಸೋಂಕಿತ ವ್ಯಕ್ತಿಗೆ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಂಕು ಪತ್ತೆಯಾದ ಹಿನ್ನೆಲೆ ಮೈಸೂರು ಜಿಲ್ಲಾಧಿಕಾರಿ ತುರ್ತು ಸುದ್ದಿಗೋಷ್ಠಿ ಕರೆದಿದ್ದು, ಜಿಲ್ಲೆಯಲ್ಲಿ ಹೈ ಅಲರ್ಟ್​ ಘೋಷಣೆಯಾಗುವ ಸಾಧ್ಯತೆಗಳಿವೆ.

ಮೈಸೂರು ಸೋಂಕಿತನ ಟ್ರಾವೆಲ್ ಹಿಸ್ಟರಿ

* ಮಾರ್ಚ್ 19- ಏರ್ ಇಂಡಿಯಾ ಫ್ಲೈಟ್ ನಲ್ಲಿ ದುಬೈನಿಂದ ಬೆಂಗಳೂರು

* ಮಾರ್ಚ್ 20-ಬೆಂಗಳೂರಿಂದ ಮೈಸೂರು

* ಮಾರ್ಚ್ 20- ಟ್ಯಾಕ್ಸಿಯಲ್ಲಿ ಮೈಸೂರಿಗೆ

* ಮಾರ್ಚ್ 20- ಮಂಡ್ಯದ ಟೀ ಕುಡಿದ

* ಮಾರ್ಚ್ 20 ಸಂಜೆ ಜ್ವರ, ಕೆಮ್ಮು ಆರಂಭ

* ಮಾ. 20 ಸಂಜೆ KR ಆಸ್ಪತ್ರೆಗೆ ದಾಖಲು

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಯಕ್ಷಗಾನ ಕಲಾವಿದರ ಅಪಮಾನ: 'ಬಿಳಿಮಲೆಗೆ ಒಂದು ನೋಟಿಸ್ ಕೊಡೋಕೂ ಕಷ್ಟವೇ? ಸುನೀಲ್ ಕುಮಾರ್ ಪ್ರಶ್ನೆ, ಈ ವಿಷಯ ದೊಡ್ಡದು ಮಾಡೋದು ಬೇಡ ಎಂದ ತಂಗಡಗಿ
ಬೆಂಗಳೂರು ವಿಜಯ್ ಗುರೂಜಿ ಗ್ಯಾಂಗ್ ಸಮೇತ ಅರೆಸ್ಟ್; ಟೆಕ್ಕಿಗೆ ಲೈಂಗಿಕ ಶಕ್ತಿ ಹೆಚ್ಚಿಸೋದಾಗಿ ₹40 ಲಕ್ಷ ವಂಚನೆ!