
ಬೆಂಗಳೂರು(ಮಾ.05): ಹೆಚ್ಚು ಹೆಚ್ಚು ಹಿರಿಯ ನಾಗರಿಕರು ಕೋವಿಡ್ ಲಸಿಕೆ ಪಡೆಯಲು ಅನುಕೂಲವಾಗುವ ನಿಟ್ಟಿನಲ್ಲಿ ಪ್ರಾಥಮಿಕ ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿಯೂ ಕೋವಿಡ್ ಲಸಿಕೆ ದೊರೆಯುವಂತೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸುಧಾಕರ್, ಸದ್ಯಕ್ಕೆ ತಾಲೂಕು ಆಸ್ಪತ್ರೆಗಳಲ್ಲಿ ಮಾತ್ರ ಕೋವಿಡ್ ಲಸಿಕೆ ನೀಡಲಾಗುತ್ತಿದೆ. ಪ್ರಾಥಮಿಕ ಮತ್ತು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಲಸಿಕಾ ಕೇಂದ್ರ ತೆರೆಯುವ ಕುರಿತಂತೆ ಸಭೆ ನಡೆಸಿ ಚರ್ಚಿಸಲಾಗುವುದು ಎಂದು ತಿಳಿಸಿದರು.
ಮನೆಯಲ್ಲೇ ವ್ಯಾಕ್ಸಿನ್ ಪಡೆದ ಸಚಿವ: ಯಾರ ಮನೆಗೂ ಹೋಗಿ ಲಸಿಕೆ ನೀಡುವಂತಿಲ್ಲ ಎಂದ ಸುಧಾಕರ್
ಸದ್ಯ ಕೋವಿಡ್ ಲಸಿಕೆಯನ್ನು 60 ವರ್ಷ ಮೇಲ್ಪಟ್ಟವರಿಗೆ ಹಾಗೂ ಪೂರ್ವ ಕಾಯಿಲೆಗಳನ್ನು ಹೊಂದಿರುವವರಿಗೆ ಮಾತ್ರ ನೀಡಲಾಗುತ್ತಿದೆ. ಲಸಿಕೆ ಪಡೆಯಲು ಹಿರಿಯ ನಾಗರಿಕರಿಗೆ ನೈತಿಕ ಸ್ಫೂರ್ತಿ ತುಂಬುವ ಕೆಲಸವೂ ನಡೆಯುತ್ತಿದೆ. ಲಸಿಕೆ ಪಡೆದವರಿಗೆ ಮುಂದೆ ಸೋಂಕು ಬಂದರೂ ಹೆಚ್ಚು ಸಮಸ್ಯೆ ಉಂಟಾಗುವುದಿಲ್ಲ. ಇನ್ನು ಮುಂದೆ ಹಿರಿಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಲಸಿಕೆ ಪಡೆಯಲಿದ್ದಾರೆ ಎಂಬ ವಿಶ್ವಾಸವಿದೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ