ನಿಗಮ, ಮಂಡಳಿಗಳಿಗೆ ನೇಮಕಾತಿ ಮಾಡುವ ವಿಷಯವಾಗಿ ಕಾಂಗ್ರೆಸ್ ನಾಯರಲ್ಲೇ ಅಸಮಾಧಾನ ಭುಗಿಲೆದ್ದಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಎಲ್ಲರ ಸಲಹೆಗಳನ್ನೂ ಆಲಿಸಿ, ಸಮಾಧಾನಪಡಿಸುವುದು ಕಷ್ಟ ಎಂದು ಹೇಳಿದ್ದಾರೆ.
ಬೆಂಗಳೂರು ಜ.24: ನಿಗಮ, ಮಂಡಳಿಗಳಿಗೆ ನೇಮಕಾತಿ ಮಾಡುವ ವಿಷಯವಾಗಿ ಕಾಂಗ್ರೆಸ್ ನಾಯರಲ್ಲೇ ಅಸಮಾಧಾನ ಭುಗಿಲೆದ್ದಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಎಲ್ಲರ ಸಲಹೆಗಳನ್ನೂ ಆಲಿಸಿ, ಸಮಾಧಾನಪಡಿಸುವುದು ಕಷ್ಟ ಎಂದು ಹೇಳಿದ್ದಾರೆ.
ಲೋಕಸಭಾ ಚುನಾವಣೆಗೂ ಮುನ್ನ, ಮಂಡಳಿ ಮತ್ತು ನಿಗಮಗಳಿಗೆ ಅಧ್ಯಕ್ಷರ ಹುದ್ದೆಗಳನ್ನು ಭರ್ತಿ ಮಾಡಲು ಕಾಂಗ್ರೆಸ್ ಕಸರತ್ತು ಆರಂಭಿಸಿದೆ. ಆದರೆ, ಕೆಲವು ಭಿನ್ನಾಭಿಪ್ರಾಯಗಳಿಂದಾಗಿ ಪಕ್ಷವು ಇನ್ನೂ ಹೆಸರುಗಳನ್ನು ಅಂತಿಮಗೊಳಿಸಿಲ್ಲ.
ಪ್ರಧಾನಿ ಮೋದಿ ಉಪವಾಸದ ಬಗ್ಗೆ ಮೊಯ್ಲಿ ವ್ಯಂಗ್ಯ; ಬಿಜೆಪಿ ಮುಖಂಡರು ಆಕ್ರೋಶ
ನಾವು ವಿವಿಧ ಮಂಡಳಿಗಳು ಮತ್ತು ನಿಗಮಗಳಲ್ಲಿ (ಪಕ್ಷದ ಹೈಕಮಾಂಡ್‌ಗೆ) ನೇಮಕಾತಿಗಾಗಿ ಹೆಸರುಗಳನ್ನು ಶಿಫಾರಸು ಮಾಡಿದ್ದೇವೆ. ಇದರಲ್ಲಿ ಈಗ ನಮಗೆ ಯಾವುದೇ ಪಾತ್ರವಿಲ್ಲ ಎಂದು ಸಿದ್ದರಾಮಯ್ಯ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು. ಅವರ ಪ್ರಕಾರ, ಶಿಫಾರಸು ಮಾಡಿದ ಶಾಸಕರ ಹೆಸರುಗಳನ್ನು ಅಂತಿಮಗೊಳಿಸಲಾಗಿದೆ.
ಈ ಮಂಡಳಿಗಳು ಮತ್ತು ನಿಗಮಗಳಲ್ಲಿ ಪಕ್ಷದ ಕಾರ್ಯಕರ್ತರನ್ನು ನೇಮಿಸುವ ಬಗ್ಗೆ, ನಾನು, ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮತ್ತು ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ವಿಸ್ತೃತ ಚರ್ಚೆ ನಡೆಸಿ ನಂತರ ಪಕ್ಷದ ಹೈಕಮಾಂಡ್ ಅನುಮೋದನೆಗಾಗಿ ಪಟ್ಟಿಯನ್ನು ಸುರ್ಜೇವಾಲಾ ಅವರಿಗೆ ನೀಡಲಾಗಿದೆ. ಪಟ್ಟಿಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಸಹಿಯಾಗಬೇಕಿದೆ ಎಂದು ಸಿದ್ದರಾಮಯ್ಯ ಹೇಳಿದರು.
ಚಿಕ್ಕಬಳ್ಳಾಪುರ ರಣಕಣ: ಮತ್ತೊಮ್ಮೆ ಕಾಂಗ್ರೆಸ್ ಅಭ್ಯರ್ಥಿಯಾಗಲು ಮೊಯ್ಲಿ ಕಸರತ್ತು..!
ಮಂಡಳಿ ಮತ್ತು ನಿಗಮಗಳ ಅಧ್ಯಕ್ಷರ ನೇಮಕಕ್ಕೂ ಮುನ್ನ ತಮ್ಮ ಸಲಹೆ ಕೇಳಿಲ್ಲ ಎಂಬ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ಎಲ್ಲರ ಸಲಹೆಗೆ ಕಿವಿಗೊಡುವುದು ಕಷ್ಟ. ಅವರ ಜೊತೆ ಮಾತನಾಡಿದ್ದೇನೆ ಎಂದು ತಿಳಿಸಿದ್ದಾರೆ.