
ಬೆಂಗಳೂರು(ಏ.30): ಬಳ್ಳಾರಿ ಮಹಾನಗರ ಪಾಲಿಕೆ ಸೇರಿದಂತೆ 10 ನಗರ ಸ್ಥಳೀಯ ಸಂಸ್ಥೆಯ ಸಾರ್ವತ್ರಿಕ ಚುನಾವಣೆ ಮತ್ತು ಎರಡು ನಗರ ಸ್ಥಳೀಯ ಸಂಸ್ಥೆಯ ಉಪಚುನಾವಣೆಯ ಮತ ಎಣಿಕೆಯು ಕರ್ಫ್ಯೂ ನಡುವೆಯೇ ಇಂದು(ಶುಕ್ರವಾರ) ಆರಂಭವಾಗಿದೆ.
ಮತ ಎಣಿಕೆಯು ಆಯಾ ನಗರ ಸ್ಥಳೀಯ ಸಂಸ್ಥೆಯ ಕೇಂದ್ರ ಸ್ಥಾನದಲ್ಲಿ ಇಂದು(ಶುಕ್ರವಾರ) ಬೆಳಗ್ಗೆ 8 ಗಂಟೆಯಿಂದ ನಡೆಯಲಿದೆ. ಇದಕ್ಕಾಗಿ ರಾಜ್ಯ ಚುನಾವಣಾ ಆಯೋಗವು ಸಕಲ ಸಿದ್ಧತೆಯನ್ನು ಮಾಡಿಕೊಂಡಿದೆ. ಕೋವಿಡ್ ಉಲ್ಬಣಗೊಂಡಿರುವ ಹಿನ್ನೆಲೆಯಲ್ಲಿ ಕಟ್ಟುನಿಟ್ಟಾಗಿ ಮಾರ್ಗಸೂಚಿಗಳನ್ನು ಪಾಲನೆ ಮಾಡಬೇಕು ಎಂದು ಆಯೋಗವು ನಿರ್ದೇಶನ ನೀಡಿದೆ.
ಕೊರೋನಾತಂಕ ನಡುವೆಯೇ ಮತ್ತೊಂದು ಚುನಾವಣೆಗೆ ಸಿದ್ಧತೆ..!
ಮತ ಎಣಿಕೆಯ ಸಿಬ್ಬಂದಿಯು ಎಲ್ಲಾ ಸುರಕ್ಷಿತ ಕ್ರಮಗಳನ್ನು ಅನುಸರಿಸಬೇಕು. ಮಾಸ್ಕ್, ಸಾಮಾಜಿಕ ಅಂತರ, ಗ್ಲೌಸ್‌ಗಳನ್ನು ಹಾಕಿಕೊಂಡು ಮತ ಎಣಿಕೆ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು. ಮತ ಎಣಿಗೆ ಸಿಬ್ಬಂದಿ ಅನಾರೋಗ್ಯದ ಲಕ್ಷಣಗಳಿದ್ದರೆ ಅವರನ್ನು ಹೊರತುಪಡಿಸಿ ಇನ್ನುಳಿದ ಸಿಬ್ಬಂದಿ ಮಾತ್ರ ಮತ ಎಣಿಕೆ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು. ಮತ ಎಣಿಕೆ ಕೇಂದ್ರದ ಬಳಿಕ ಫಲಿತಾಂಶದ ಬಳಿಕ ಯಾರು ಸಹ ವಿಜಯೋತ್ಸವವನ್ನು ಆಚರಣೆ ಮಾಡುವಂತಿಲ್ಲ. ಒಂದು ವೇಳೆ ಈ ನಿಯಮವನ್ನು ಉಲ್ಲಂಘಿಸಿದರೆ ಕಾನೂನು ಪ್ರಕಾರ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ.
ಬಳ್ಳಾರಿ ಮಹಾನಗರ ಪಾಲಿಕೆಯ 39 ವಾರ್ಡ್‌ಗಳ ಮತ ಎಣಿಕೆ ನಡೆಯಲಿದೆ. ಇನ್ನುಳಿದಂತೆ ವಿಜಯಪುರ ಪುರಸಭೆ, ರಾಮನಗರ ನಗರಸಭೆ, ಚನ್ನಪಟ್ಟಣ ನಗರಸಭೆ, ಗುಡಿಬಂಡೆ ಪಟ್ಟಣ ಪಂಚಾಯತ್, ಭದ್ರಾವತಿ ನಗರಸಭೆ, ತೀರ್ಥಹಳ್ಳಿ ಪಟ್ಟಣ ಪಂಚಾಯತ್, ಬೇಲೂರು ಪುರಸಭೆ, ಬೀದರ್ ನಗರಸಭೆ, ಮಡಿಕೇರಿ ನಗರಸಭೆಗೆ ಸಾರ್ವತ್ರಿಕ ಚುನಾವಣೆ ನಡೆದಿದ್ದು, ಮತ ಎಣಿಕೆ ನಡೆಯಲಿದೆ. ಹಳ್ಳಿಖೇಡ ಬಿ ಪುರಸಭೆ ಮತ್ತು ಹಿರೇಕೆರೂರು ಪಟ್ಟಣ ಪಂಚಾಯತ್‌ಗೆ ಉಪಚುನಾವಣೆ ನಡೆದಿದ್ದು, ಮತ ಎಣಿಕೆ ಜರುಗಲಿದೆ.
ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್ ನ್ಯೂಸ್ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ