
ಬೆಂಗಳೂರು (ಸೆ.30): ಕೋವಿಡ್-19 ಹರಡುವಿಕೆ ನಿಯಂತ್ರಿಸುವ ದೃಷ್ಟಿಯಿಂದ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಎಲ್ಲೆಡೆ ಕಟ್ಟುನಿಟ್ಟಾಗಿ ಜಾರಿಗೊಳಿಸಲು ಹಾಗೂ ನಿಯಮ ಉಲ್ಲಂಘಿಸಿದವರಿಗೆ ದಂಡ ವಿಧಿಸಲು ಕ್ರಮ ಕೈಗೊಳ್ಳುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಸ್ಥಳೀಯ ಪ್ರಾಧಿಕಾರಗಳಿಗೆ ಸರ್ಕಾರ ಸೂಚನೆ ನೀಡಿದೆ.
ಕೇಂದ್ರ ಸರ್ಕಾರದ ಅನ್‌ಲಾಕ್ 4.0 ಮಾರ್ಗಸೂಚಿಯಲ್ಲಿ ಕೋವಿಡ್ ನಿಯಂತ್ರಣ ಕ್ರಮಗಳ ಕಟ್ಟುನಿಟ್ಟಿನ ಅನುಷ್ಠಾನಕ್ಕೆ ಸೂಚನೆ ನೀಡಲಾಗಿದೆ. ಮಾಸ್ಕ್ ಧರಿಸದ ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳದವರಿಗೆ ದಂಡ ವಿಧಿಸಲೂ ಸೂಚಿಸಲಾಗಿದೆ.
ಕೋವಿಡ್ 2ನೇ ಭಾರಿ ಔಷಧಿ ಪ್ರಯೋಗಕ್ಕೊಳಗಾದ ಚಲನಚಿತ್ರ ನಿರ್ಮಾಪಕ ...
ಆದರೆ, ಜಿಲ್ಲಾಡಳಿತಗಳ ಸಡಿಲ ಕ್ರಮಗಳಿಂದ ಕರೋನಾ ನಿಯಂತ್ರಣ ಕ್ರಮಗಳನ್ನು ಜನರು ಕಟ್ಟುನಿಟ್ಟಾಗಿ ಪಾಲಿಸದಿರುವುದು ಕಂಡುಬರುತ್ತಿದೆ. ಇನ್ನು ಮುಂದೆ ನಿಯಮಗಳನ್ನು ಪಾಲಿಸುವಲ್ಲಿ ಜನರು ನಿರ್ಲಕ್ಷ್ಯ ವಹಿಸದಂತೆ ಕ್ರಮ ವಹಿಸಬೇಕು. ನಿಯಮ ಉಲ್ಲಂಘಿಸಿದವರಿಗೆ ದಂಡ ವಿಧಿಸಬೇಕು.
ಇದುವರೆಗೆ ವಸೂಲಿ ಮಾಡಲಾಗಿರುವ ದಂಡ ಕುರಿತು ಇಲಾಖೆಗೆ ಮಾಹಿತಿ ಕಳುಹಿಸಿಕೊಡಬೇಕು ಎಂದು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ (ವಿಪತ್ತು ನಿರ್ವಹಣೆ) ಅಂಜುಂ ಪರ್ವೇಜ್ ಸೂಚನೆ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ