ನಾಡಿನ ಪ್ರಮುಖ ದೇವಾಲಯಗಳಿಗೆ ಸಾರ್ವಜನಿಕ ಪ್ರವೇಶವನ್ನು ನಿಷೇಧಿಸಲಾಗಿದೆ. ಕೊರೋನಾ ಹಿನ್ನೆಲೆ ರಾಜ್ಯದ ಮುಖ್ಯ ದೇವಾಲಯಗಳು ಭಕ್ತರ ಪ್ರವೇಶವಕ್ಕೆ ಅವಕಾಶ ನೀಡುತ್ತಿಲ್ಲ.
ಬೆಂಗಳೂರು (ಏ.22): ವ್ಯಾಪಾಕವಾಗಿ ಹರಡುತ್ತಿರುವ ಮಹಾಮಾರಿ ಕೊರೋನಾ ಸೋಂಕಿಗೆ ನಿಯಂತ್ರಣ ಹೇರುವ ಸಲುವಾಗಿ ಸರ್ಕಾರದ ಮಾರ್ಗಸೂಚಿಯಂತೆ ನಾಡಿನ ಪ್ರಮುಖ ದೇವಾಲಯಗಳ ಪ್ರವೇಶ ಬಂದ್ ಮಾಡಲಾಗಿದೆ.
ಮೈಸೂರಿನ ಚಾಮುಂಡೇಶ್ವರಿ, ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ, ಶೃಂಗೇರಿಯ ಶಾರದಾಂಬೆ, ಹೊರನಾಡಿನ ಅನ್ನಪೂರ್ಣೇಶ್ವರಿ, ಶಿರಸಿಯ ಮಾರಿಕಾಂಬಾ, ಗೋಕರ್ಣದ ಮಹಾಬಲೇಶ್ವರ, ಮುರುಡೇಶ್ವರ, ಹುಬ್ಬಳ್ಳಿಯ ಸಿದ್ಧಾರೂಢ ಮಠ, ವಿಜಯನಗರ ಜಿಲ್ಲೆಯ ಹಂಪಿ, ಕುಕ್ಕೆ ಸುಬ್ರಹ್ಮಣ್ಯ, ಕೊಲ್ಲೂರು ಮೂಕಾಂಬಿಕೆ, ಕಟೀಲು ದುರ್ಗಾ ಪರಮೇಶ್ವರಿ, ಬಾದಮಿಯ ಬನಶಂಕರಿ ಸೇರಿದಂತೆ ರಾಜ್ಯದ ಪ್ರಮುಖ ದೇವಾಲಯಗಳಲ್ಲಿ ಬುಧವಾರ ರಾತ್ರಿಯಿಂದಲೇ ಭಕ್ತರಿಗೆ ಪ್ರವೇಶವನ್ನು ನಿಷೇಧಿಸಲಾಗಿದೆ.
ಮತ್ತೆ 23 ಸಾವಿರ ಕೇಸ್.. ಬೆಂಗಳೂರಿನಲ್ಲಿ 13 ಸಾವಿರ.. ಜಿಲ್ಲೆಗಳ ಸ್ಥಿತಿ ಏನು?
ಹಲವೆಡೆ ಬುಧವಾರ ಬೆಳಗ್ಗೆಯಿಂದಲೇ ಸಾರ್ವಜನಿಕ ಪ್ರವೇಶ ನಿರ್ಬಂಧಿಸಲಾಗಿತ್ತು. ದೇವಸ್ಥಾನಗಳಲ್ಲಿ ಎಂದಿನಂತೆ ಪೂಜಾ ಕೈಂಕರ್ಯಗಳು ನೆರವೇರಲಿದ್ದು, ಭಕ್ತರಿಗೆ ಪ್ರವೇಶ ನಿಷಿದ್ಧಗೊಳಿಸಲಾಗಿದೆ.