
ಬೆಂಗಳೂರು (ಮಾ.07): ರಾಜ್ಯದಲ್ಲಿ ಶನಿವಾರ 580 ಮಂದಿಯಲ್ಲಿ ಹೊಸದಾಗಿ ಕೊರೋನಾ ಸೋಂಕು ಕಾಣಿಸಿಕೊಂಡಿದೆ. 355 ಮಂದಿ ಗುಣಮುಖರಾಗಿದ್ದಾರೆ. ಐವರು ಪ್ರಾಣ ಕಳೆದುಕೊಂಡಿದ್ದಾರೆ.
ಸಕ್ರಿಯ ಪ್ರಕರಣಗಳ ಸಂಖ್ಯೆ 6,595ಕ್ಕೆ ಏರಿದೆ. ಈ ಪೈಕಿ 109 ಮಂದಿ ತೀವ್ರ ನಿಗಾ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ರಾಜ್ಯದ ಒಟ್ಟು ಪಾಸಿಟಿವ್ ಪ್ರಕರಣಗಳ ಸಂಖ್ಯೆ 9.54 ಲಕ್ಷಕ್ಕೆ ಏರಿದ್ದು, ಇವರಲ್ಲಿ 9.35 ಲಕ್ಷ ಮಂದಿ ಗುಣಮುಖರಾಗಿದ್ದಾರೆ. ಈವರೆಗೆ ಒಟ್ಟು 12,359 ಮಂದಿ ಕೋವಿಡ್‌ನಿಂದ ಪ್ರಾಣ ಕಳೆದುಕೊಂಡಿದ್ದಾರೆ.
ಸೋಂಕಿನ ಪ್ರಮಾಣ ಹೆಚ್ಚುತ್ತಿರುವಂತೆ ಎಚ್ಚೆತ್ತಿರುವ ಸರ್ಕಾರ ಪರೀಕ್ಷೆ ಪ್ರಮಾಣವನ್ನು ಏರಿಸಿದ್ದು, ಶನಿವಾರ 82,229 ಪರೀಕ್ಷೆ ನಡೆದಿದೆ. ಈವರೆಗೆ ಒಟ್ಟು 1.92 ಕೋಟಿ ಕೊರೋನಾ ಪರೀಕ್ಷೆ ನಡೆಸಲಾಗಿದೆ. ಬೆಂಗಳೂರು ನಗರದಲ್ಲಿ ಮೂವರು ಮೃತರಾಗಿದ್ದು, ತುಮಕೂರು, ಹಾಸನಗಳಲ್ಲಿ ತಲಾ ಒಬ್ಬರು ಮರಣವನ್ನಪ್ಪಿದ್ದಾರೆ. ಬಾಗಲಕೋಟೆ, ಕೊಪ್ಪಳ, ರಾಯಚೂರು, ರಾಮನಗರ ಮತ್ತು ಯಾದಗಿರಿಯಲ್ಲಿ ಸೋಂಕಿನ ಹೊಸ ಪ್ರಕರಣಗಳು ಬೆಳಕಿಗೆ ಬಂದಿಲ್ಲ. ಉಳಿದಂತೆ ಬೆಂಗಳೂರು ನಗರದಲ್ಲಿ 367, ದಕ್ಷಿಣ ಕನ್ನಡ 27, ಬೀದರ್ 20, ಕಲಬುರಗಿಯಲ್ಲಿ 18 ಮಂದಿಯಲ್ಲಿ ಸೋಂಕು ಇರುವುದು ಧೃಢಪಟ್ಟಿದೆ.
ಕೊರೋನಾ ಕೇಸ್ ಹೆಚ್ಚಳ: ಪರಿಸ್ಥಿತಿ ಹೀಗೆ ಮುಂದುವರೆದ್ರೆ ಕಾದಿದೆ ಗಂಡಾಂತರ..! .
ನಿನ್ನೆ 28 ಸಾವಿರ ಜನರಿಗೆ ಲಸಿಕೆ : ರಾಜ್ಯದಲ್ಲಿ ಶನಿವಾರ 332 ಲಸಿಕಾ ಕೇಂದ್ರಗಳಲ್ಲಿ 28,725 ಮಂದಿಗೆ ಕೋವಿಡ್ ನೀಡಲಾಗಿದೆ. ಅಡ್ಡ ಪರಿಣಾಮದ ಗಂಭೀರ ಪ್ರಕರಣಗಳು ವರದಿಯಾಗಿಲ್ಲ. ರಾಜ್ಯದಲ್ಲಿ ಈವರೆಗೆ ಒಟ್ಟು 9.39 ಲಕ್ಷ ಮಂದಿ ಕೋವಿಡ್ ಲಸಿಕೆಯನ್ನು ಪಡೆದುಕೊಂಡಿದ್ದಾರೆ.
ಲಸಿಕೆ ಪಡೆಯಲು ಹಿರಿಯ ನಾಗರಿಕರು ಹೆಚ್ಚಿನ ಉತ್ಸಾಹ ತೋರಿದ್ದು, 16,263 ಮಂದಿ ಲಸಿಕೆ ಪಡೆದುಕೊಂಡಿದ್ದಾರೆ. 45 ವರ್ಷ ಮೇಲ್ಪಟ್ಟವಿವಿಧ ಕಾಯಿಲೆಗಳನ್ನು ಹೊಂದಿರುವ 2,749, ಆರೋಗ್ಯ ಕಾರ್ಯಕರ್ತರಲ್ಲಿ 1,655 ಮಂದಿ, ಮುಂಚೂಣಿ ಕಾರ್ಯಕರ್ತರಲ್ಲಿ 1,164 ಮಂದಿ ಕೋವಿಡ್ ಲಸಿಕೆಯ ಮೊದಲ ಡೋಸ್ ಪಡೆದಿದ್ದಾರೆ. 6,864 ಮಂದಿ ಆರೋಗ್ಯ ಕಾರ್ಯಕರ್ತರು, 20 ಮುಂಚೂಣಿ ಕಾರ್ಯಕರ್ತರು ಎರಡನೇ ಡೋಸ್ ಲಸಿಕೆ ಸ್ವೀಕರಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ