3ನೇ ಅಲೆ ಮಕ್ಕಳಿಗೆ ಡೇಂಜರ್ : ಸರ್ಕಾರದಿಂದ ಸಿದ್ಧತೆ

By Suvarna NewsFirst Published May 11, 2021, 2:09 PM IST
Highlights
  • ರಾಜ್ಯದಲ್ಲಿ ಕೊರೋನಾ 3ನೇ ಅಲೆಗೆ ಸಿದ್ಧತೆ 
  • ಮಕ್ಕಳಿಗೆ ಹೆಚ್ಚು ಅಪಾಯಕಾರಿಯಾಗಿದೆ  ಕೊರೋನಾ 3ನೆ ಅಲೆ
  •  3 - 4 ದಿನಗಳಲ್ಲಿ ಟಾಸ್ಕ್ ಫೋರ್ಸ್ ರಚನೆ

ಬೆಂಗಳೂರು (ಮೇ.11):  ರಾಜ್ಯದಲ್ಲಿ ಕೊರೋನಾ 3ನೇ ಅಲೆಗೆ ಸಿದ್ಧತೆ ಮಾಡುತ್ತಿದ್ದು, ಇದು ಮಕ್ಕಳಿಗೆ ಹೆಚ್ಚು ಅಪಾಯಕಾರಿಯಾಗಿದೆ ಎಂದು ಸಚಿವ ಆರ್.ಅಶೋಕ್ ಹೇಳಿದರು.

ಬೆಂಗಳೂರಿನಲ್ಲಿಂದು  ಮಾತನಾಡಿದ ಸಚಿವ ಆರ್‌. ಅಶೋಕ್  ರಾಜ್ಯದಲ್ಲಿ ಈಗಾಗಲೇ ಕೊರೋನಾ ಅಪಾಯಕಾರಿ ಮಟ್ಟದಲ್ಲಿದೆ.  3ನೇ ಅಲೆಗೆ ನಾವು ಸಿದ್ಧತೆ ಮಾಡುತ್ತಿದ್ದೇವೆ. 3 ನೇ ಅಲೆ ಮಕ್ಕಳಿಗೆ ಹೆಚ್ಚು ಅಪಾಯ ಎಂದು ತಜ್ಞರು ಹೇಳಿದ್ದಾರೆ. ಈ ನಿಟ್ಟಿನಲ್ಲಿ ವಿಶೇಷ ನಿಗಾ ವಹಿಸುವಲ್ಲಿ ಕಾರ್ಯಪ್ರವೃತ್ತರಾಗುವುದಾಗಿ ಅಶೋಕ್ ಹೇಳಿದ್ದಾರೆ. 

ನಿಮ್ಮನೆಯಲ್ಲಿ ಪುಟ್ಟ ಮಕ್ಕಳಿದ್ರೆ ಎಚ್ಚರ : ಅವ್ರನ್ನ ಹೆಚ್ಚಾಗಿ ಕಾಡುತ್ತಿದೆ ಮಹಾಮಾರಿ

ಹೀಗಾಗಿ 3 - 4 ದಿನಗಳಲ್ಲಿ ಟಾಸ್ಕ್ ಫೋರ್ಸ್ ರಚನೆ ಮಾಡುತ್ತೇವೆ. ಪ್ರತಿ ಜಿಲ್ಲೆಯಲ್ಲಿ ಮಕ್ಕಳಿಗೆ ಪ್ರತ್ಯೇಕ ಆರೈಕೆ ಕೇಂದ್ರ ಪ್ರಾರಂಭ ಮಾಡುತ್ತೇವೆ. ಈ‌ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳಲು ಡಿಸಿಗಳಿಗೆ ಎರಡು ದಿನಗಳಲ್ಲಿ ಪತ್ರ ಬರೆಯುತ್ತೇನೆ ಎಂದು ಆರ್‌. ಅಶೋಕ್ ಹೇಳಿದರು. 

ಕೋವಿಡ್‌ಗೆ ಪೋಷಕರ ಕಳಕೊಂಡ ಮಕ್ಕಳಿಗಾಗಿ ವಿಶೇಷ ಕಾರ್ಯಪಡೆ! .

ಕಂದಾಯ ಇಲಾಖೆಯಿಂದ ಪ್ರತಿ ಜಿಲ್ಲೆಗಳಲ್ಲಿ ಆರೈಕೆ ಕೇಂದ್ರ ಸ್ಥಾಪನೆಗೆ ಕ್ರಮ ತೆಗೆದುಕೊಳ್ಳುತ್ತೇವೆ. ಅಧಿಕಾರಿಗಳಿಗೆ ಪತ್ರ ಬರೆದು ಸೂಚನೆ ಕೊಡುತ್ತೇನೆ ಎಂದು ಸಚಿವ ಅಶೋಕ್ ಹೇಳಿದರು.  

ಈಗಾಗಲೇ 2ನೇ ಅಲೆಯಲ್ಲಿಯೂ ಕೂಡ ಅತ್ಯಧಿಕ ಪ್ರಮಾಣದಲ್ಲಿ ಮಕ್ಕಳಲ್ಲಿ ಸೋಂಕು ಪತ್ತೆಯಾಗುತ್ತಿದೆ. ದಿನದಿನವೂ ಸೋಂಕಿತ ಮಕ್ಕಳ ಸಂಖ್ಯೆ ಹೆಚ್ಚು ಹೆಚ್ಚೇ ದಾಖಲಾಗುತ್ತಿದೆ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

click me!