ಕೋವಿಡ್‌ ವೇಳೆ ಸುಲಿಗೆ ಮಾಡಿದ ಖಾಸಗಿ ಆಸ್ಪತ್ರೆಗಳಿಗೆ ನೋಟಿಸ್‌: ಸಚಿವ ಸುಧಾಕರ್

By Govindaraj SFirst Published Aug 22, 2022, 3:30 AM IST
Highlights

ಆಯುಷ್ಮಾನ್‌ ಭಾರತ್‌-ಆರೋಗ್ಯ ಕರ್ನಾಟಕ ಯೋಜನೆಯಡಿ ಸರ್ಕಾರದಿಂದ ಹಣ ಪಡೆಯುವುದರ ಜೊತೆಗೆ ಕೋವಿಡ್‌ ರೋಗಿಗಳಿಂದಲೂ ಶುಲ್ಕ ವಸೂಲಿ ಮಾಡಿದ ಆಸ್ಪತ್ರೆಗಳಿಗೆ ನೋಟಿಸ್‌ ಜಾರಿ ಮಾಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್‌ ಹೇಳಿದ್ದಾರೆ.
 

ಬೆಂಗಳೂರು (ಆ.22): ಆಯುಷ್ಮಾನ್‌ ಭಾರತ್‌-ಆರೋಗ್ಯ ಕರ್ನಾಟಕ ಯೋಜನೆಯಡಿ ಸರ್ಕಾರದಿಂದ ಹಣ ಪಡೆಯುವುದರ ಜೊತೆಗೆ ಕೋವಿಡ್‌ ರೋಗಿಗಳಿಂದಲೂ ಶುಲ್ಕ ವಸೂಲಿ ಮಾಡಿದ ಆಸ್ಪತ್ರೆಗಳಿಗೆ ನೋಟಿಸ್‌ ಜಾರಿ ಮಾಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್‌ ಹೇಳಿದ್ದಾರೆ.  ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸುಧಾಕರ್‌, 577 ಖಾಸಗಿ ಆಸ್ಪತ್ರೆಗಳಿಗೆ ನೋಟಿಸ್‌ ನೀಡಲಾಗಿದೆ. ಒಟ್ಟು 18.87 ಕೋಟಿ ರು. ಹಣವನ್ನು ಖಾಸಗಿ ಆಸ್ಪತ್ರೆಗಳು ಹೆಚ್ಚುವರಿಯಾಗಿ ಪಡೆದಿರುವುದು ತಿಳಿದು ಬಂದಿದೆ. ಈ ಪೈಕಿ ಈಗಾಗಲೇ 1.58 ಕೋಟಿ ರು. ಹಣವನ್ನು ರೋಗಿಗಳ ಕುಟುಂಬಕ್ಕೆ ಹಿಂದಿರುಗಿಸಲಾಗಿದೆ. 

ಕೆಲ ಪ್ರಕರಣಗಳಲ್ಲಿ ಹೆಚ್ಚಿನ ಪರಿಶೀಲನೆಗಾಗಿ ದೂರುಗಳನ್ನು ಜಿಲ್ಲಾ ಮಟ್ಟದ ಕುಂದು ಕೊರತೆ ಸಮಿತಿಗೆ ವರ್ಗಾಯಿಸಲಾಗಿದೆ ಎಂದು ತಿಳಿಸಿದರು. ಹೆಚ್ಚುವರಿ ಹಣ ವಸೂಲಿ ಮಾಡಿದ ಆಸ್ಪತ್ರೆಗಳಿಗೆ ನೋಟಿಸ್‌ ನೀಡಿ 403 ರೋಗಿಗಳ 1.58 ಕೋಟಿ ರು. ಹಣವನ್ನು ರೋಗಿಗಳ ಕುಟುಂಬಕ್ಕೆ ಮರಳಿಸಿ ಕ್ರಮ ಕೈಗೊಳ್ಳಲಾಗಿದೆ. ಇದು ಖಾಸಗಿ ಆಸ್ಪತ್ರೆಗಳಿಗೆ ಸರ್ಕಾರ ನೀಡಿರುವ ಸ್ಪಷ್ಟಎಚ್ಚರಿಕೆ ಎಂದರು.

ಶಿಕ್ಷಣದ ಅಭಿವೃದ್ಧಿಗೆ ಸರ್ಕಾರದ ಆದ್ಯತೆ: ಸಚಿವ ಸುಧಾಕರ್‌

ಆಯುಷ್ಮಾನ್‌ ಭಾರತ್‌-ಆರೋಗ್ಯ ಕರ್ನಾಟಕ ಯೋಜನೆಯಡಿ, ರೆಫರಲ್‌ ಆಧಾರದಲ್ಲಿ ಕೋವಿಡ್‌ ರೋಗಿಗಳಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳಲಾಗಿತ್ತು. ರೋಗಿಗಳ ಚಿಕಿತ್ಸಾ ವೆಚ್ಚವನ್ನು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ನಿಂದ ಭರಿಸಲಾಗುತ್ತದೆ. ಆದರೆ ಕೆಲ ಖಾಸಗಿ ಆಸ್ಪತ್ರೆಗಳು ರೋಗಿಗಳಿಂದ ಶುಲ್ಕ ವಸೂಲಿ ಮಾಡುವುದರ ಜೊತೆಗೆ, ಟ್ರಸ್ಟ್‌ನಿಂದಲೂ ಹಣ ಪಡೆದುಕೊಂಡಿವೆ ಎಂದು ಮಾಹಿತಿ ನೀಡಿದರು.

ನೈಸರ್ಗಿಕ ಕೃಷಿಗೆ ಆದ್ಯತೆ ನೀಡಲಿ: ಜನರ ಆರೋಗ್ಯವನ್ನು ನೈಸರ್ಗಿಕವಾಗಿ ಕಾಪಾಡುವತ್ತ ಗಮನ ಹರಿಸಬೇಕು. ಕೀಟನಾಶಕ, ರಾಸಾಯನಿಕ ಗೊಬ್ಬರಗಳ ಬಳಕೆ ಕಡಿಮೆ ಮಾಡಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದರು. ತಾಲೂಕಿನ ಮೋಟ್ಲೂರು ಗ್ರಾಮದಲ್ಲಿ ಭಾನುವಾರ ಆಯೋಜಿಸಿದ್ದ ಒನ್‌ ಹೆಲ್ತ್‌ ಟ್ರಸ್ವ್‌ ನೂತನ ಕ್ಯಾಂಪಸ್‌ಗೆ ಭೂಮಿಪೂಜೆ ನೆರವೇರಿಸಿದ ನಂತರ ಮಾತನಾಡಿದ ಅವರು, ಟಿಬಿ, ಮಲೇರಿಯಾ ಮುಂತಾದ ಹಲವಾರು ಜಾಗತಿಕ ಸವಾಲುಗಳನ್ನು ಎದುರಿಸಲು ಒನ್‌ ಹೆಲ್ತ್‌ ಟ್ರಸ್ವ್‌ ನಡೆಸುತ್ತಿರುವ ಸಂಶೋಧನೆ ಶ್ಲಾಘನೀಯ ಎಂದರು.

ಗ್ರಾಮೀಣರಿಗೆ ಉತ್ತಮ ಆರೋಗ್ಯ ನೀಡುವ ಗುರಿ: ಸಚಿವ ಸುಧಾಕರ್‌

ನೈಸರ್ಗಿಕ ಕೃಷಿಗೆ ಆದ್ಯತೆ ನೀಡಿ: ರೈತರು ನೈಸರ್ಗಿಕ ಕೃಷಿಯತ್ತ ಗಮನಹರಿಸಬೇಕು. ಇತ್ತೀಚಿನ ದಿನಗಳಲ್ಲಿ ಕ್ಯಾನ್ಸರ್‌ ನಂತಹ ಕಾಯಿಲೆಗಳು ಅಧಿಕವಾಗುತ್ತಿರುವುದರ ಹಿಂದೆ ಇರುವ ಸಮಸ್ಯೆಗಳನ್ನು ಕಂಡುಹಿಡಿದು, ಅದಕ್ಕೆ ಪರಿಹಾರ ಸೂಚಿಸುವ ಮೂಲಕ ಜನರ ಆರೋಗ್ಯಕರ ಜೀವನಕ್ಕೆ ಸಂಸ್ಥೆ ಪೂರಕವಾಗಿ ಕಾರ್ಯನಿರ್ವಹಿಸಬೇಕೆಂದು ಸಲಹೆ ನೀಡಿದರು. ಮಣ್ಣಿನ ಸಂರಕ್ಷಣೆ ಕುರಿತು ಸಂಶೋಧನೆಯಾಗಬೇಕು, ಮುಂದಿನ 18 ತಿಂಗಳಲ್ಲಿ ಕ್ಯಾಂಪಸ್‌ ಪೂರ್ಣ ಪ್ರಮಾಣದಲ್ಲಿ ಸಿದ್ಧಪಡಿಸಲಾಗುವುದು. ಇದಕ್ಕೆ ಅಗತ್ಯವಿರುವ ಎಲ್ಲ ಸಹಕಾರ ನೀಡಲು ಸರ್ಕಾರ ಸಿದ್ಧವಾಗಿದ್ದು, ಸ್ಥಳೀಯ ಮುಖಂಡರು ಮತ್ತು ಸಾರ್ವಜನಿಕರು ಸಹಕಾರ ನೀಡುವಂತೆ ಅವರು ಕೋರಿದರು.

click me!