
ಬೆಂಗಳೂರು (ಏ.29): ಕೊರೊನಾ ಮಹಾಮಾರಿ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸಾವು ನೋವುಗಳ ಸಂಖ್ಯೆಯೂ ಅತ್ಯಧಿಕ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಇತ್ತ ಕೊರೋನಾ ಹೆಚ್ಚಳ ಹಿನ್ನೆಲೆ ದೆಹಲಿಯಲ್ಲಿ ಕನ್ನಡಿಗರ ಪಾಡು ಕೇಳುವವರೇ ಇಲ್ಲದಂತಾಗಿದೆ.
ದೆಹಲಿಯಲ್ಲಿ ಕೊರೊನಾದಿಂದ ಕನ್ನಡಿಗರು ಪ್ರಾಣಕಳೆದುಕೊಳ್ಳುತ್ತಿದ್ದಾರೆ. ಕೊರೋನಾ ಬಂದರೆ ಸೂಕ್ತ ಸಮಯದಲ್ಲಿ ಚಿಕಿತ್ಸೆ, ಆಸ್ಪತ್ರೆ ಯಾವುದೂ ಸಿಗುತ್ತಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ.
ನಿನ್ನೆಯಷ್ಟೆ ಇಬ್ಬರು ಕನ್ನಡಿಗರು ದೆಹಲಿಯಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಈ ನಿಟ್ಟಿನಲ್ಲಿ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರಕ್ಕೆ ಮನವಿ ದೆಹಲಿ ಕನ್ನಡಿಗರು ಮನವಿ ಮಾಡುತ್ತಿದ್ದಾರೆ.
ಬೆಡ್ ಸಿಗದೆ ಆ್ಯಂಬುಲೆನ್ಸ್‌ನಲ್ಲಿ ನರಳಾಡಿ ಜೀವ ಬಿಟ್ಟ ವೃದ್ಧೆ ...
ದೆಹಲಿಯಲ್ಲಿರುವ ಕರ್ನಾಟಕ ಭವನಗಳನ್ನು ಕೋವಿಡ್ ಕೇರ್ ಸೆಂಟರ್ ಆಗಿ ಪರಿವರ್ತಿಸಿ. ಕೊರೊನಾ ಹಿನ್ನೆಲೆ ಕರ್ನಾಟಕ ಭವನಕ್ಕೆ ಯಾರೂ ಆಗಮಿಸುವುದಿಲ್ಲ. ಈ ನಿಟ್ಟಿನಲ್ಲಿ ಸೂಕ್ತ ವ್ಯವಸ್ಥೆ ಕಲ್ಪಿಸಬೇಕೆಂದು ಮನವಿ ಮಾಡಿದ್ದಾರೆ.
ದುಡಿಮೆಗಾಗಿ ಎರಡು ಸಾವಿರಾರು ಕಿಲೋ ಮೀಟರ್ ದೂರದಿಂದ ಬಂದಿದ್ದು, ಕರ್ನಾಟಕ ಸರ್ಕಾರ ದೆಹಲಿ ಕನ್ನಡಿಗರ ಕಷ್ಟಕ್ಕೆ ಸ್ಪಂದಿಸಲಿ ಎಂದು ಕೋರಿದ್ದಾರೆ.
ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್ ನ್ಯೂಸ್ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ