ಪ್ರಧಾನಿ ನರೇಂದ್ರ ಮೋದಿ ರಾಜ್ಯ ಪ್ರವಾಸಕ್ಕೆ 3 ದಿನಗಳು ಬಾಕಿ ಇರುವಂತೆ ಪೊಲೀಸ್ ಇಲಾಖೆಯ ಆದೇಶವೊಂದು ಗೊಂದಲಕ್ಕೆ ಎಡೆಮಾಡಿಕೊಟ್ಟಿದೆ. ಜೊತೆಗೆ ಮೈಸೂರಿನ ಮೋದಿ ಕಾರ್ಯಕ್ರಮಕ್ಕೆ ಎರಡು ಡೋಸ್ ಸರ್ಟಿಫಿಕೇಟ್ ಸಾಕು. ಬೆಂಗಳೂರಿನ ಮೋದಿ ಕಾರ್ಯಕ್ರಮಕ್ಕೆ ಕೋವಿಡ್ ಟೆಸ್ಟ್ ಕಡ್ಡಾಯ ಎಂಬ ರೂಲ್ಸ್ ಗೊಂದಲ ಸೃಷ್ಟಿಸಿದೆ.
ಬೆಂಗಳೂರು (ಜೂ.18): ಪ್ರಧಾನಿ ನರೇಂದ್ರ ಮೋದಿ ರಾಜ್ಯ ಪ್ರವಾಸಕ್ಕೆ 3 ದಿನಗಳು ಬಾಕಿ ಇರುವಂತೆ ಪೊಲೀಸ್ ಇಲಾಖೆಯ ಆದೇಶವೊಂದು ಗೊಂದಲಕ್ಕೆ ಎಡೆಮಾಡಿಕೊಟ್ಟಿದೆ. ಜೊತೆಗೆ ಮೈಸೂರಿನ ಮೋದಿ ಕಾರ್ಯಕ್ರಮಕ್ಕೆ ಎರಡು ಡೋಸ್ ಸರ್ಟಿಫಿಕೇಟ್ ಸಾಕು. ಬೆಂಗಳೂರಿನ ಮೋದಿ ಕಾರ್ಯಕ್ರಮಕ್ಕೆ ಕೋವಿಡ್ ಟೆಸ್ಟ್ ಕಡ್ಡಾಯ ಎಂಬ ರೂಲ್ಸ್ ಗೊಂದಲ ಸೃಷ್ಟಿಸಿದೆ.
ಮೋದಿ ರಾಜ್ಯ ಪ್ರವಾಸ ಕೋವಿಡ್ ಪರೀಕ್ಷೆಯ ಗೊಂದಲ ತಂದಿಟ್ಟಿದ್ದು, ರಾಜ್ಯಪಾಲರು, ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಸಚಿವರು, ಶಾಸಕರು, ಬಿಜೆಪಿ ಮುಖಂಡರು, ಸಾರ್ವಜನಿಕರು ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಬೇಕೆಂಬ ಗೊಂದಲ ಉಂಟಾಗಿದೆ. ಪೊಲೀಸ್ ಇಲಾಖೆ ಪ್ರಧಾನಿ ಕಾರ್ಯಕ್ರಮದಲ್ಲಿ ಕರ್ತವ್ಯಕ್ಕೆ ಹಾಜರಾಗುವ ಅಧಿಕಾರಿ ಸಿಬ್ಬಂದಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಎಂಬ ಆದೇಶ ಮಾಡಿದೆ. ಅದೇ ಆದೇಶವನ್ನೂ ಮಾಧ್ಯಮದವರು ಪಾಲಿಸಬೇಕೆಂದು ವಾರ್ತಾ ಇಲಾಖೆಯಿಂದ ಪ್ರಕಟಣೆ ಹೊರಡಿಸಲಾಗಿದೆ.
ಮೋದಿ ಮೈಸೂರು ಭೇಟಿ ವೇಳೆ ದಸರಾ ರೀತಿ ದೀಪಾಲಂಕಾರ: ಸಚಿವ ಎಸ್.ಟಿ. ಸೋಮಶೇಖರ್
ಬೆಂಗಳೂರಿನಲ್ಲಿ ಪೂರ್ವ ಸಿದ್ಧತೆ ಪರಿಶೀಲಿಸಿದ ಸಚಿವರು: ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಕರ್ನಾಟಕ ಪ್ರವಾಸ ಕೈಗೊಂಡಿದ್ದು, ಇದೇ 20ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಕೊಮ್ಮಘಟ್ಟದಲ್ಲಿ ನಡೆಯಲಿರುವ ಸಾರ್ವಜನಿಕ ಸಭೆ ಮತ್ತು ಬೆಂಗಳೂರು ವಿವಿ ಆವರಣದಲ್ಲಿ ಅವರು ಉದ್ಘಾಟಿಸಲಿರುವ 'ಬೇಸ್' ವಿವಿ ಕ್ಯಾಂಪಸ್ ಆವರಣದಲ್ಲಿ ನಡೆಯುತ್ತಿರುವ ಪೂರ್ವ ಸಿದ್ಧತೆಗಳನ್ನು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಮತ್ತು ವಸತಿ ಸಚಿವ ಸೋಮಣ್ಣ ಶುಕ್ರವಾರ ಪರಿಶೀಲಿಸಿದರು.
ಮೋದಿ ಕರ್ನಾಟಕ ಪ್ರವಾಸ, ಪ್ರಧಾನಿ ಕಾರ್ಯಾಲಯದಿಂದ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ
ಮೊದಲು ಜ್ಞಾನಭಾರತಿ ಆವರಣದ ಬಿ.ಆರ್.ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ವಿವಿ ಕ್ಯಾಂಪಸ್ಸಿಗೆ ತೆರಳಿದ ಸಚಿವರು, ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ್, ಕುಲಪತಿ ಡಾ.ಭಾನುಮೂರ್ತಿ, ಕುಲಸಚಿವೆ ಶೋಭಾ ಮತ್ತಿತರರೊಂದಿಗೆ ಸಭೆ ನಡೆಸಿ, ಸೂಚನೆಗಳನ್ನು ನೀಡಿದರು. ಸೋಮವಾರ ಮಧ್ಯಾಹ್ನ ಪ್ರಧಾನಿಗಳಿಂದ ಉದ್ಘಾಟನೆ ಕಾಣಲಿರುವ ಕ್ಯಾಂಪಸ್ಸನ್ನು ಸಚಿವರು ವೀಕ್ಷಿಸಿದರು. ಜತೆಗೆ, ಪ್ರಧಾನಿಯವರು ವಿವಿ ಸಿಬ್ಬಂದಿ ಜತೆ ಮಾತನಾಡಲಿರುವ ಕೊಠಡಿಯನ್ನು ಪರಿಶೀಲಿಸಿದರು. ನಂತರ, ಕೊಮ್ಮಘಟ್ಟಕ್ಕೆ ತೆರಳಿದ ಸಚಿವರಿಬ್ಬರೂ, ಅಲ್ಲಿ ಉಪನಗರ ರೈಲು ಯೋಜನೆ ಉದ್ಘಾಟನೆ ನಿಮಿತ್ತ ನಡೆಯಲಿರುವ ಸಾರ್ವಜನಿಕ ಸಮಾರಂಭದ ಸ್ಥಳವನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಹಲವು ಅಧಿಕಾರಿಗಳು ಇದ್ದು, ಅಗತ್ಯ ಮಾಹಿತಿ ನೀಡಿದರು.