ದಸರಾ: ಸಂಪ್ರದಾಯ ಬಿಡೋದಿಲ್ಲ, ಆದ್ರೆ ವೈಭವ ಇರೋದಿಲ್ಲ ಎಂದ ಸಿಟಿ ರವಿ

By Suvarna NewsFirst Published Aug 25, 2020, 4:41 PM IST
Highlights

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಹೆಚ್ಚುತ್ತಿರುವುದರಿಂದ ಈ ಬಾರಿ ದಸರಾ ಆಚರಣೆ ಬಗ್ಗೆ ಸಚಿವ ಸಿಟಿ ರವಿ ಅವರು ಮಾತನಾಡಿದ್ದು, ಅದು ಈ ಕೆಳಗಿನಂತಿದೆ.

ಬೆಂಗಳೂರು, (ಆ.25):  ಈ ಬಾರಿ ಮೈಸೂರು ದಸರಾವನ್ನು ಸರಳವಾಗಿ ಆಚರಣೆ ನಿರ್ಧಾರ ಮಾಡಲಾಗಿದೆ ಎಂದು ಪ್ರವಾಸೋದ್ಯಮ ಮತ್ತು ಕನ್ನಡ ಸಂಸ್ಕೃತಿ ಇಲಾಖೆ ಸಚಿವ ಸಿಟಿ ರವಿ ಹೇಳಿದ್ದಾರೆ. 

ಈ ಬಗ್ಗೆ ಇಂದು (ಮಂಗಳವಾರ) ವಿಧಾನಸೌಧದಲ್ಲಿ ಮಾತನಾಡಿದ ಅವರು, ಸಂಪ್ರದಾಯ ಬಿಡೋದಿಲ್ಲ. ಆದ್ರೆ, ಈ ಬಾರಿಯ ದಸರಾ ವೈಭವಯುತವಾಗಿ ಇರುವುದಿಲ್ಲ. ಈ ಬಗ್ಗೆ ಕೆಲವೇ ದಿನಗಳಲ್ಲಿ ಸಿಎಂ ಉನ್ನತ ಮಟ್ಟದ ಸಭೆ ನಡೆಯಲಿದೆ ಎಂದು ಸ್ಪಷ್ಟಪಡಿಸಿದರು.

ಈ ಬಾರಿ ಹೇಗಿರಲಿದೆ ದಸರಾ ಆಚರಣೆ ?

ದಸರಾ ಉದ್ಘಾಟನೆ ಯಾರನ್ನು ಆಹ್ವಾನಿಸಬೇಕು ಎಂಬುದರ ಬಗ್ಗೆ ಸಿಎಂ ಉನ್ನತ ಮಟ್ಟದಲ್ಲಿ ತೀರ್ಮಾನ ಆಗಲಿದೆ ಎಂದರು.

"

ಕೋವಿಡ್ 19 ಸೋಂಕು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಈ ಬಾರಿ ದಸರಾವನ್ನು ಸರಳವಾಗಿ, ಸಂಪ್ರದಾಯಗಳಿಗೆ ಅಡ್ಡಿಯಾಗದಂತೆ ಆಚರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದು ಈಗಾಗಲೇ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರೇ ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.

ಸರಳವಾಗಿ ಆಚರಣೆ ಇದ್ದರೂ ಪ್ರತಿ ವರ್ಷ ದಸದಾ ವೇಳೆ ಏನೆಲ್ಲಾ ಸಂಪ್ರದಾಯಗಳು ನಡೆಯುತ್ತಿದ್ದವೋ ಅವುಗಳೆಲ್ಲ ನಡೆಯಲಿವೆ. ಆದ್ರೆ, ಈ ಬಗ್ಗೆ ಇನ್ನೂ ಅಂತಿಮ ನಿರ್ಧಾರವನ್ನು ಸರ್ಕಾರ ಕೈಗೊಂಡಿಲ್ಲ.

click me!