Karnataka Covid-19 Cases: ಕರ್ನಾಟಕದಲ್ಲಿ Covid-19 ಮತ್ತೆ ಏರಿಕೆ; 5 ಹೊಸ ಕೇಸ್ ದಾಖಲು, ಬೆಂಗಳೂರಿನಲ್ಲಿ ಒಂದು ಸಾವು!

Published : May 24, 2025, 09:12 PM ISTUpdated : May 24, 2025, 09:51 PM IST
karnataka bengaluru covid report

ಸಾರಾಂಶ

ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳು ಮತ್ತೆ ಏರಿಕೆ ಕಾಣುತ್ತಿದ್ದು, ಇಂದು ಹೊಸದಾಗಿ 5 ಪಾಸಿಟಿವ್ ಕೇಸ್‌ಗಳು ದಾಖಲಾಗಿವೆ. ಬೆಂಗಳೂರಿನಲ್ಲಿ 32 ಸಕ್ರಿಯ ಪ್ರಕರಣಗಳು ದೃಢಪಟ್ಟಿದ್ದು, ಒಬ್ಬ ವ್ಯಕ್ತಿ ಮೃತಪಟ್ಟಿದ್ದಾರೆ. ಆರೋಗ್ಯ ಇಲಾಖೆ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಲು ಸೂಚಿಸಿದೆ.

ಬೆಂಗಳೂರು (ಮೇ.24): ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳು ಮತ್ತೆ ಏರಿಕೆ ಕಾಣುತ್ತಿದ್ದು, ಇಂದು ಹೊಸದಾಗಿ 5 ಪಾಸಿಟಿವ್ ಕೇಸ್‌ಗಳು ದಾಖಲಾಗಿವೆ. ಈ ಪೈಕಿ ಬೆಂಗಳೂರಿನಲ್ಲಿ 32 ಸಕ್ರಿಯ ಪ್ರಕರಣಗಳು ದೃಢಪಟ್ಟಿದ್ದು, ಬೆಂಗಳೂರು ಗ್ರಾಮಾಂತರದಲ್ಲಿ ಒಂದು ಕೇಸ್ ವರದಿಯಾಗಿದೆ. ಒಟ್ಟಾರೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 38ಕ್ಕೆ ಏರಿಕೆಯಾಗಿದೆ.

ಅಲ್ಲದೆ, ಬೆಂಗಳೂರಿನಲ್ಲಿ ಕೋವಿಡ್-19 ಸೋಂಕಿನಿಂದ ಒಬ್ಬ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ದೃಢಪಡಿಸಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮತ್ತು ಸ್ಯಾನಿಟೈಸರ್ ಬಳಸುವುದು ಸೇರಿದಂತೆ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಲು ಆರೋಗ್ಯ ಇಲಾಖೆ ಸೂಚಿಸಿದೆ.

ಕರ್ನಾಟಕದಲ್ಲಿ ಕೊವಿಡ್‌ಗೆ ಮೊದಲ ಬಲಿ:

ಕರ್ನಾಟಕದಲ್ಲಿ ಕೊವಿಡ್-19 ಗೆ ಮೊದಲ ಬಲಿಯಾಗಿ 85 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಉಸಿರಾಟದ ಸಮಸ್ಯೆ ಹಾಗೂ ಇತರೆ ಖಾಯಿಲೆಗಳಿಂದ ಬಳಲುತ್ತಿದ್ದ ಈ ವ್ಯಕ್ತಿ, ಕೊಮಾರ್ಬಿಡ್ ಲಕ್ಷಣಗಳನ್ನು ಹೊಂದಿದ್ದರು. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೂ, ಚಿಕಿತ್ಸೆ ಫಲಕಾರಿಯಾಗದೇ ಅವರು ಕೊನೆಯುಸಿರೆಳೆದಿದ್ದಾರೆ.

ಕೊರೊನಾ ತಡೆಗಟ್ಟಲು ಎಲ್ಲರೂ ಜಾಗರೂಕರಾಗಿರಿ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ: ಬಿ.ವೈ.ವಿಜಯೇಂದ್ರ ಟೀಕೆ
ಕರ್ನಾಟಕದಲ್ಲಿ ಶೇ.63 ಭ್ರಷ್ಟಾಚಾರ: ಸಿಬಿಐ ತನಿಖೆಗೆ ಒತ್ತಾಯಿಸಿದ ಆರ್‌.ಅಶೋಕ್‌