
ಬೆಂಗಳೂರು(ಜು.17): ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಕರೋನಾ ಇನ್ನು ಆರು-ಏಳು ತಿಂಗಳ ನಂತರ ತನ್ನ ಗರಿಷ್ಠ ಮಟ್ಟಮಟ್ಟಲಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ. ತಜ್ಞರ ವರದಿ ಆಧರಿಸಿ ಅವರು ಈ ಹೇಳಿಕೆ ನೀಡಿದ್ದಾರೆ.
"
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ತಜ್ಞರ ಪ್ರಕಾರ ಸೋಂಕು ತನ್ನ ತಾರಕ ಮಟ್ಟತಲುಪಲು 6-7 ತಿಂಗಳು ಆಗಲಿದೆ. ಹೀಗಾಗಿ, ಎಚ್ಚರಿಕೆಯಿಂದ ಇರಬೇಕಾದ ಅನಿವಾರ್ಯತೆಯಿದೆ. ಕೊರೋನಾ ಸೋಂಕು ಬೆಂಗಳೂರು ಮಾತ್ರವಲ್ಲ. ಇಡೀ ಪ್ರಪಂಚದಲ್ಲಿ ಇದೆ. ಸೋಂಕು ಮುಕ್ತವಾಗಿ ವ್ಯವಸ್ಥೆ ಸಹಜ ಸ್ಥಿತಿಗೆ ಮರಳುವುದಕ್ಕೆ ಸ್ವಲ್ಪ ಕಾಲಾವಕಾಶ ಬೇಕಾಗಲಿದೆ’ ಎಂದು ತಿಳಿಸಿದರು.
ಕರ್ತವ್ಯ ಬಹಿಷ್ಕರಿಸಿದ ಆಯುಷ್ ವೈದ್ಯರು: 2000 ಸರ್ಕಾರಿ ವೈದ್ಯರಿಂದ ರಾಜೀನಾಮೆ
ರಾಜ್ಯದಲ್ಲಿ ಕೊರೋನಾ ಸೆಪ್ಟೆಂಬರ್ ಅಂತ್ಯ ಅಥವಾ ಅಕ್ಟೋಬರ್‌ನಲ್ಲಿ ತನ್ನ ಉಚ್ಛ್ರಾಯ ಸ್ಥಿತಿ ಮುಟ್ಟಲಿದೆ. ಆದರೂ, ಈ ವೈರಾಣು 2021ರ ಮಾಚ್‌ರ್‍ವರೆಗೂ ರಾಜ್ಯವನ್ನು ಕಾಡಲಿದೆ. ಈ ಅವಧಿಯಲ್ಲಿ ರಾಜ್ಯದ ಸುಮಾರು 32 ಲಕ್ಷ ಜನ ಸೋಂಕಿಗೆ ಗುರಿಯಾಗಲಿದ್ದಾರೆ’ ಎಂದು ತಜ್ಞರು ಅಂದಾಜಿಸಿದ್ದನ್ನು ಈ ಸಂದರ್ಭದಲ್ಲಿ ಸ್ಮರಿಸಬಹುದಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ