ಚನ್ನಪಟ್ಟಣ ಉಪಚುನಾವಣೆಯಲ್ಲಿ ಸಿ.ಪಿ. ಯೋಗೇಶ್ವರ್ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಿದ್ದಾರೆ ಎಂಬ ಹೆಚ್.ಡಿ. ಕುಮಾರಸ್ವಾಮಿ ಅವರ ಹೇಳಿಕೆಗೆ ಯೋಗೇಶ್ವರ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಯಾವುದೇ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದು, ಎನ್‌ಡಿಎ ಟಿಕೆಟ್‌ನಿಂದ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ. ಆದರೆ, ಕುಮಾರಸ್ವಾಮಿ ಟಿಕೆಟ್ ನಿರಾಕರಿಸಿದ ಬೆನ್ನಲ್ಲಿಯೇ ಬಂಡಾಯವಾಗಿ ಸ್ಪರ್ಧೆ ಮಾಡಲು ಮುಂದಾಗಿದ್ದಾರೆ.
ಬೆಂಗಳೂರು (ಅ.21): ಚನ್ನಪಟ್ಟಣ ಉಪಚುನಾವಣೆಯಲ್ಲಿ ಸಿ.ಪಿ. ಯೋಗೇಶ್ವರ್ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಿದ್ದಾರೆ ಎಂಬ ಹೆಚ್.ಡಿ. ಕುಮಾರಸ್ವಾಮಿ ಅವರ ಹೇಳಿಕೆಗೆ ಯೋಗೇಶ್ವರ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಯಾವುದೇ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದು, ಎನ್‌ಡಿಎ ಟಿಕೆಟ್‌ನಿಂದ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ. ಆದರೆ, ಕುಮಾರಸ್ವಾಮಿ ಟಿಕೆಟ್ ನಿರಾಕರಿಸಿದ ಬೆನ್ನಲ್ಲಿಯೇ ಬಂಡಾಯವಾಗಿ ಸ್ಪರ್ಧೆ ಮಾಡಲು ಮುಂದಾಗಿದ್ದಾರೆ. ಇದಕ್ಕಾಗಿ ಬಿಜೆಪಿ ಎಂಎಲ್‌ಸಿ ಸ್ಥಾನಕ್ಕೂ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.
ಚನ್ನಪಟ್ಟಣ ಉಪ ಚುನಾವಣೆ ಇದೀಗ ಮೂರು ಪಕ್ಷಗಳು ಪ್ರತಿಷ್ಠೆಯಾಗಿ ತೆಗೆದುಕೊಂಡಿವೆ. ಆದರೆ, ಇದರಲ್ಲಿ ಬಿಜೆಪಿ ನಾಯಕು ಅದು ಜೆಡಿಎಸ್ ಕ್ಷೇತ್ರವಾಗಿದ್ದು, ಅಲ್ಲಿ ಅಭ್ಯರ್ಥಿಯನ್ನು ಜೆಡಿಎಸ್ ವರಿಷ್ಠ ಕುಮಾರಸ್ವಾಮಿ ಅವರೇ ಘೋಷಣೆ ಮಾಡಲಿದ್ದಾರೆ ಎಂದು ಹೇಳಿದ್ದಾರೆ. ಆದರೆ, ಟಿಕೆಟ್ ಘೋಷಣೆಗೆ ಮುನ್ನ ಎನ್‌ಡಿಎ ಟಿಕೆಟ್ ಆಕಾಂಕ್ಷಿ ಆಗಿದ್ದ ಸ್ಥಳೀಯ ನಾಯಕ ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಅವರು ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಿದ್ದಾರೆ ಎಂದು ಹೇಳಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿ.ಪಿ. ಯೋಗೇಶ್ವರ್ ಕುಮಾರಸ್ವಾಮಿ ನನ್ನ ಮೇಲೆ ಅನಾವಶ್ಯಕವಾಗಿ ಆರೋಪ ಮಾಡುವ ಅಗತ್ಯ ಇಲ್ಲ. ಅವರು ಟಿಕೆಟ್ ಕೊಡದಿದ್ರೆ ಅವರ ಮಗನಿಗೇ ಕೊಡಲಿ. ಆದರೆ, ಕಾಂಗ್ರೆಸ್ ನಾಯಕರ ಭೇಟಿ ಮಾಡಿದ್ದೆ ಅಂತ ಅನಾವಶ್ಯಕ ಆರೋಪ ಮಾಡೋದು ಬೇಡ. ನಾನು ಇಲ್ಲಿಯವರೆಗೆ ಕಾಂಗ್ರೆಸ್ ನ ಯಾವ ನಾಯಕರನ್ನೂ ಭೇಟಿ ಮಾಡಿಲ್ಲ. ಭೇಟಿ ಮಾಡಿದರೂ ತಪ್ಪೇನಿಲ್ಲ ಆದರೆ ಇಲ್ಲೀವರೆಗೆ ಯಾರನ್ನೂ ಭೇಟಿ ಮಾಡಿಲ್ಲ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಯೋಗೇಶ್ವರ್ ಕಾಂಗ್ರೆಸ್ ಜತೆ ಸಂಪರ್ಕದಲ್ಲಿದ್ದಾರೆ: ಎಚ್.ಡಿ.ಕುಮಾರಸ್ವಾಮಿ
ಚನ್ನಪಟ್ಟಣ ಸ್ಪರ್ಧೆ ವಿಚಾರದ ಬಗ್ಗೆ ಮಾತನಾಡಿ, ನನಗೆ ಅವಕಾಶ ಕೊಟ್ರೆ ಎನ್‌ಡಿಎ ಅಭ್ಯರ್ಥಿ ಆಗ್ತೇನೆ, ಅವಕಾಶ ಸಿಗಬೇಕು ಅಷ್ಟೇ. ನಾನು ನನ್ನ ಪಾರ್ಟನರ್ ಕುಮಾರಸ್ವಾಮಿ ಮೂರು ದಿನಗಳಿಂದ ಚರ್ಚೆ ಮಾಡುತ್ತಿದ್ದೇವೆ. ನಾನು ಜೆಡಿಎಸ್ ನಿಂದ ನಿಂತರೆ ಕಷ್ಟ ಆಗುತ್ತದೆ. ಬಿಜೆಪಿಯಿಂದಲೇ ನಿಲ್ಲಬೇಕು ಅಂತ ಆಸೆ ಇದೆ. ಅವರು ಆಗಲ್ಲ ಅಂತಿದ್ದಾರೆ. ಕುಮಾರಸ್ವಾಮಿ ಅವರಿಗೆ ಅವರ ಮಗನಿಗೆ ಟಿಕೆಟ್ ಕೊಡಬೇಕು ಅಂತ ಇದೆ. ಅವರ ಮನಸಲ್ಲಿ ನಿಖಿಲ್ ಗೆ ಕೊಡಬೇಕು ಅಂತ ಇದೆ. ಅವರ ಮನಸಲ್ಲೇ ಆಥರ ಇದ್ದರೆ ಏನ್ ಮಾಡೋಕ್ಕಾಗುತ್ತೆ ಎಂದು ಹೇಳಿದರು.
ಚನ್ನಪಟ್ಟಣದಲ್ಲಿ ಕುಮಾರಸ್ವಾಮಿ ಅವರಿಗೆ ಅವರ ಕುಟುಂಬದವರಿಗೇ ಟಿಕೆಟ್ ಕೊಡಬೇಕು ಅಂತ ಇದೆ. ತಮ್ಮ ರಾಜೀನಾಮೆ ಕೊಟ್ಟ ನಂತರದಿಂದಲೂ ನಿಖಿಲ್ ಗೆ ನಿಲ್ಲಿಸಬೇಕು ಅಂತ ಕುಮಾರಸ್ವಾಮಿ ಮನಸಲ್ಲಿದೆ. ಅದಕ್ಕಾಗಿ ಅವರು ಪ್ರಯತ್ನನೂ ಮಾಡುತ್ತಿದ್ದರು. ಅವರ ಮನಸಲ್ಲಿ ಆ ಭಾವನೆ ಇರುವಾಗ ಏನು ಬಲವಂತ ಮಾಡೋಕ್ಕೆ ಆಗುತ್ತೆ, ನೋಡೋಣ ಏನಾಗುತ್ತೆ ಅಂತ. ಜೆಡಿಎಸ್ ಚಿಹ್ನೆಯಡಿ ಸ್ಪರ್ಧೆ ಮಾಡಿ ಅಂತ ಅವರು ಮುಕ್ತವಾಗಿ ಏನೂ ಹೇಳಿಲ್ಲ. ಅವರ ಪಕ್ಷದ ಮುಖಂಡರು ಬಂದಾಗ ಹೇಳಿದ್ದಾರೆ. ನಾನು ನನ್ನ ತಾಲ್ಲೂಕಿನ ಜನರ ಜತೆಗೂ ಇದರ ಬಗ್ಗೆ ಚರ್ಚೆ ಮಾಡಿದೆ, ಬಹಳ ಭಿನ್ನಾಭಿಪ್ರಾಯ ಬಂತು. ಇಷ್ಟು ವರ್ಷ ವಿರೋಧ ಮಾಡಿಕೊಂಡು ಬಂದಿದ್ದೀರಿ, ಈಗ ಮೈತ್ರಿ ಆಗಿದೆ. ಈಗ ಅನಾವಶ್ಯಕವಾಗಿ ಜೆಡಿಎಸ್‌ಗೆ ಹೋಗೋದು ಬೇಡ ಅಂತ ತಾಲ್ಲೂಕಿನಲ್ಲಿ ಅಭಿಪ್ರಾಯ ಬಂದಿದೆ ಎಂದು ಹೇಳಿದರು.
ಇದನ್ನೂ ಓದಿ: ಸಂಡೂರು ಸಮರದಲ್ಲಿ ರೆಡ್ಡಿ Vs ನಾಗ ಯುದ್ಧ; ಮಾಜಿ ಗುರು-ಶಿಷ್ಯರ ಕಾಳಗದಲ್ಲಿ ಗೆಲುವು ಯಾರಿಗೆ?
ಅಫಿಡವಿಟ್ ಸಿದ್ಧತೆ ಮಾಡಿಕೊಳ್ಳುತ್ತಿರುವ ಸಿಪಿವೈ: ಚನ್ನಪಟ್ಟಣ ಉಪ ಚುನಾವಣೆಗೆ ಯಾವುದೇ ಪಕ್ಷದಿಂದ ಆದರೂ ಸರಿ ತನಗೆ ಟಿಕೆಟ್ ಕೊಡಲಿ. ಒಂದು ವೇಳೆ ಟಿಕೆಟ್ ಕೊಡದಿದ್ದರೂ ಸರಿ ನಾನು ಮಾತ್ರ ಸ್ಪರ್ಧೆಯಿಂದ ಹಿಂದೆ ಸರಿಯುವುದಿಲ್ಲ. ನಾನು ಬಂಡಾಯವಾಗಿ ಆದರೂ ಸರಿ ಸ್ಪರ್ಧೆ ಮಾಡಿಯೇ ಮಾಡ್ತೀನಿ ಎಂದು ಪಣ ತೊಟ್ಟು ನಿಂತಿರುವ ಸಿ.ಪಿ. ಯೋಗೇಶ್ವರ್ ಅವರು ಈಗಾಗಲೇ ವಕೀಲರನ್ನು ಭೇಟಿ ಮಾಡಿ, ಚುನಾವಣೆಗೆ ಸ್ಪರ್ಧೆ ಮಾಡಲು ಅಫಿಡವಿಟ್ ಸಲ್ಲಿಕೆಗೆ ಬೇಕಾದ ಎಲ್ಲ ದಾಖಲೆಗಳನ್ನು ಮಾಡಿಕೊಳ್ಳುತ್ತಿದ್ದಾರೆ. ಇನ್ನು ಅವರು ಬಯಸಿದಂತೆ ಬಿಜೆಪಿ-ಜೆಡಿಎಸ್ ಮೈತ್ರಿಯಾಗಿದ್ದು, ಬಿಜೆಪಿ ಪಕ್ಷದಡಿಯೇ ಎನ್‌ಡಿಎ ಟಿಕೆಟ್ ಕೊಟ್ಟರೆ ಸ್ಪರ್ಧೆ ಮಾಡಲು ಉತ್ಸುಕನಾಗಿದ್ದೆನು. ಆದರೆ, ಕುಮಾರಸ್ವಾಮಿ ಟಿಕೆಟ್ ನೀಡುವುದಿಲ್ಲವೆಂದು ತಿಳಿಯುತ್ತಿದ್ದಂತೆ ಬಂಡಾಯವಾಗಿ ಸ್ಪರ್ಧೆ ಮಾಡಲು ನಿರ್ಧರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಎಂಎಲ್‌ಸಿ ಸ್ಥಾನಕ್ಕೂ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.