ನವೆಂಬರ್ 1ರಿಂದ ನವೆಂಬರ್ 17ರವರೆಗೆ ಮಾತ್ರ ಪಟಾಕಿ ಮಾರಾಟ ಮಳಿಗೆಯನ್ನು ತಾತ್ಕಾಲಿಕವಾಗಿ ತೆರೆಯಲು ಅವಕಾಶ ನೀಡಲಾಗಿದೆ. ಅಧಿಕೃತ ಪರವಾನಗಿಯನ್ನು ಪಡೆದ ಮಾರಾಟಗಾರರು ನಿಗದಿತ ಸ್ಥಳ ಮತ್ತು ಅನುಮತಿ ಪಡೆದಿರುವ ದಿನಗಳಲ್ಲಿ ಮಾತ್ರ ಪಟಾಕಿ ಮಾರಾಟ ಮಾಡಬಹುದು.
ಬೆಂಗಳೂರು (ಅ. 15): ಕೋವಿಡ್-19 ವ್ಯಾಪಕವಾಗಿ ಹಬ್ಬಿರುವ ಸಂದರ್ಭದಲ್ಲಿ ಬರುತ್ತಿರುವ ದೀಪಾವಳಿ ಹಬ್ಬ (ನವೆಂಬರ್ 14 ರಿಂದ 17)ದ ಪ್ರಮುಖ ಆಕರ್ಷಣೆಯಾಗಿರುವ ಪಟಾಕಿ ಮಾರಾಟ ಯಾವ ರೀತಿ ಇರಬೇಕು ಎಂದು ಮಾರ್ಗಸೂಚಿಗಳನ್ನು ರಾಜ್ಯದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ್ ಬಿಡುಗಡೆ ಮಾಡಿದ್ದಾರೆ.
ನವೆಂಬರ್ 1ರಿಂದ ನವೆಂಬರ್ 17ರವರೆಗೆ ಮಾತ್ರ ಪಟಾಕಿ ಮಾರಾಟ ಮಳಿಗೆಯನ್ನು ತಾತ್ಕಾಲಿಕವಾಗಿ ತೆರೆಯಲು ಅವಕಾಶ ನೀಡಲಾಗಿದೆ. ಅಧಿಕೃತ ಪರವಾನಗಿಯನ್ನು ಪಡೆದ ಮಾರಾಟಗಾರರು ನಿಗದಿತ ಸ್ಥಳ ಮತ್ತು ಅನುಮತಿ ಪಡೆದಿರುವ ದಿನಗಳಲ್ಲಿ ಮಾತ್ರ ಪಟಾಕಿ ಮಾರಾಟ ಮಾಡಬಹುದು. ಪರವಾನಗಿ ಪತ್ರವನ್ನು ಸಾರ್ವಜನಿಕರ ಕಣ್ಣಿಗೆ ಬೀಳುವಂತೆ ಪ್ರದರ್ಶಿಸಬೇಕು ಹಾಗು ಪರವಾನಗಿ ಪಡೆದುಕೊಂಡಿರುವವರು ಮಳಿಗೆಯಲ್ಲಿ ಕಡ್ಡಾಯವಾಗಿ ಇರಬೇಕು ಎಂಬ ಷರತ್ತನ್ನು ವಿಧಿಸಲಾಗಿದೆ.
undefined
PF ಚಂದಾದಾರರಿಗೆ ದೀಪಾವಳಿಗೆ ಸಿಗಲಿದೆ ಸಿಹಿ!
ಸಾರ್ವಜನಿಕ ಪ್ರದೇಶಗಳಿಂದ ದೂರವಿರುವ ಮೈದಾನ ಅಥವಾ ಬಯಲು ಪ್ರದೇಶದಲ್ಲಿ ಪಟಾಕಿ ಮಳಿಗೆ ತೆರೆಯಲು ಅನುಮತಿ ನೀಡಬೇಕು. ಎರಡು ಮಳಿಗೆಗಳ ಮಧ್ಯೆ ಆರು ಮೀಟರ್ ಆಂತರವಿರಬೇಕು. ಪಟಾಕಿ ಅಂಗಡಿಗಳಲ್ಲಿ ಎರಡು ಕಡೆಯಿಂದ ಸರಾಗವಾಗಿ ಗಾಳಿ ಆಡುವಂತಿರಬೇಕು. ಜನದಟ್ಟಣೆ ಆಗದಂತೆ ನೋಡಿಕೊಳ್ಳಬೇಕು. ಮಾರಾಟ ಮಳಿಗೆಗಳ ಸುತ್ತಮುತ್ತ ದಿನನಿತ್ಯ ಸ್ಯಾನಿಟೈಸೇಷನ್ ಮಾಡಬೇಕು, ಗ್ರಾಹಕರಿಗೆ ಸ್ಯಾನಿಟೈಸರ್ ಮತ್ತು ಥರ್ಮಲ್ ಸ್ಕಿ್ರನಿಂಗ್, ಆರು ಆಡಿಗಳ ಸಾಮಾಜಿಕ ಅಂತರ ಮತ್ತು ಮುಖಗವಸು ಬಳಕೆ ಕಡ್ಡಾಯವಾಗಿ ಇರಬೇಕು ಎಂದು ಮುಖ್ಯಕಾರ್ಯದರ್ಶಿಗಳು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.