ಕಾಂಗ್ರೆಸ್‌ ಮುಖವಾಡ ಕಳಚಿ: ರವಿಕುಮಾರ್‌ಗೆ ಪಿಎಂ ಮೋದಿ ಸೂಚನೆ!

By Suvarna NewsFirst Published Jan 4, 2020, 9:15 AM IST
Highlights

ಪೌರತ್ವ ಕಾಯ್ದೆ ಜಾಗೃತಿ ಬಗ್ಗೆ ಮಾಹಿತಿ ಕೇಳಿದ ಪ್ರಧಾನಿ| ಕಾಂಗ್ರೆಸ್‌ ಮುಖವಾಡ ಕಳಚಿ: ರವಿಕುಮಾರ್‌ಗೆ ಸೂಚನೆ

ಬೆಂಗಳೂರು[ಜ.04]: ಎರಡು ದಿನಗಳ ಭೇಟಿಗಾಗಿ ರಾಜ್ಯಕ್ಕೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ದೆಹಲಿಗೆ ವಾಪಸಾಗುವ ವೇಳೆ ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಜಾಗೃತಿ ಮೂಡಿಸುವ ಆಡಳಿತಾರೂಢ ಬಿಜೆಪಿಯ ಅಭಿಯಾನದ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ.

ಅಲ್ಲದೆ, ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ರಾಜ್ಯದಲ್ಲಿ ಕಾಂಗ್ರೆಸ್‌ ಮುಖವಾಡವನ್ನು ಕಳಚುವಂತೆ ಪಕ್ಷದ ನಾಯಕರಿಗೆ ಸೂಚನೆ ನೀಡಿದ್ದಾರೆ.

ರಾಜ್ಯ ಬಿಜೆಪಿ ಹಮ್ಮಿಕೊಂಡಿರುವ ಪೌರತ್ವ ತಿದ್ದುಪಡಿ ಕಾಯ್ದೆಯ ಅಭಿಯಾನದ ಸಂಚಾಲಕರೂ ಆಗಿರುವ ಪಕ್ಷದ ಪ್ರಧಾನ ಕಾರ್ಯದರ್ಶಿ ಎನ್‌.ರವಿಕುಮಾರ್‌ ಅವರನ್ನು ಯಲಹಂಕ ವಾಯುನೆಲೆಯಿಂದ ನಿರ್ಗಮಿಸುವ ವೇಳೆ ಪ್ರಧಾನಿ ಮೋದಿ ಅವರು ಅಭಿಯಾನದ ಕುರಿತು ಪ್ರಶ್ನಿಸಿದರು. ಈ ವೇಳೆ ರವಿಕುಮಾರ್‌ ಅವರು, ಅಭಿಯಾನವನ್ನು ಯಶಸ್ವಿಯಾಗಿ ಹಮ್ಮಿಕೊಂಡಿದ್ದೇವೆ. ರಾಜ್ಯದ ಎಲ್ಲ ಜಿಲ್ಲೆ, ತಾಲೂಕುಗಳಲ್ಲದೆ ಗ್ರಾಮಗಳ ಮಟ್ಟದಲ್ಲೂ ಕಾಯ್ದೆ ಕುರಿತು ಅರಿವು ಮೂಡಿಸುವ ಪ್ರಯತ್ನ ಮಾಡುತ್ತಿದ್ದೇವೆ. ಅದರಲ್ಲಿ ಸಾಕಷ್ಟುಯಶಸ್ವಿಯಾಗಿದ್ದೇವೆ ಎಂದು ವಿವರಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಪ್ರಧಾನಿ ಮೋದಿ, ಅಭಿಯಾನವನ್ನು ಇನ್ನಷ್ಟುಪರಿಣಾಮಕಾರಿಯಾಗಿ ನಡೆಸುವ ಮೂಲಕ ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಅಪಪ್ರಚಾರ ನಡೆಸುತ್ತಿರುವ ಕಾಂಗ್ರೆಸ್‌ನ ಮುಖವಾಡವನ್ನು ಕಳಚಿ ಎಂದು ಸೂಚಿಸಿದರು ಎನ್ನಲಾಗಿದೆ.

click me!