ನಾಳೆ ಅಹಮದಾಬಾದ್ ನಲ್ಲಿ ನಡೆಯಲಿರುವ ವಿಶ್ವಕಪ್ ಏಕದಿನ ಫೈನಲ್ ಪಂದ್ಯಕ್ಕೆ ಭಾರತ-ಆಸ್ಟ್ರೇಲಿಯಾ ಮುಖಾಮುಖಿಯಾಗಿದ್ದು, ಭಾರತದ ಗೆಲುವಿಗಾಗಿ ಇಂದು ಬೆಳಗಾವಿಯಲ್ಲಿ ವಿಘ್ನೇಶ್ವರನಿಗೆ ಕರವೇ ಕಾರ್ಯಕರ್ತರಿಂದ ವಿಶೇಷ ಪೂಜೆ ಸಲ್ಲಿಸಲಾಯಿತು. ಗೆದ್ದು ಬಾ ಇಂಡಿಯಾ ಎಂದು ಘೋಷಣೆ ಕೂಗಿ ಶುಭ ಕೋರಿದ ಕರವೇ ಕಾರ್ಯಕರ್ತರು.
ಬೆಳಗಾವಿ (ನ.18): ಕಿವೀಸ್ ತಂಡವನ್ನು ಮಣಿಸಿ ಟೀಂ ಇಂಡಿಯಾ ವಿಶ್ವಕಪ್ ಫೈನಲ್‌ಗೆ ಲಗ್ಗೆ ಇಟ್ಟಿದೆ. ನಾಳೆ ಭಾನುವಾರ(ನ.19) ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ ವಿಶ್ವಕಪ್ ಫೈನಲ್‌ನ ಹೈವೋಲ್ಟೇಜ್ ಪಂದ್ಯ ಕಣ್ತುಂಬಿಕೊಳ್ಳಲು ಕ್ರಿಕೆಟ್ ಪ್ರೇಮಿಗಳ ಕಾತುರದಿಂದ ಕಾಯುವಂತೆ ಮಾಡಿದೆ. ಭಾರತ ತಂಡ ಈ ಬಾರಿ ವಿಶ್ವಕಪ್ ಗೆಲ್ಲಲು ದೇಶಾದ್ಯಂತ ಕ್ರಿಕೆಟ್ ಪ್ರೇಮಿಗಳು ವಿಶೇಷ ಪೂಜೆ, ಹೋಮ ಹವನ ಮಾಡುತ್ತಿದ್ದಾರೆ.
ಭಾರತ ತಂಡ ವಿಶ್ವಕಪ್ ಫೈನಲ್ ಗೆಲುವಿಗಾಗಿ ಇಂದು ಬೆಳಗಾವಿಯಲ್ಲಿ ವಿಘ್ನೇಶ್ವರನಿಗೆ ಕರವೇ ಕಾರ್ಯಕರ್ತರಿಂದ ವಿಶೇಷ ಪೂಜೆ ಸಲ್ಲಿಸಲಾಯಿತು. ಬೆಳಗಾವಿ ಚೆನ್ನಮ್ಮ ವೃತ್ತದಲ್ಲಿರುವ ಗಣೇಶ ಮೂರ್ತಿಗೆ ಪೂಜೆ ಸಲ್ಲಿಸಿದ ಕರವೇ ಕಾರ್ಯಕರ್ತರು. ಕರ್ನಾಟಕದ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ದೀಪಕ್ ಗುಡಗನಟ್ಟಿ ನೇತೃತ್ವದಲ್ಲಿ ಕಾರ್ಯಕರ್ತರು ಪೂಜೆ ಸಲ್ಲಿಸಿದರು ಬಳಿಕ 'ಗೆದ್ದು ಬಾ ಭಾರತ' ಎಂದು ಜಯಘೋಷ ಕೂಗಿದರು.
ಫೈನಲ್ ಪಂದ್ಯದಲ್ಲಿ ಭಾರತ ಹೊಸ ಇತಿಹಾಸ ನಿರ್ಮಿಸುತ್ತೆ. ಸೋಲರಿಯದ ತಂಡ ಭಾರತ ಇದುವರೆಗೆ ಆಡಿದ ಎಲ್ಲ ಪಂದ್ಯಗಳಲ್ಲೂ ಗೆಲುವು ಸಾಧಿಸಿ ಅಧಿಕಾರಯುತವಾಗಿ ವಿಶ್ವಕಪ್ ಫೈನಲ್‌ಗೆ ಲಗ್ಗೆ ಇಟ್ಟಿದೆ ಈ ಬಾರಿ ವಿಶ್ವಕಪ್ ಭಾರತದ ಮುಡಿಗೇರಲಿದೆ ಎಂದ ಕರವೇ ಕಾರ್ಯಕರ್ತರು. ತಂಡದ ಎಲ್ಲಆಟಗಾರರ ಪರ ಘೋಷಣೆ ಕೂಗಿ ಟೀಂ ಇಂಡಿಯಾಗೆ ಕರವೇ ಕಾರ್ಯಕರ್ತರ ಚೀರ್ ಅಪ್ ಮಾಡಿದರು.