ನಾಳೆ ಭಾರತ-ಆಸ್ಟ್ರೇಲಿಯಾ ನಡುವೆ ನಡೆಯಲಿರುವ ವಿಶ್ವಕಪ್ ಫೈನಲ್ ಪಂದ್ಯ ರೋಚಕವಾಗಿರಲಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಸ್ಕ್ರೀನ್ ಅಳವಡಿಸುವುದಕ್ಕೆ ಪೊಲೀಸ್ ಅನುಮತಿ ಕಡ್ಡಾಯವಾಗಿದೆ. ಈ ಬಗ್ಗೆ ಎಲ್ಲ ಪೊಲೀಸ್ ಠಾಣೆಗಳಿಗೆ ನಗರ ಪೊಲೀಸ್ ಆಯುಕ್ತರು ಮೌಖಿಕ ಸೂಚನೆ ನೀಡಿದ್ದಾರೆ.
ಬೆಂಗಳೂರು (ನ.18) ನಾಳೆ ಭಾನುವಾರ(ನ.19) ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವೆ ಚಾಂಪಿಯನ್ ಪಟ್ಟಕ್ಕಾಗಿ ಪೈಪೋಟಿ ನಡೆಯಲಿರುವ ಹಿನ್ನೆಲೆ ನಗರದ ಬಹುತೇಕ ಕ್ಲಬ್ ಗಳಲ್ಲಿ ಸ್ಕ್ರೀನಿಂಗ್ ವ್ಯವಸ್ಥೆ ಮಾಡಲಾಗಿದೆ.
ನಗರದ ಬೌರಿಂಗ್ ಕ್ಲಬ್ ನಲ್ಲಿ ಬಿಗ್ ಸ್ಕ್ರೀನ್ ಹಾಕಲಾಗಿದೆ. ವಿಶ್ವಕಪ್ ಕ್ರಿಕೆಟ್ ಫೈನಲ್ ಪಂದ್ಯಾವಳಿ ಶುರುವಾದಾಗಿನಿಂದ ಸ್ಕ್ರೀನಿಂಗ್ ವ್ಯವಸ್ಥೆ ಮಾಡಲಾಗಿದೆ. ಇಲ್ಲಿ ಏಕಕಾಲಕ್ಕೆ 1000ಕ್ಕೂ ಹೆಚ್ಚು ಮಂದಿ ಕುಳಿತು ವೀಕ್ಷಿಸಬಹುದಾದಷ್ಟ ಆಸನದ ವ್ಯವಸ್ಥೆ ಇದೆ. ಕ್ಲಬ್ ಸದಸ್ಯರು, ಅವರ ಕುಟುಂಬದ ಸದಸ್ಯರ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗಿದೆ.
ಸಾರ್ವಜನಿಕ ಸ್ಥಳದಲ್ಲಿ ಸ್ಕ್ರೀನ್ ಅಳವಡಿಕೆಗೆ ಅನುಮತಿ ಕಡ್ಡಾಯ:
ನಾಳೆ ಭಾರತ-ಆಸ್ಟ್ರೇಲಿಯಾ ನಡುವೆ ನಡೆಯಲಿರುವ ವಿಶ್ವಕಪ್ ಫೈನಲ್ ಪಂದ್ಯ ರೋಚಕವಾಗಿರಲಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಸ್ಕ್ರೀನ್ ಅಳವಡಿಸುವುದಕ್ಕೆ ಪೊಲೀಸ್ ಅನುಮತಿ ಕಡ್ಡಾಯವಾಗಿದೆ. ಈ ಬಗ್ಗೆ ಎಲ್ಲ ಪೊಲೀಸ್ ಠಾಣೆಗಳಿಗೆ ಸೂಚನೆ ನೀಡಿರುವ ನಗರ ಪೊಲೀಸ್ ಆಯುಕ್ತರು, ಸಾರ್ವಜನಿಕ ಸ್ಥಳ, ಮೈದಾನಗಳಲ್ಲಿ ಸ್ಕ್ರೀನ್ ಅಳವಡಿಕೆ ಮುನ್ನ ಪಬ್ಲಿಕ್ ಆಕ್ಟಿವಿಟಿ ಅಡಿಯಲ್ಲಿ ಕಡ್ಡಾಯವಾಗಿ ಪೊಲೀಸರ ಅನುಮತಿ ಪಡೆದಿರಬೇಕು. ಸಾರ್ವಜನಿಕರ ಸುರಕ್ಷತೆ ದೃಷ್ಟಿಯಿಂದ ಅನುಮತಿ ಪಡೆಯಬೇಕು ಎಂದು ಹೇಳಿದ್ದಾರೆ. ಈಗಾಗಲೇ ಎಲ್ಲಾ ಪೊಲೀಸ್ ಠಾಣೆಗಳಿಗೂ ಮೌಖಿಕವಾಗಿ ಸೂಚಿಸಿದ ನಗರ ಪೊಲೀಸ್ ಆಯುಕ್ತರು.