
ಮಂಗಳೂರು (ಮಾ.11): ಪ್ರೊ.ಬಿ. ಕೃಷ್ಣಪ್ಪ ಅವರಿಂದ ಸ್ಥಾಪನೆಗೊಂಡು ನೋಂದಣಿಯಾಗಿರುವ ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ.ನಂ. 47 / 74-75)ಯು ಅಧಿಕೃತ ಸಂಘಟನೆ ಎಂಬುದಾಗಿ ನ್ಯಾಯಾಲಯ ಆದೇಶ ನೀಡಿದೆ. ಇನ್ನು ಮುಂದೆ ದಲಿತ ಸಂಘರ್ಷ ಸಮಿತಿ ಹೆಸರಿನಲ್ಲಿ ಯಾವುದೇ ಸಂಘಟನೆ ಕಾರ್ಯ ಚಟುವಟಿಕೆ ನಡೆಸಿದರೆ ರಾಜ್ಯಾದ್ಯಂತ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಪ್ರೊ.ಬಿ. ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಎಂ.ಗುರುಮೂರ್ತಿ ಶಿವಮೊಗ್ಗ ಹೇಳಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾವುದೇ ಹೊಸ ಸಂಘಟನೆ ದಲಿತ ಸಂಘರ್ಷ ಸಮಿತಿ ಹೆಸರು ಬಳಕೆ ಮಾಡದಂತೆ ಕೋರ್ಟ್ ಆದೇಶ ನೀಡಿದೆ ಎಂದರು.
ಇದನ್ನೂ ಓದಿ: ಎಸ್‌ಸಿಎಸ್‌ಪಿ/ಟಿಎಸ್‌ಪಿ ಅನುದಾನದ ದುರ್ಬಳಕೆ: ರಾಜ್ಯ ಸರ್ಕಾರದ ವಿರುದ್ಧ ತಿರುಗಿಬಿದ್ದ ದಲಿತ ಸಂಘಟನೆಗಳು!
ನೋಂದಣಿ ತಡೆಗೆ ಕೋರ್ಟ್ ಮೊರೆ:
ದಲಿತ ಸಂಘರ್ಷ ಸಮಿತಿ ಹೆಸರನ್ನು ಬಿಟ್ಟು ಬೇರೆ ಹೆಸರಿನೊಂದಿಗೆ ಸಂಘಟನೆ ಕಟ್ಟಿದರೆ ನಮ್ಮ ಅಭ್ಯಂತರವಿಲ್ಲ ಎಂದ ಗುರುಮೂರ್ತಿ, ಮುಂದಿನ ದಿನಗಳಲ್ಲಿ ಎಲ್ಲ ಜಿಲ್ಲೆಗಳ ನೋಂದಣಾಧಿಕಾರಿಗಳಿಗೆ ಅರ್ಜಿ ಸಲ್ಲಿಸಿ ದಸಂಸ ಹೆಸರಿನಲ್ಲಿ ನೋಂದಣಿಯಾದ ಸಂಘಟನೆಗಳ ಪಟ್ಟಿ ಪಡೆಯಲಿದ್ದೇವೆ. ಅವೆಲ್ಲವನ್ನೂ ವಜಾಗೊಳಿಸಲು ಹಾಗೂ ದಸಂಸ ಹೆಸರಿನಲ್ಲಿ ಯಾರೂ ಹೊಸದಾಗಿ ನೋಂದಣಿ ಮಾಡಬಾರದೆಂದು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಿದ್ದೇನೆ ಎಂದು ತಿಳಿಸಿದರು.
ದಲಿತ ಸಂಘರ್ಷ ಸಮಿತಿ ದ.ಕ. ಜಿಲ್ಲಾ ಉಸ್ತುವಾರಿ ಮಹಾಲಿಂಗ ಕೆ.ಕಡಬ, ಜಿಲ್ಲಾ ಸಂಚಾಲಕ ಕೃಷ್ಣಪ್ಪ ಸುಣ್ಣಾಜೆ ಕಡಬ, ಪದಾಧಿಕಾರಿಗಳಾದ ಅಣ್ಣು ಬೆಳ್ತಂಗಡಿ, ಬಾಬು ಎಲ್. ಮಂಗಳೂರು, ಮಹೇಶ್ ಪುತ್ತೂರು, ಸುಂದರ ನಿಡ್ಪಳ್ಳಿ, ಪುಟ್ಟಣ್ಣ ಬೆಳ್ತಂಗಡಿ, ಯಶೋಧಾ ಸುರತ್ಕಲ್, ಭಾಸ್ಕರ ಸುರತ್ಕಲ್ ಇದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ