
ಬೆಂಗಳೂರು (ನ.23): ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಯ ಮತ ಎಣಿಕೆ ದಿನದಂದು ಫಲಿತಾಂಶ ತೂಗುಯ್ಯಾಲೆಯಲ್ಲಿ ತೂಗುತ್ತಿದ್ದರಿಂದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪೂರ್ವ ನಿಗದಿಯಾಗಿದ್ದ ಕಾರ್ಯಕ್ರಮವನ್ನು ರದ್ದುಗೊಳಿಸಿ ಫಲಿತಾಂಶಕ್ಕಾಗಿ ಎದುರು ನೋಡುತ್ತಿದ್ದಾರೆ.
ರಾಜ್ಯದಲ್ಲಿ ಅತ್ಯಂತ ಕುತೂಹಲ ಕೆರಳಿಸಿರುವ ಚನ್ನಪಟ್ಟಣ ಉಪ ಚುನಾವಣೆ ಫಲಿತಾಂಶಕ್ಕಾಗಿ ಎದು ನೋಡುತ್ತಿದ್ದವರು ಇಂದು ಮತ ಎಣಿಕೆ ಕಾರ್ಯವನ್ನು ಎದುರು ನೋಡುತ್ತಿದ್ದಾರೆ. ಇನ್ನು ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಾನೇ ಅಭ್ಯರ್ಥಿ ಅಲ್ಲಿ ಸಿ.ಪಿ. ಯೋಗೇಶ್ವರ್ ಅವರು ಗೆದ್ದರೂ, ಸೋತರೂ ನನ್ನದೇ ಮುಖವೆಂದು ಡಿ.ಕೆ. ಶಿವಕುಮಾರ್ ಕೂಡ ಹೇಳಿದ್ದರು. ಹೀಗಾಗಿ, ಡಿ.ಕೆ. ಶಿವಕುಮಾರ್ ಕೂಡ ಚನ್ನಪಟ್ಟಣ ಉಪ ಚುನಾವಣೆ ಫಲಿತಾಂಶವನ್ನು ಎದುರು ನೋಡುತ್ತಿದ್ದಾರೆ. ಆದರೆ, ತಮ್ಮ ನಿರೀಕ್ಷೆಯಂತೆ ಫಲಿತಾಂಶ ಬರದ ಹಿನ್ನೆಲೆಯಲ್ಲಿ ಭಾರೀ ಕಳವಳಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಡಿ.ಕೆ. ಶಿವಕುಮಾರ್ ಅವರು ತಮ್ಮ ಪೂರ್ವ ನಿಗದಿತ ಕಾರ್ಯಕ್ರಮಕ್ಕೆ ತೆರಳದೇ ಫಳಿತಾಂಶವನ್ನೇ ಎದುರುನೋಡುತ್ತಾ ಕುಳಿತುಕೊಂಡರು.
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಇಂದು ಬೆಳಗ್ಗೆ 11 ಗಂಟೆಗೆ ನೆಲಮಂಗಲದಲ್ಲಿರುವ ಗಾಣಿಗ ಸಮುದಾಯದ ಮಠದ ಕಾರ್ಯಕ್ರಮಕ್ಕೆ ಅತಿಥಿಯಾಗಿ ಹೋಗಬೇಕಿದ್ದರು. ಆದರೆ, ತಾವೇ ಅಭ್ಯರ್ಥಿ ಎಂದು ಹೇಳಿಕೊಂಡಿದ್ದ ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆ ಮತ ಎಣಿಕೆ ಕಾರ್ಯದಲ್ಲಿ 7ನೇ ಸುತ್ತಿನವರೆಗೆ ನಿಖಿಲ್ ಕುಮಾರಸ್ವಾಮಿ ಭಾರೀ ಮುನ್ನಡೆ ಕಾಯ್ದುಕೊಂಡಿದ್ದರು. ಇನ್ನು ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ಅವರು ಹಿನ್ನಡೆ ಕಾಯ್ದುಕೊಂಡಿದ್ದರು. ಆದರೆ, ತಾವು ನಿರೀಕ್ಷಿಸಿದ ಫಲಿತಾಂಶ ಬರುತ್ತಿಲ್ಲವೆಂದು ಡಿ.ಕೆ. ಶಿವಕುಮಾರ್ ತಮ್ಮ ಪೂರ್ವ ನಿಗದಿತ ಕಾರ್ಯಕ್ರಮಕ್ಕೆ ತೆರಳದೇ ಕಾರ್ಯಕ್ರಮವನ್ನೇ ರದ್ದುಗೊಳಿಸಿದರು.
ಈ ಕುರಿತು ತಮ್ಮ ಆಪ್ತ ಕಾರ್ಯದರ್ಶಿ ಅವರಿಗೆ ಇಂದಿನ ಮಧ್ಯಾಹ್ನವರೆಗೆ ನಿಗದಿಯಾಗಿದ್ದ ಎಲ್ಲ ಕಾರ್ಯಕ್ರಮಗಳನ್ನು ರದ್ದುಗೊಳಿಸುವಂತೆ ಸೂಚನೆ ನೀಡಿ, ಮನೆಯಲ್ಲಿ ಕುಳಿತುಕೊಂಡು ಚುನಾವಣಾ ಫಲಿತಾಂಶವನ್ನು ವೀಕ್ಷಣೆ ಮಾಡುತ್ತಿದ್ದಾರೆ. ಇದಾದ ಕೆಲವೇ ಗಂಟೆಗಳಲ್ಲಿ 8ನೇ ಸುತ್ತಿನ ಮತ ಎಣಿಕೆ ಮುಕ್ತಾಯದ ವೇಳೆಗೆ (ಚನ್ನಪಟ್ಟಣದ ಸಿಟಿಯ ಮತಗಳ ಎಣಿಕೆ) ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ಅವರು ಬರೋಬ್ಬರಿ 11 ಸಾವಿರ ಮತಗಳ ಮುನ್ನಡೆಯನ್ನು ಕಾಯ್ದುಕೊಂಡರು. ಆಗ ಡಿ.ಕೆ. ಶಿವಕುಮಾರ್ ಮುಖದಲ್ಲಿ ಆತಂಕ ದೂರವಾಗಿದೆ ಎಂದು ತಿಳಿದುಬಂದಿದೆ. ಆದರೆ, ಫಲಿತಾಂಶ ಹೊರಬರುವವರೆಗೆ ಯಾವುದೇ ಕಾರ್ಯಕ್ರಮಗಳಿಗೆ ಹೋಗದಿರಲು ನಿರ್ಧರಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ