ಕಾವೇರಿ ನೀರು ನಿರ್ವಹಣೆ ಪ್ರಾಧಿಕಾರದಿಂದಲೂ ಕರ್ನಾಟಕಕ್ಕೆ ಶಾಕ್‌: 3,000 ಕ್ಯೂಸೆಕ್‌ ನೀರು ಹರಿಸಲು ಆದೇಶ

Published : Oct 13, 2023, 03:48 PM ISTUpdated : Oct 13, 2023, 03:56 PM IST
ಕಾವೇರಿ ನೀರು ನಿರ್ವಹಣೆ ಪ್ರಾಧಿಕಾರದಿಂದಲೂ ಕರ್ನಾಟಕಕ್ಕೆ ಶಾಕ್‌: 3,000 ಕ್ಯೂಸೆಕ್‌ ನೀರು ಹರಿಸಲು ಆದೇಶ

ಸಾರಾಂಶ

ಕರ್ನಾಟಕಕ್ಕೆ ಮತ್ತೆ ಶಾಕ್‌ ನೀಡಿದ ಸಿಡಬ್ಲ್ಯೂಎಂಎ.ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ತಲಾ 3,000 ಕ್ಯೂಸೆಕ್‌ ನೀರು ಹರಿಸುವಂತೆ ಆದೇಶ ಹೊರಡಿಸಲಾಗಿದೆ.

ನವದೆಹಲಿ (ಅ.13): ಕಾವೇರಿ ನೀರು ಹಂಚಿಕೆ ವಿವಾದದ ಕುರಿತು ವಿಚಾರಣೆ ಮಾಡಿದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದಿಂದಲೂ ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ತಲಾ 3,000 ಕ್ಯೂಸೆಕ್‌ ನೀರು ಹರಿಸುವಂತೆ ಆದೇಶ ಹೊರಡಿಸಲಾಗಿದೆ.

ನವದೆಹಲಿಯಲ್ಲಿ ಶುಕ್ರವಾರ ನಡೆದ ಕಾವೇರಿ ನೀರು ಹಂಚಿಕೆ ವಿಚಾರದ ಕುರಿತು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (ಸಿಡಬ್ಲ್ಯೂಎಂಎ) ಕರ್ನಾಟಕ್ಕೆ ಪುನಃ ಶಾಕ್‌ ನೀಡಿದೆ. ಕರ್ನಾಟಕದಲ್ಲಿ ತೀವರ ಬರಗಾಲ ಆವರಿಸಿದ್ದು, ಕುಡಿಯಲೂ ನೀರಿಲ್ಲವೆಂದು ವಾದ ಮಂಡಿಸಿದರೂ ಕೇಳದೇ ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ತಲಾ 3,000 ಕ್ಯೂಸೆಕ್‌ ನೀರನ್ನು ಹರಿಸುವಂತೆ ಆದೇಶವನ್ನು ಹೊರಡಿಸಿದೆ. ಇನ್ನು ಕಳೆದೆರಡು ದಿನಗಳ ಹಿಂದೆ ಕಾವೇರಿ ನೀರು ನಿಯಂತ್ರಣಾ ಸಮಿತಿ (ಸಿಡಬ್ಲ್ಯೂಆರ್‌ಸಿ)ಯು 3,000 ಕ್ಯೂಸೆಕ್‌ ನೀರು ಹರಿಸುವಂತೆ ಆದೇಶ ಕರ್ನಾಟಕಕ್ಕೆ ಆದೇಶ ನೀಡಲಾಗಿತ್ತು. ಈಗ (ಸಿಡಬ್ಲ್ಯೂಆರ್‌ಸಿ)ಯ ಆದೇಶವನ್ನು ಸಿಡಬ್ಲ್ಯೂಎಂಎ ಎತ್ತಿ ಹಿಡಿದಿದೆ. ಆದರೆ, ಇದರಿಂದ ಕರ್ನಾಟಕದ ಹೋರಾಟಕ್ಕೆ ತೀವ್ರ ಹಿನ್ನಡೆ ಉಂಟಾಗಿದೆ.

ತಮಿಳ್ನಾಡಿಗೆ ಮತ್ತೆ ಕಾವೇರಿ ನೀರು ಆದೇಶ ಆಘಾತಕಾರಿ: ಎಚ್‌.ಡಿ.ಕುಮಾರಸ್ವಾಮಿ

ಮುಂದಿನ 15 ದಿನಗಳ ಕಾಲ ನೀರು ಹಂಚಿಕೆ: ಕಾವೇರಿ ನೀರು ಬಿಡುಗಡೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಮ್ಮೆ ಆಘಾತ ಉಂಟಾಗಿದ್ದು, ಅ.16ರಿಂದ ಮತ್ತೆ 15 ದಿನಗಳ ಕಾಲ ತಮಿಳುನಾಡಿಗೆ ನಿತ್ಯ 3 ಸಾವಿರ ಕ್ಯುಸೆಕ್‌ನಂತೆ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರುವು ಆದೇಶ ನೀಡಿದೆ. ನವದೆಹಲಿಯ ಶುಕ್ರವಾರ ನಡೆದ ಕಾವೇರಿ ನೀರು ಪ್ರಾಧಿಕಾರದ ಸಭೆಯಲ್ಲಿ ಈ ಸಂಬಂಧ ಆದೇಶ ನೀಡಲಾಗಿದೆ.

ಕಾವೇರಿ ನೀರು ನಿಯಂತ್ರಣ ಸಮಿತಿಯಲ್ಲೂ ಹಿನ್ನಡೆ: ಕಳೆದೆರಡು ದಿನಗಳ ಹಿಂದೆ ಬುಧವಾರ ನಡೆದಿದ್ದ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆಯಲ್ಲಿ ವಾದ ಮಂಡನೆ ಮಾಡಿದ್ದ ಕರ್ನಾಟಕ ಪರ ಅಧಿಕಾರಿಗಳು, ರಾಜ್ಯದಲ್ಲಿ ಮುಂಗಾರು ಕೈ ಕೊಟ್ಟಿದ್ದು, ಕಾವೇರಿ ಕೊಳ್ಳದ ಜಲಾಶಯಗಳಲ್ಲಿ ನೀರಿನ ಕೊರತೆಯಿದೆ. ರಾಜ್ಯದಲ್ಲಿ ತೀವ್ರ ಬರದ ಪರಿಸ್ಥಿತಿಯಿದ್ದು, ಅ.10ರವರೆಗೆ ಕಾವೇರಿ ಕೊಳ್ಳದ ನಾಲ್ಕು ಜಲಾಶಯಗಳ ಒಳಹರಿವಿನಲ್ಲಿ ಶೇ.50.89ರಷ್ಟು ಕೊರತೆಯಾಗಿದೆ. ಜೊತೆಗೆ, ಮುಂದಿನ ದಿನಗಳಲ್ಲಿ ಈ ಭಾಗದ ಜನರಿಗೆ ಕುಡಿವ ನೀರಿಗೂ ಕೊರತೆಯಾಗುವ ಸಾಧ್ಯತೆಯಿದೆ. ಅಲ್ಲದೆ, ಜಲಾಶಯಗಳಿಗೆ ಒಳಹರಿವಿನ ಪ್ರಮಾಣ ಹೆಚ್ಚಾಗುವ ಯಾವುದೇ ಆಶಾಭಾವ ಇಲ್ಲ. ಹೀಗಾಗಿ, ತಮಿಳುನಾಡಿಗೆ ನೀರು ಬಿಡುಗಡೆ ಮಾಡುವ ಸ್ಥಿತಿಯಲ್ಲಿ ನಾವಿಲ್ಲ ಎಂದು ಕರ್ನಾಟದ ಅಧಿಕಾರಿಗಳು ವಾದಿಸಿದ್ದರು.

ಕನ್ನಡಿಗರಿಗೆ ಒಲಿಯದ ಕಾವೇರಿ: ಮುಂದಿನ 15 ದಿನ ತಮಿಳುನಾಡಿಗೆ 3,000 ಕ್ಯೂಸೆಕ್‌ ನೀರು ಹರಿಸಲು ಆದೇಶ

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ತಮಿಳುನಾಡು ಅಧಿಕಾರಿಗಳು, ಮುಂದಿನ 15 ದಿನಗಳವರೆಗೆ ನಿತ್ಯ 16,000 ಕ್ಯುಸೆಕ್‌ ನೀರು ಬಿಡುಗಡೆ ಮಾಡುವಂತೆ ಕರ್ನಾಟಕಕ್ಕೆ ಆದೇಶ ನೀಡಬೇಕು ಎಂದು ಆಗ್ರಹಿಸಿದರು. ಉಭಯ ರಾಜ್ಯಗಳ ವಾದ ಆಲಿಸಿದ ಸಮಿತಿಯ ಅಧಿಕಾರಿಗಳು, ಅ.16ರಿಂದ 15 ದಿನಗಳ ಕಾಲ ತಮಿಳುನಾಡಿಗೆ ನಿತ್ಯ 3 ಸಾವಿರ ಕ್ಯುಸೆಕ್‌ ನೀರು ಬಿಡುವಂತೆ ಆದೇಶ ನೀಡಿದರು. ಅ.13ರ ಶುಕ್ರವಾರ ಕಾವೇರಿ ನೀರು ನಿಯಂತ್ರಣ ಪ್ರಾಧಿಕಾರದ ಸಭೆ ನಿಗದಿಯಾಗಿದ್ದು, ನಿಯಂತ್ರಣ ಸಮಿತಿಯ ಆದೇಶವನ್ನು ಪ್ರಶ್ನಿಸಲು ಕರ್ನಾಟಕ ಸಿದ್ಧತೆ ನಡೆಸಿತ್ತು. ಆದರೆ, ಈ ಆದೇಶ ಬದಲಾಯಿಸುವಲ್ಲಿ ಕರ್ನಾಟಕ ವಿಫಲವಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ
ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್