
ನವದೆಹಲಿ(ಅ.11): ಕಾವೇರಿ ನೀರು ನಿಯಂತ್ರಣ ಸಮಿತಿ(ಸಿಡಬ್ಲ್ಯುಆರ್‌ಸಿ) ಮತ್ತೆ ಬುಧವಾರ ಸಭೆ ಸೇರಲಿದೆ. ಕಳೆದ ಬಾರಿ ತಮಿಳುನಾಡಿಗೆ 15 ದಿನ ನಿತ್ಯ 3 ಸಾವಿರ ಕ್ಯುಸೆಕ್ ನೀರು ಬಿಡುವಂತೆ ಆದೇಶಿಸಿದ್ದ ಸಮಿತಿ ಈ ಬಾರಿ ತನ್ನ ಆದೇಶವನ್ನು ಪರಿಷ್ಕರಿಸುವ ನಿರೀಕ್ಷೆ ಇದೆ.
ಮಧ್ಯಾಹ್ನ 2 ಗಂಟೆಗೆ ನಡೆಯಲಿರುವ ಈ ಸಭೆಯಲ್ಲಿ ಕರ್ನಾಟಕದ ಪರವಾಗಿ ಕಾವೇರಿ ನೀರಾವರಿ ನಿಗಮದ ಎಂ.ಡಿ. ಮಹೇಶ್ ಭಾಗಿಯಾಗಲಿದ್ದಾರೆ. ಕಾವೇರಿ ಜಲಾನಯನ ಪ್ರದೇಶದ ಹಲವು ತಾಲೂಕುಗಳಲ್ಲಿ ಬರ ಘೋಷಣೆಯಾಗಿರುವುದು ಸೇರಿ ರಾಜ್ಯದಲ್ಲಿ ನೀರಿನ ಕೊರತೆ ಕುರಿತು ಅಧಿಕಾರಿಗಳು ಮತ್ತೊಮ್ಮೆ ಸಭೆಯ ಗಮನಕ್ಕೆ ತರಲು ಅಗತ್ಯ ಸಿದ್ಧತೆ ಮಾಡಿಕೊಂಡಿದ್ದಾರೆ.
ಕಾವೇರಿ ಕಿಚ್ಚು: ಪ್ರಧಾನಿ ಒಂದು ರಾಜ್ಯದ ಪರ ಇರಲು ಸಾಧ್ಯವಿಲ್ಲ, ಸಂಸದೆ ಸುಮಲತಾ
ಕಾವೇರಿ ವಿವಾದ: ಪ್ರಧಾನಿ ಮೋದಿಗೆ ರಕ್ತದಲ್ಲಿ ಪತ್ರ
ಚಿಕ್ಕಬಳ್ಳಾಪುರ: ಕರ್ನಾಟಕ ರಕ್ಷಣಾ ವೇದಿಕೆಯ ಶಿವರಾಮೇಗೌಡರ ಬಣದ ವತಿಯಿಂದ ಕಾವೇರಿ ನದಿ ನೀರಿನ ವಿಚಾರದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಧ್ಯಪ್ರವೇಶಿಸಬೇಕೆಂದು ಒತಾಯಿಸಿ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ರಕ್ತದಲ್ಲಿ ಪತ್ರ ಬರೆಯುವ ಚಳವಳಿಯನ್ನು ಹಮ್ಮಿಕೊಂಡಿದ್ದರು.
ಕಾವೇರಿ ನೀರು ಹರಿಸುವ ಆದೇಶಕ್ಕೆ ವಿರೋಧ : ಕಾವೇರಿ ಕ್ರಿಯಾ ಸಮಿತಿ
ಇದಕ್ಕೂ ಮುನ್ನ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಎಂ.ಆರ್.ಲೋಕೇಶ್ ಮಾತನಾಡಿ, ಮುಂಗಾರು ಮಳೆ ಕೊರತೆಯಿಂದ ರಾಜ್ಯ ಭೀಕರ ಬರಗಾಲ ಬಂದು ಬೆಂದು ಹೋಗುತ್ತಿದೆ. ಕಾವೇರಿ ಕಣಿವೆಯ ಜಲಾಶಯಗಳಲ್ಲಿ ನೀರಿನ ಮಟ್ಟ ದಿನೇ ದಿನೇ ಕುಸಿಯುತ್ತಿದೆ. ಇಂತಹ ಸಂದಿಗ್ಧ ಸ್ಥಿತಿಯಲ್ಲಿ ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಸುತ್ತಿರುವುದು, ರೈತರ ಪಾಲಿಗೆ ನುಂಗಲಾರದ ತುತ್ತಾಗಿದೆ ಎಂದರು.
ಪ್ರಧಾನಿ ಮಧ್ಯೆಪ್ರವೇಶಿಸಲಿ
ಪ್ರಧಾನಿ ನರೇಂದ್ರ ಮೋದಿಯವರು ಮಧ್ಯಪ್ರವೇಶಿಸಿ ಕರ್ನಾಟಕ, ತಮಿಳುನಾಡು ಮುಖ್ಯಮಂತ್ರಿಗಳು ಹಾಗೂ ಸಂಸದರ ತುರ್ತು ಸಭೆ ನಡೆಸಿ, ನೀರಿನ ವಸ್ತುಸ್ಥಿತಿ ಅವಲೋಕಿಸಿ ಅನ್ಯಾಯ ಸರಿಪಡಿಸಬೇಕೆಂದು ಆಗ್ರಹಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ